Siddaramaiah : ಬೆಳಗಾವಿಯನ್ನು ಪ್ರತ್ಯೇಕಿಸುವ ಬಾಲಿಶ ಹೇಳಿಕೆಗಳನ್ನು ಕರ್ನಾಟಕ ಸಹಿಸುವುದಿಲ್ಲ: ಸಿದ್ದರಾಮಯ್ಯ

ಬೆಳಗಾವಿ, ಡಿಸೆಂಬರ್ 10: ಬೆಳಗಾವಿಯ ಕುರಿತು ಮಹಾಜನ್ ಆಯೋಗದ ವರದಿಯೇ ಅಂತಿಮವಾಗಿದ್ದು, ಪದೇ ಪದೇ ಜಿಲ್ಲೆಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎನ್ನುವುದು ಅವರ ಮೂರ್ಖತನ. ಈ ಬಗ್ಗೆ ನೀಡಲಾಗುತ್ತಿರುವ ಬಾಲಿಶವಾದ ಹೇಳಿಕೆಗಳನ್ನು ಕರ್ನಾಟಕ ಸರ್ಕಾರ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಈ ಕುರಿತು ಮಾಧ್ಯಮಗಳ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಪಂಚಮಸಾಲಿ ಸಮುದಾಯದ ಮೀಸಲಾತಿ ಹೋರಾಟದ ಬಗ್ಗೆ ಪ್ರತಿಕ್ರಿಯೆ ನೀಡಿ, ಪಂಚಮಸಾಲಿ ಸಮುದಾಯದ ಮುಖಂಡರನ್ನು ಚರ್ಚೆಗೆ ಕರೆದಿದ್ದರೂ, ಅವರು ಆಗಮಿಸಿಲ್ಲ. ಪ್ರಜಾಪ್ರಭುತ್ವದಲ್ಲಿ ಹೋರಾಟ ಕೈಗೊಳ್ಳಲು ಅವಕಾಶವಿದ್ದು, ಹೋರಾಟಕ್ಕೆ ನಮ್ಮ ವಿರೋಧವಿಲ್ಲ ಎಂದು ಹೇಳಿದರು.

Karnataka will not tolerate childish statements to isolate Belagavi Said Siddaramaiah

ಹಿರಿಯ ನಾಯಕ ಎಸ್ ಎಂ ಕೃಷ್ಣ ಅವರು ಅವರು ದಕ್ಷ ಆಡಳಿತಗಾರ . ವಿಧಾನ ಸಭೆ, ವಿಧಾನ ಪರಿಷತ್ತು, ಲೋಕಸಭೆ ಹಾಗೂ ರಾಜ್ಯಸಭೆಗಳ ಸದಸ್ಯರಾಗಿದ್ದ ಎಸ್ ಎಂ ಕೃಷ್ಣ ಅವರು ಸುದೀರ್ಘ ರಾಜಕೀಯ ಅನುಭವ ಹೊಂದಿದ್ದರು. ರಾಜ್ಯದ ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ, ವಿಧಾನಸಭೆ ಸ್ಪೀಕರ್ ಆಗಿ , ರಾಜ್ಯಪಾಲರಾಗಿ ಕೆಲಸ ಮಾಡಿರುವ ಸಜ್ಜನ ರಾಜಕಾರಣಿಯಾಗಿದ್ದರು. ಡಾ. ರಾಜ್ ಕುಮಾರ್ ಅವರ ಅಪಹರಣದ ಸವಾಲನ್ನು ಸಮರ್ಥವಾಗಿ ಎದುರಿಸಿದ್ದರು.

92 ವರ್ಷದ ಎಸ್ ಎಂ ಕೃಷ್ಣ ಅವರು ಕಳೆ ದ ಆರು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರ ನಿಧನದಿಂದ ರಾಜ್ಯ ಧೀಮಂತ ನಾಯಕನನ್ನು ಕಳೆದುಕೊಂಡಂತಾಗಿದೆ. ಅವರ ಕುಟುಂಬ ವರ್ಗ ಹಾಗೂ ಅಭಿಮಾನಿಗೆ ಅವರ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿ ದೊರೆಯಲಿಹಾಗೂ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು. ಎರಡು ತಿಂಗಳ ಹಿಂದೆ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಅವರನ್ನು ಭೇಟಿಯಾಗಿದ್ದೆ. ರಾಜ್ಯದಲ್ಲಿ ನಾಳೆ ಸರ್ಕಾರಿ ರಜೆಯನ್ನು ಘೋಷಣೆ ಮಾಡಲಾಗಿದ್ದು, ಮೂರು ದಿನ ಶೋಕಾಚರಣೆ ಇರಲಿದೆ. ನಾಳೆ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿರುವುದಾಗಿ ತಿಳಿಸಿದರು.

ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ತಂಗಡಗಿ ಸಂತಾಪ

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ‌ ಶಿವರಾಜ್ ತಂಗಡಗಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಎಸ್.ಎಂ.ಕೃಷ್ಣ‌ ಅವರ ಅಗಲಿಕೆ‌ ತೀವ್ರ ನೋವು ತರಿಸಿದ್ದು, ದೇಶ ಒಬ್ಬ ಧೀಮಂತ ನಾಯಕನನ್ನು ನಾವು ಕಳೆದುಕೊಂಡಿದೆ. ರಾಜ್ಯದ ಉಪ ಮುಖ್ಯಮಂತ್ರಿ, ಮುಖ್ಯಮಂತ್ರಿ, ಸ್ಪೀಕರ್‌ ಆಗಿ, ಕೇಂದ್ರ ಸಚಿವರಾಗಿ ಹಾಗೂ ರಾಜ್ಯಪಾಲರಾಗಿ ಎಸ್.ಎಂ.ಕೃಷ್ಣ ಅವರು ನೀಡಿರುವ ಕೊಡುಗೆ ಅಪಾರವಾದದ್ದು.

ಕರ್ನಾಟಕ ‌ಅಭಿವೃದ್ಧಿಯ ವಿಚಾರದಲ್ಲಿ ಎಸ್.ಎಂ.ಕೃಷ್ಣ‌‌ ಅವರು ತಮ್ಮದೇ‌ ಆದ ದೂರದೃಷ್ಟಿಯನ್ನು ಹೊಂದಿದ್ದರು. ಬೆಂಗಳೂರಿನ ಅಭಿವೃದ್ಧಿಯಲ್ಲಿ ಮಹತ್ತರ ಕೊಡುಗೆ ನೀಡಿದ್ದ ಎಸ್.ಎಂ.ಕೃಷ್ಣ‌ ಅವರಿಂದಲೇ ಬೆಂಗಳೂರಿಗೆ ವಿಶ್ವಮಟ್ಟದಲ್ಲಿ ಸಿಲಿಕಾನ್ ಸಿಟಿ, ಐಟಿ- ಬಿಟಿ ಸಿಟಿ ಎಂಬ ಹೆಸರು ಬಂದಿತ್ತು. ತಮ್ಮ ಅನನ್ಯವಾದ ಕೊಡುಗೆಗೆ ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು. ಅವರ ಬದುಕು ಎಲ್ಲರಿಗೂ ಸ್ಪೂರ್ತಿ.

ಹಿರಿಯ ಮುತ್ಸದ್ದಿ ರಾಜಕಾರಣಿಯನ್ನು ನಾವು ಕಳೆದುಕೊಂಡಿದ್ದು, ಕರ್ನಾಟಕಕ್ಕೆ ತುಂಬಲಾರದ ನಷ್ಟ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ಹಾಗೂ ಬಂಧು ಬಳಗಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಚಿವರು ಸಂತಾಪದಲ್ಲಿ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+