ಮೇಕೆದಾಟುವಿನಲ್ಲಿ ಕುಡಿಯುವ ನೀರಿಗಾಗಿ ಡ್ಯಾಂ

ಬೆಂಗಳೂರು, ನ.12 : ಕುಡಿಯುವ ನೀರು ಒದಗಿಸಲು ಸರ್ಕಾರ ಮೇಕೆದಾಟು ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ತರಲು ಸಿದ್ಧತೆ ನಡೆಸಿದೆ. ತಮಿಳುನಾಡು ರಾಜ್ಯ ಈ ಯೋಜನೆಗೆ ಆಪೇಕ್ಷಣೆ ಎತ್ತುವ ಆತಂಕ ದೂರವಾಗಿದೆ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಮಾತನಾಡಿದ ಸಚಿವರು, ಈ ಯೋಜನೆ ಜಾರಿಗೆ ತರುವುದರಲ್ಲಿ ಯಾವುದೇ ತೊಂದರೆ ಆಗುವುದಿಲ್ಲ ಎಂದು ಸುಪ್ರೀಂಕೋರ್ಟಿನಲ್ಲಿ ರಾಜ್ಯದ ಪರವಾಗಿ ವಾದ ಮಂಡಿಸುತ್ತಿರುವ ಫಾಲಿ ನಾರಿಮನ್ ಅವರು ಸಲಹೆ ನೀಡಿದ್ದಾರೆ ಎಂದರು. [ಮೇಕೆದಾಟು ಜಲ ವಿದ್ಯುತ್ ಯೋಜನೆ ಸ್ಥಗಿತವಿಲ್ಲ]

mb patil

ಜಲಾಶಯ ನಿರ್ಮಾಣಕ್ಕೆ ಮೇಕೆದಾಟುವಿನಲ್ಲಿ ಈಗಾಗಲೇ ಒಟ್ಟು 22 ಕಡೆ ಸ್ಥಳ ಗುರುತಿಸಲಾಗಿದೆ. ಈ ಯೋಜನೆಯು ಪೂರ್ಣಗೊಂಡಲ್ಲಿ ಸುಮಾರು 48 ಟಿಎಂಸಿ ನೀರು ಸಂಗ್ರಹಣೆ ಮಾಡಬಹುದಾಗಿದೆ ಎಂದು ಸಚಿವರು ಹೇಳಿದರು.

ಬೆಂಗಳೂರು, ಮೈಸೂರಿನ ಹಲವು ಭಾಗಗಳಿಗೆ ಕುಡಿಯುವ ನೀರು ಒದಗಿಸಲು ಈ ಯೋಜನೆ ಜಾರಿಗೊಳಿಸಲಾಗುತ್ತಿದೆ. ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಯೋಜನಾ ವರದಿ ತಯಾರಿಸಿ ಕೇಂದ್ರ ಜಲಮಂಡಳಿ ಯೋಜನಾ ಸಮಿತಿಗೆ ಕಳುಹಿಸಿಕೊಡಲಾಗುವುದು ಎಂದರು.

ಶಿವನ ಸಮುದ್ರದಲ್ಲಿ ಡ್ಯಾಂ : ಶಿವನಸಮುದ್ರದಲ್ಲಿ ಜಲವಿದ್ಯುತ್ ಯೋಜನೆ ಕೈಗೆತ್ತಿಕೊಳ್ಳುವುದಕ್ಕೂ ನಾರಿಮನ್ ಅವರಿಂದ ಒಪ್ಪಿಗೆ ದೊರೆತಿದೆ. ಜೆ.ಎಚ್. ಪಟೇಲ್ ಸರ್ಕಾರದ ಅವಧಿಯಲ್ಲೇ ಶಿವನಸಮುದ್ರದಲ್ಲಿ 210 ಮೆ.ವ್ಯಾ ವಿದ್ಯುತ್ ಉತ್ಪಾದನೆ ಮಾಡುವ ಯೋಜನೆ ರೂಪಿಸಲಾಗಿತ್ತು. ಆದರೆ, ತಮಿಳುನಾಡು ಇದಕ್ಕೆ ಆಕ್ಷೇಪಣೆ ವ್ಯಕ್ತಪಡಿಸಿತ್ತು ಎಂದು ಸಚಿವರು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+