ಕಾವೇರಿ ತೀರ್ಪು : ಕರ್ನಾಟಕ ಮೇಲ್ಮನವಿ ಸಲ್ಲಿಸಲ್ಲ

ಬೆಂಗಳೂರು, ಮಾರ್ಚ್ 22 : ಸುಪ್ರೀಂಕೋರ್ಟ್ ನೀಡಿರುವ ಕಾವೇರಿ ನದಿ ನೀರಿನ ಹಂಚಿಕೆಯ ಅಂತಿಮ ತೀರ್ಪನ್ನು ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಸಲ್ಲಿಸುವುದಿಲ್ಲ. ಫೆ.16ರಂದು ಕೋರ್ಟ್ ಅಂತಿಮ ತೀರ್ಪು ನೀಡಿತ್ತು.

ವಿಧಾನಸೌಧದಲ್ಲಿ ಗುರವಾರ ಸಂಜೆ ಎಲ್ಲಾ ಪಕ್ಷದ ಸಂಸದರ ಸಭೆ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮೇಲ್ಮನವಿ ಸಲ್ಲಿಸದಿರುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.

ಫೆ.16ರಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಮೂರ್ತಿಗಳಾದ ಅಮಿತಾವ್ ರಾಯ್, ಎ.ಎಂ.ಖನ್ವಿಲ್ಕರ್ ಅವರನ್ನು ಒಳಗೊಂಡ ಪೀಠ ಕಾವೇರಿ ವಿವಾದದ ಅಂತಿಮ ತೀರ್ಪು ನೀಡಿತ್ತು.

Cauvery judgement

ಕರ್ನಾಟಕ ರಾಜ್ಯ 284.75 ಟಿಎಂಸಿ ನೀರನ್ನು ಬಳಸಿಕೊಳ್ಳಬಹುದು. ಬೆಂಗಳೂರು ನಗರಕ್ಕೆ ಕುಡಿಯುವ ನೀರು ಒದಗಿಸಲು 4.75 ಟಿಎಂಸಿ ನೀರನ್ನು ಬಳಸಿಕೊಳ್ಳಬಹುದು ಎಂದು ಕೋರ್ಟ್ ತೀರ್ಪಿನಲ್ಲಿ ಹೇಳಿತ್ತು.

ಈ ತೀರ್ಪಿನ ಬಗ್ಗೆ ಚರ್ಚಿಸಲು ಇಂದು ಸರ್ವಪಕ್ಷಗಳ ಸಂಸದರ ಸಭೆಯನ್ನು ಸಿದ್ದರಾಮಯ್ಯ ಅವರು ಕರೆದಿದ್ದರು. ಸಭೆಯಲ್ಲಿ ಮೇಲ್ಮನವಿ ಸಲ್ಲಿಸದಿರುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.

ಹಾಸನ ಸಂಸದ ಎಚ್.ಡಿ.ದೇವೇಗೌಡ, ಮಂಡ್ಯ ಸಂಸದ ಸಿ.ಎಸ್.ಪುಟ್ಟರಾಜು ಮತ್ತು ಶಿವಮೊಗ್ಗ ಸಂಸದ ಬಿ.ಎಸ್.ಯಡಿಯೂರಪ್ಪ ಅವರು ಸಭೆಗೆ ಗೈರು ಹಾಜರಾಗಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+