ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾವೇರಿ ತೀರ್ಪು : ಕರ್ನಾಟಕ ಮೇಲ್ಮನವಿ ಸಲ್ಲಿಸಲ್ಲ

|
Google Oneindia Kannada News

ಬೆಂಗಳೂರು, ಮಾರ್ಚ್ 22 : ಸುಪ್ರೀಂಕೋರ್ಟ್ ನೀಡಿರುವ ಕಾವೇರಿ ನದಿ ನೀರಿನ ಹಂಚಿಕೆಯ ಅಂತಿಮ ತೀರ್ಪನ್ನು ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಸಲ್ಲಿಸುವುದಿಲ್ಲ. ಫೆ.16ರಂದು ಕೋರ್ಟ್ ಅಂತಿಮ ತೀರ್ಪು ನೀಡಿತ್ತು.

ವಿಧಾನಸೌಧದಲ್ಲಿ ಗುರವಾರ ಸಂಜೆ ಎಲ್ಲಾ ಪಕ್ಷದ ಸಂಸದರ ಸಭೆ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮೇಲ್ಮನವಿ ಸಲ್ಲಿಸದಿರುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.

ಕಾವೇರಿ ನದಿ ಪಾಲು : ಕರ್ನಾಟಕಕ್ಕೆ ಸಿಕ್ಕ ಪಾಲು ಇನ್ನು ಹೆಚ್ಚಳ!ಕಾವೇರಿ ನದಿ ಪಾಲು : ಕರ್ನಾಟಕಕ್ಕೆ ಸಿಕ್ಕ ಪಾಲು ಇನ್ನು ಹೆಚ್ಚಳ!

ಫೆ.16ರಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಮೂರ್ತಿಗಳಾದ ಅಮಿತಾವ್ ರಾಯ್, ಎ.ಎಂ.ಖನ್ವಿಲ್ಕರ್ ಅವರನ್ನು ಒಳಗೊಂಡ ಪೀಠ ಕಾವೇರಿ ವಿವಾದದ ಅಂತಿಮ ತೀರ್ಪು ನೀಡಿತ್ತು.

Cauvery judgement

ಕರ್ನಾಟಕ ರಾಜ್ಯ 284.75 ಟಿಎಂಸಿ ನೀರನ್ನು ಬಳಸಿಕೊಳ್ಳಬಹುದು. ಬೆಂಗಳೂರು ನಗರಕ್ಕೆ ಕುಡಿಯುವ ನೀರು ಒದಗಿಸಲು 4.75 ಟಿಎಂಸಿ ನೀರನ್ನು ಬಳಸಿಕೊಳ್ಳಬಹುದು ಎಂದು ಕೋರ್ಟ್ ತೀರ್ಪಿನಲ್ಲಿ ಹೇಳಿತ್ತು.

ಮೈಸೂರು ದಿವಾನರ ದ್ರೋಹದಿಂದ ತ.ನಾಡಿಗೆ ಅನುಕೂಲವಾಯಿತು: ದೇವೇಗೌಡಮೈಸೂರು ದಿವಾನರ ದ್ರೋಹದಿಂದ ತ.ನಾಡಿಗೆ ಅನುಕೂಲವಾಯಿತು: ದೇವೇಗೌಡ

ಈ ತೀರ್ಪಿನ ಬಗ್ಗೆ ಚರ್ಚಿಸಲು ಇಂದು ಸರ್ವಪಕ್ಷಗಳ ಸಂಸದರ ಸಭೆಯನ್ನು ಸಿದ್ದರಾಮಯ್ಯ ಅವರು ಕರೆದಿದ್ದರು. ಸಭೆಯಲ್ಲಿ ಮೇಲ್ಮನವಿ ಸಲ್ಲಿಸದಿರುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.

ಹಾಸನ ಸಂಸದ ಎಚ್.ಡಿ.ದೇವೇಗೌಡ, ಮಂಡ್ಯ ಸಂಸದ ಸಿ.ಎಸ್.ಪುಟ್ಟರಾಜು ಮತ್ತು ಶಿವಮೊಗ್ಗ ಸಂಸದ ಬಿ.ಎಸ್.ಯಡಿಯೂರಪ್ಪ ಅವರು ಸಭೆಗೆ ಗೈರು ಹಾಜರಾಗಿದ್ದರು.

English summary
Karnataka government will not file review petition on Cauvery judgement. The decision taken in all party MP's meeting on March 22, 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X