Karnataka Bandh: "ಸಾರಿಗೆ ನೌಕರರ ಬೇಡಿಕೆ ಈಡೇರಿಸದಿದ್ರೆ ಕರ್ನಾಟಕ ಬಂದ್"
ಬೆಂಗಳೂರು, ಆಗಸ್ಟ್ 06: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಿನ್ನೆ (ಮಂಗಳವಾರ) ಬೆಳಿಗ್ಗೆ 6 ಗಂಟೆಯಿಂದ ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ನಡೆಸಿದ್ದಾರೆ. ಸಾರಿಗೆ ನೌಕರರ ಮುಷ್ಕರದಿಂದಾಗಿ ಸಾರಿಗೆ ಬಸ್‌ಗಳು ರಸ್ತೆಗೆ ಇಳಿಯಲಿಲ್ಲ, ಬಸ್ ಸಂಚಾರದಲ್ಲಿನ ವ್ಯತ್ಯಾಸದಿಂದಾಗಿಹಾಗಾಗಿ ಇದರ ಪರಿಣಾಮ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಮೇಲು ತೀವ್ರ ಪರಿಣಾಯ ಉಂಟಾಗಿದ್ದು, ತಾತ್ಕಾಲಿಕವಾಗಿ ಸಾರಿಗೆ ನೌಕರರು ತಮ್ಮ ಮುಷ್ಕರವನ್ನ ಕೈ ಬಿಟ್ಟು ಕೆಲಸಕ್ಕೆ ಹಾಜರಾಗಿದ್ದಾರೆ.
ಇತ್ತ ರಾಜ್ಯ ಸರ್ಕಾರ ಸಾರಿಗೆ ನೌಕರರ ಜೊತೆಗೆ ಸಭೆ ನಡೆಸಿದ್ದು, ಆ ಸಂಧಾನ ಸಭೆ ವಿಫಲವಾದ ಬೆನ್ನಲ್ಲೇ ಸರ್ಕಾರಿ ನೌಕರರ ಪರ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಧ್ವನಿ ಎತ್ತಿದ್ದಾರೆ. ಸಾರಿಗೆ ನೌಕರರ ಬೇಡಿಕೆ ಈಡೇರಿಸದಿದ್ರೆ ಕರ್ನಾಟಕ ಬಂದ್ ಮಾಡಲಾಗುತ್ತದೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಸಾರಿಗೆ ನೌಕರರ ಬಹಳ ವರ್ಷದ ಬೇಡಿಕೆಯಾಗಿದೆ. ರಾಜ್ಯ ಸರ್ಕಾರ ಕೂಡಲೇ ಅವರ ಬೇಡಿಕೆಯನ್ನ ಈಡೇರಿಸಬೇಕು. ಸರ್ಕಾರಿ ನೌಕರರ ಬೇಡಿಕೆಯನ್ನ ಸರ್ಕಾರ ಪರಿಗಣಿಸಬೇಕು. ಯಾವ ಸರ್ಕಾರ ಕೂಡ ಅವರ ಸಮಸ್ಯೆ ಆಲಿಸಿಲ್ಲ. ಅವರ 36 ತಿಂಗಳ ಸಂಬಳ ಕೊಟ್ಟು ಬಿಡಿ ಎಂದು ರಾಜ್ಯ ಸರ್ಕಾರ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ವಿಶೇಷ ಮನವಿ ಮಾಡಿದರು.
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಈ ಕೂಡಲೇ ಸಾರಿಗೆ ನೌಕರರ ಬೇಡಿಕೆಯನ್ನು ಈಡೇರಿಸಬೇಕು. ಇಲ್ಲದಿದ್ರೆ ನಾವು ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಕರ್ನಾಟಕ ಬಂದ್ ಗೆ ಕರೆ ನೀಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದ ವಿರುದ್ದ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ. ರಾಜ್ಯದ ಸಾರಿಗೆ ಸಂಸ್ಥೆ ನಿಗಮದ ಬಸ್‌ಗಳು ಸಂಚರಿಸದೇ ಇರುವ ಕಾರಣ ಸಾರ್ವಜನಿಕರು ಪರದಾಡಿದ್ದಾರೆ. ಬಸ್ ಇರದ ಹಿನ್ನೆಲೆ ಸ್ವಂತ ವಾಹನ ಹಾಗೂ ಆಟೋ, ಟ್ಯಾಕ್ಸಿ, ಹಾಗೂ ಕ್ಯಾಬ್ ಹತ್ತಿ ತಮ್ಮ ತಮ್ಮ ಕೆಲಸಕ್ಕೆ ಹೋಗಿದ್ದಾರೆ. ಪರಿಣಾಮ ಬೆಂಗಳೂರಿನಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ ಎಂದು ವಾಟಾಳ್ ನಾಗರಾಜ್ ಅವರು ಹೇಳಿದರು.
ಬಿಜೆಪಿ ಮೇಲೆ ಗೂಬೆ ಕೂರಿಸುವ ಕೆಲಸ: ಛಲವಾದಿ
ಈ ಕುರಿತು ಬಿಜೆಪಿ ವಿಧಾನ ಪರಿಷತ್ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ಸಾರಿಗೆ ನೌಕರರ ಬೇಡಿಕೆಯನ್ನು ಈಡೇರಿಸಿದರೆ ಮುಂದೆ ಸಮಸ್ಯೆ ಇರುವುದಿಲ್ಲ. ಕಾಂಗ್ರೆಸ್ ಸರ್ಕಾರವು, ವಾಸ್ತವವನ್ನು ಅರ್ಥ ಮಾಡಿಕೊಳ್ಳದೆ ಬಿಜೆಪಿ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ. ಇಂತಹವುಗಳನ್ನು ಬಿಜೆಪಿ ಸಹಿಸುವುದಿಲ್ಲ ಎಂದು ಅವರು ಎಚ್ಚರಿಸಿದರು.
ಸಾರಿಗೆ ನೌಕರರ ಹಕ್ಕುಗಳಿಗಾಗಿ ಅವರು ಹೋರಾಟ ಮಾಡುತ್ತಿದ್ದಾರೆ. ಎಸ್ಮಾ ಜಾರಿ ಮಾಡುತ್ತೇವೆ, ಕೆಲಸದಿಂದ ತೆಗೆಯುತ್ತೇವೆ ಎಂದು ಹೇಳುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. ತಪ್ಪಿರುವುದು ಸರ್ಕಾರದಲ್ಲಿ; ಕಾರ್ಮಿಕರಲ್ಲಲ್ಲ. ಕಾಂಗ್ರೆಸ್ ಸರ್ಕಾರ ನೆಪ ಹೇಳಿ ಬೇರೆಯವರ ಮೇಲೆ ತಮ್ಮ ತಪ್ಪುಗಳನ್ನು ಹೊರಿಸುವುದಕ್ಕೆ ಆರಂಭಿಸಿದ್ದಾರೆ ಎಂದು ಆರೋಪಿಸಿದರು. ಸಾರಿಗೆ ನೌಕರರು 38 ತಿಂಗಳ ವೇತನದ ಹಿಂಬಾಕಿಯನ್ನು ಕೇಳುತ್ತಿದ್ದಾರೆ. ಅದನ್ನು ನೀಡದೆ ಸರ್ಕಾರ ನೌಕರರ ಮೇಲೆ ಗೂಂಡಾ ವರ್ತನೆ ಮಾಡುವುದು ಸರಿಯಾದ ಕ್ರಮವಲ್ಲ ಎಂದು ಆಕ್ಷೇಪಿಸಿದರು.
ಬಿಜೆಪಿ ಸರ್ಕಾರದ ತೀರ್ಮಾನಗಳನ್ನು ಮುಂದೆ ಬರುವ ಸರ್ಕಾರಗಳು ಮುಂದುವರೆಸಬೇಕೇ ಅಥವಾ ಅಲ್ಲಿಗೆ ಕೈಬಿಡಬೇಕೆ ಎಂದು ಪ್ರಶ್ನಿಸಿದರು. ಇಂದು ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ, ನಾಳೆ ಮತ್ತೊಂದು ಸರ್ಕಾರ ಬಂದಾಗ ಅವರ ತೀರ್ಮಾನಗಳನ್ನು ವಿರೋಧ ಮಾಡುವುದಕ್ಕೆ ಸರ್ಕಾರ ಬರಬೇಕೆ; ಕಾಂಗ್ರೆಸ್ ಸರ್ಕಾರ ಈ ಕೆಟ್ಟ ಪರಂಪರೆಯನ್ನು ಮಾಡುತ್ತಿದೆ ಎಂದು ಆರೋಪಿಸಿದರು.












Click it and Unblock the Notifications