ಮಳೆ.. ಮಳೆ.. ಮುಂದಿನ 48 ಗಂಟೆಗಳಲ್ಲಿ ಶುರುವಾಗಲಿದೆ ಭರ್ಜರಿ ಮಳೆ: ಕರ್ನಾಟಕದಲ್ಲಿ 5 ದಿನ ನಿರಂತರ ಮಳೆ!

ಮಳೆ ಇಲ್ಲದೆ ನರಳಾಡಿದ್ದ ಕನ್ನಡಿಗರಿಗೆ ಅತ್ಯಂತ ಖುಷಿಯಾದ ಸುದ್ದಿ ಸಿಗುತ್ತಿದೆ. ಇಷ್ಟು ದಿನ ಮಳೆ ಬರಲಿ ದೇವರೇ ಅಂತಾ ಬೇಡಿಕೊಂಡಿದ್ದ, ಕನ್ನಡ ನಾಡಿಗೆ ಇದೀಗ ಭರ್ಜರಿ ಮಳೆಯ ಸಿಂಚನ ಆಗುತ್ತಿದೆ. ಅದ್ರಲ್ಲೂ ಇಷ್ಟುದಿನ ಬಿದ್ದ ಮಳೆ ಬರೀ ಸ್ಯಾಂಪಲ್, ಇನ್ನು ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದಲ್ಲಿ ಅಸಲಿ ಮಳೆ ಶುರುವಾಗಲಿದ್ದು ಎಲ್ಲಾ ಕಡೆಯೂ ಭರ್ಜರಿ ನೀರು ಹರಿದು ಬರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹಾಗಾದ್ರೆ ಇದೀಗ ಕರ್ನಾಟಕದ ಯಾವ ಯಾವ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯಲಿದೆ? ಬನ್ನಿ ತಿಳಿಯೋಣ.

ಕರ್ನಾಟಕದಲ್ಲಿ ಮಳೆ ಇಲ್ಲದೆ ಕನ್ನಡ ನಾಡಿನ ರೈತರು ಪರದಾಡಿದ್ದರು. ದೇವರೆ ಒಂದೇ ಒಂದು ಭರ್ಜರಿ ಮಳೆ ಕೊಡು ಅಂತಾ ಕೃಷಿಕರು ದೇವರ ಮೊರೆ ಹೋಗಿದ್ದರು. ಹೀಗಿದ್ದಾಗ ರೈತರು ತಮ್ಮ ಬೆಳೆ ಉಳಿಸಿಕೊಳ್ಳಲು ಬಿಂದಿಗೆ, ಟ್ಯಾಂಕರ್ ಹೀಗೆ ಪೈರುಗಳಿಗೆ ನೀರು ಹಾಕಲು ತೀವ್ರ ಕಷ್ಟ ಪಟ್ಟಿದ್ದರು. ಎಲ್ಲಾ ರೀತಿಯ ಪ್ರಯತ್ನ ಮಾಡಿ ಸೋತು ಹೋಗಿದ್ದರು. ನೆಲ ಸಂಪೂರ್ಣ ಒಣಗಿ, ಬೆಳೆ ಕೂಡ ನಾಶವಾಗುತ್ತಿತ್ತು. ಹೀಗಿದ್ದಾಗ ರೊಚ್ಚಿಗೆದ್ದ ವರುಣ ದೇವ ಕನ್ನಡ ನಾಡಿನ ಜನರ ಮೇಲೆ ಕೃಪೆ ತೋರಿದ್ದು ಭರ್ಜರಿಯಾಗಿ ಮಳೆ ಸುರಿಸಲು ಶುರು ಮಾಡಿದ್ದಾನೆ. ಅದರಲ್ಲೂ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ನಿರಂತರವಾಗಿ ಭಾರಿ ಭರ್ಜರಿ ಮಳೆ ಬೀಳಲಿದೆ!

Karnataka Will Receive Heavy Rain For 5 Days From 16 May 2024

ಮಳೆ ಬೀಳುವ ಜಿಲ್ಲೆಗಳ ಮಾಹಿತಿ

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರಕ್ಕೆ ಕೌಂಟ್‌ಡೌನ್ ಶುರುವಾಗಿ, ಮುಂದಿನ 48 ಗಂಟೆಯಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರು ನಗರ, ವಿಜಯಪುರ, ರಾಯಚೂರು, ಹಾಸನ, ಚಿತ್ರದುರ್ಗ, ಬೆಳಗಾವಿ, ದಾವಣಗೆರೆ, ಬಳ್ಳಾರಿ & ಶಿವಮೊಗ್ಗ, ತುಮಕೂರು, ಬೀದರ್, ಕಲಬುರಗಿ, ಯಾದಗಿರಿ ಸೇರಿದಂತೆ ಮುಂದಿನ 24 ರಿಂದ 48 ಗಂಟೆ ಅವಧಿಯಲ್ಲಿ ರಾಮನಗರ ಚಿಕ್ಕಮಗಳೂರು & ಚಾಮರಾಜನಗರ, ಮಂಡ್ಯ ಜಿಲ್ಲೆಯಲ್ಲಿ ಭಾರಿ ಮಳೆ ಬೀಳುತ್ತೆ ಎನ್ನಲಾಗಿದೆ. ಹಾಗೇ ಮೇ ತಿಂಗಳು ಪೂರ್ತಿ ಮಳೆಯ ಅಬ್ಬರವು ಇದೇ ರೀತಿ ಮುಂದುವರಿಯುತ್ತೆ ಎಂದು ಎಚ್ಚರಿಕೆ ಸಂದೇಶ ರವಾನಿಸಲಾಗಿದೆ. ಬೆಂಗಳೂರು ಜಿಲ್ಲೆ ಸುತ್ತಮುತ್ತ ಕೂಡ ಭಾರಿ ಮಳೆಯಾಗಲಿದ್ದು, ಬೆಂಗಳೂರು ಗ್ರಾಮಾಂತರ & ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲೂ ಮಳೆಯ ಅಬ್ಬರ ಜೋರಾಗಿ ಇರಲಿದೆ.

ಬೆಂಗಳೂರು ಫುಲ್ ಕೂಲ್.. ಕೂಲ್..!

ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಕೂಡ ಭಾರಿ ಮಳೆ ಬೀಳುತ್ತಿದ್ದು, ನಾಳೆಯಿಂದ ಸೋಮವಾರದ ತನಕ ಭಾರಿ ಮಳೆ ಆಗುತ್ತೆ ಎಂದು, ಮುನ್ನೆಚ್ಚರಿಕೆ ನೀಡಲಾಗಿದೆ. ಅಲ್ಲದೆ ಬೆಂಗಳೂರಿನ ಹಲವು ಏರಿಯಾಗಳಿಗೆ ಈಗಾಗಲೇ ಅಲರ್ಟ್ ನೀಡಲಾಗಿದೆ. ಯಾಕಂದ್ರೆ ಭಾರಿ ಮಳೆ ಬೀಳುವ ಮುನ್ಸೂಚನೆ ಇದ್ದು, ಹವಾಮಾನ ವೈಪರಿತ್ಯದ ಪರಿಣಾಮ ಬೆಂಗಳೂರಿನ ವಾತಾವರಣ ಕೂಲ್ ಕೂಲ್ ಆಗುತ್ತಿದೆ.

ಮುಂಗಾರು ಮಳೆಯ ಮಾರುತಗಳು...

ಮೇ 31ಕ್ಕೆ ಮುಂಗಾರು ಮಳೆಯ ಮಾರುತಗಳು ಕೇರಳ ರಾಜ್ಯಕ್ಕೆ ಎಂಟ್ರಿ ಕೊಡಲಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇಡೀ ಭಾರತದ ಮಳೆಯ ಪಾಲಿನಲ್ಲಿ ಶೇ. 70 ರಷ್ಟು ಮಳೆಯನ್ನ ಮುಂಗಾರು ಮಳೆ ಒಂದೇ ಸುರಿಸುತ್ತದೆ. ಹೀಗಾಗಿ ಮುಂಗಾರು ಮಳೆ ಕರ್ನಾಟಕ ಸೇರಿ ಇಡೀ ಭಾರತಕ್ಕೆ ಅತ್ಯಂತ ಮುಖ್ಯವಾಗಿದೆ. ಹೀಗಿದ್ದಾಗಲೇ 2023 ರಲ್ಲಿ ಮುಂಗಾರು ಮಳೆ ಕೈಕೊಟ್ಟು ಹೋಗಿತ್ತು. ಹೀಗಾಗಿ ಭೀಕರ ಬರ ಎದುರಾಗಿ ರೈತರು & ಜನ ನರಳಿದ್ದರು. ಆದ್ರೆ ಈಗ ಗುಡ್ ನ್ಯೂಸ್ ಸಿಗುತ್ತಿದ್ದು, ಮುಂಗಾರು ಮಳೆ ಅಬ್ಬರ ಗ್ಯಾರಂಟಿ ಆಗುತ್ತಿದೆ.

ಮುಂಗಾರು ಮಳೆ ಅಬ್ಬರ ಶುರು!

ಮೇ 31ಕ್ಕೆ ಮುಂಗಾರು ಮಳೆಯ ಮಾರುತಗಳು ಕೇರಳ ರಾಜ್ಯಕ್ಕೆ ಎಂಟ್ರಿ ಕೊಡಲಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇಡೀ ಭಾರತದ ಮಳೆಯ ಪಾಲಿನಲ್ಲಿ ಶೇ. 70 ರಷ್ಟು ಮಳೆಯನ್ನ ಮುಂಗಾರು ಮಳೆ ಒಂದೇ ಸುರಿಸುತ್ತದೆ. ಹೀಗಾಗಿ ಮುಂಗಾರು ಮಳೆ ಕರ್ನಾಟಕ ಸೇರಿ ಇಡೀ ಭಾರತಕ್ಕೆ ಅತ್ಯಂತ ಮುಖ್ಯವಾಗಿದೆ. ಹೀಗಿದ್ದಾಗಲೇ 2023 ರಲ್ಲಿ ಮುಂಗಾರು ಮಳೆ ಕೈಕೊಟ್ಟು ಹೋಗಿತ್ತು. ಹೀಗಾಗಿ ಭೀಕರ ಬರ ಎದುರಾಗಿ ರೈತರು & ಜನ ನರಳಿದ್ದರು. ಆದ್ರೆ ಈಗ ಗುಡ್ ನ್ಯೂಸ್ ಸಿಗುತ್ತಿದ್ದು, ಮುಂಗಾರು ಮಳೆ ಅಬ್ಬರ ಗ್ಯಾರಂಟಿ ಆಗುತ್ತಿದೆ.

ಕಾವೇರಿ ಕೊಳ್ಳದ ಡ್ಯಾಂಗಳು ತುಂಬುತ್ತಿವೆ

ಮಳೆ ಇಲ್ಲದೆ ಮನುಷ್ಯರ ಬದುಕು ಊಹೆಗೂ ನಿಲುಕದು. ಯಾಕಂದ್ರೆ ಮನುಷ್ಯರ ಬಹು ಮುಖ್ಯ ಅಂಶ ಅಂದ್ರೆ ನೀರು. ಹೀಗಾಗಿ ನೀರು ಇಲ್ಲದೆ ಮನುಷ್ಯರು ಏನೂ ಮಾಡಲು ಆಗೋದಿಲ್ಲ. ಆದ್ರೆ ಮನುಷ್ಯ ತಾನೇ ಮಾಡಿಕೊಂಡಿದ್ದ ತಪ್ಪುಗಳಿಂದ ಸಾಕಷ್ಟು ಸಮಸ್ಯೆ ಎದುರಿಸುವ ವಾತಾವರಣ ನಿರ್ಮಾಣ ಆಗಿದೆ. ಸರಿಯಾದ ಸಮಯಕ್ಕೆ ಮಳೆಯೇ ಬೀಳುತ್ತಿಲ್ಲ. ಬಿಸಿಲು & ಬಿಸಿ ಗಾಳಿ ಕೂಡ ಹೆಚ್ಚಾಗುತ್ತಿದೆ. ಹೀಗಾಗಿ ಮನುಷ್ಯರು ಪರದಾಡುತ್ತಿದ್ದು ನೀರಿಗೆ ಯುದ್ಧವೇ ನಡೆಯುತ್ತೇನೋ? ಎಂಬ ಭಯ ಕೂಡ ಆವರಿಸಿತ್ತು. ಇದೇ ಸಮಯದಲ್ಲಿ ಸರಿಯಾಗಿ ಭರ್ಜರಿ ಮಳೆ ಬರುತ್ತಿದ್ದು, ಕಾವೇರಿ ನದಿಯ ಡ್ಯಾಂಗಳು ತುಂಬುತ್ತಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+