BJP protest: ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ಮತ್ತು ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಮೊದಲ ಬಾರಿಗೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮೊದಲ ಹೋರಾಟ ನಡೆಸುತ್ತಿದೆ. ಇಂದು ಮತ್ತು ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ. ವಿದ್ಯುತ್ ಬೆಲೆ ಏರಿಕೆ, ಗೋಹತ್ಯೆ ನಿಷೇಧ ಕಾಯ್ದೆ ರದ್ದತಿ, ಹಾಲಿಗೆ ಪ್ರೋತ್ಸಾಹ ಧನ ಕಡಿತ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ ನಡೆಯಲಿದೆ.
ಇಂದು ಎಲ್ಲಾ ಜಿಲ್ಲಾ ಕೇಂದ್ರಗಳು, ನಾಳೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯಲಿದೆ. ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಪಂಚ ಗ್ಯಾರಂಟಿ ಯೋಜನೆ ಜಾರಿಯ ಭರವಸೆಯೊಂದಿಗೆ ಈ ಬಾರಿ ವಿಧಾನಸಭೆ ಚುನಾವಣೆಯನ್ನು ಎದುರಿಸಿದ್ದ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರಕ್ಕೆ ಬಂದು ಒಂದು ತಿಂಗಳು ಹತ್ತಿರವಾಗಿದೆ. ಈ ಬಾರಿ ಕಾಂಗ್ರೆಸ್ ನಿರೀಕ್ಷೆಗೂ ಮೀರಿದ ಗೆಲುವು ಸಾಧಿಸಿದ್ದು ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಇಷ್ಟು ದಿನ ಸುಮ್ಮನಿದ್ದ ಪ್ರಮುಖ ಪ್ರತಿಪಕ್ಷ ಕಲಮ ಪಡೆ ಇದೇ ಮೊದಲ ಬಾರಿಗೆ ಸರ್ಕಾರದ ವಿರುದ್ಧ ಹೋರಾಟಕ್ಕೆ ಇಳಿಯಲು ಸಜ್ಜಾಗಿದೆ.

ರಾಜ್ಯ ಸರ್ಕಾರದ ಜನ ವಿರೋಧಿ ನಿರ್ಧಾರಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಇಂದು ಮತ್ತು ನಾಳೆ ಪ್ರತಿಭಟನೆ ನಡೆಯಲಿದೆ ಎಂದು ವಿಧಾನ ಪರಿಷತ್ ಸದಸ್ಯ ಎನ್ ರವಿಕುಮಾರ್ ತಿಳಿಸಿದ್ದಾರೆ. ಬಿಜೆಪಿ ಸರ್ಕಾರ ಇದ್ದಾಗ ಹಾಲಿನ ಪ್ರೋತ್ಸಾಹಧನವನ್ನು ಪ್ರತಿ ಲೀಟರ್ ಗೆ 5 ರೂಪಾಯಿ ನೀಡುತ್ತಿತ್ತು. ಕಾಂಗ್ರೆಸ್ ಸರ್ಕಾರ ಅದರಲ್ಲಿ 1.5 ರೂಪಾಯಿ ಕಡಿಮೆ ಮಾಡಿದೆ.
ಇದರಿಂದ ಬಡ ರೈತರಿಗೆ ತೊಂದರೆಯಾಗಲಿದೆ ಎಂದು ಬಿಜೆಪಿ ದೂರಿದೆ. ಹೀಗಾಗಿ ರಾಜ್ಯದ ರೈತರ ಹಿತಾಸಕ್ತಿಯನ್ನು ಕಾಪಾಡಬೇಕು. ಹಾಲಿನ ಫ್ರೋತ್ಸಾಹಧನ ಕಡಿಮೆ ಮಾಡದಿರಲು ಒತ್ತಾಯಿಸಿದೆ. ಹೀಗೆ ನಾನಾ ಆರೋಪ ಮಾಡಿರುವ ಬಿಜೆಪಿ ಕಾಂಗ್ರೆಸ್ ವಿರುದ್ಧ ಪ್ರತಿಭಟನೆಯ ಅಖಾಡಕ್ಕೆ ಇಳಿಯಲು ಸಜ್ಜಾಗಿದೆ.
ಮೊನ್ನೆ 200 ಯುನಿಟ್‌ವರೆಗೆ ವಿದ್ಯುತ್ ಉಚಿತ ಎಂದಿದ್ದ ಕರ್ನಾಟಕ ರಾಜ್ಯದ ಸಿದ್ದರಾಮಯ್ಯ ಸರ್ಕಾರ, ಈಗ 80 ಯೂನಿಟ್‌ವರೆಗೆ ಎಂದು ಆದೇಶ ಹೊರಡಿಸಿ ಜನವಿರೋಧಿ ನೀತಿ ಪ್ರದರ್ಶಿಸಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್ ಅವರು ಆರೋಪಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗಗ್ನಾಥ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಮೂರು ಜನ ವಿರೋಧಿ ನಿರ್ಧಾರಗಳನ್ನು ವಾಪಸ್ ಪಡೆಯಲು ಆಗ್ರಹಿಸಿ ಬಿಜೆಪಿ ವತಿಯಿಂದ ಇಂದು ಮತ್ತು ನಾಳೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.
ವಿದ್ಯುತ್ ಶುಲ್ಕವನ್ನೂ ಏರಿಸಿದ್ದೀರಿ. ಒಂದು ಯೂನಿಟ್‌ಗೆ 70 ಪೈಸೆ ಹೆಚ್ಚಿಸಲಾಗಿದೆ. ಅಂದರೆ 80 ಯೂನಿಟ್‌ಗೆ 56 ರೂ. ಹೆಚ್ಚಿಸಿದಂತಾಗಿದೆ. ಹಾಗಿದ್ದರೆ ಸರ್ಕಾರ ಮಾಡಿದ್ದೇನು? ಸರ್ಕಾ ಒಂದೆಡೆ ಉಚಿತ ಎನ್ನುತ್ತದೆ. ಅದೇ ರೀತಿಯಲ್ಲಿ ಶುಲ್ಕ ಹೆಚ್ಚಿಸಿದೆ ಜನರಿಂದಲೇ ಮತ್ತೆ ವಸೂಲಾತಿ ಮಾಡುತ್ತಿದೆ. ಇದನ್ನು ಬಿಜೆಪಿ ಖಂಡಿಸುತ್ತದೆ. ಹೆಚ್ಚಿಸಿದ 70 ಪೈಸೆ ದರವನ್ನು ವಾಪಾಸ್ ಪಡೆಯಲು ಆಗ್ರಹಿಸುತ್ತದೆ ಎಂದು ತಿಳಿಸಿದರು.












Click it and Unblock the Notifications