Rain Alert: ಕರ್ನಾಟಕದ ಈ ಜಿಲ್ಲೆಗಳಲ್ಲಿ 48 ಗಂಟೆ ರಣಮಳೆ ಎಚ್ಚರಿಕೆ, ಆರೆಂಜ್ ಅಲರ್ಟ್...Cyclone Montha

ಬೆಂಗಳೂರು, ಅಕ್ಟೋಬರ್ 28: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಹಲವು ದಿನಗಳಿಂದ ಸುರಿಯುತ್ತಿದ್ದ ಮಳೆಯು ಮುಂದಿನ ಎರಡರಿಂದ ಐದು ದಿನಗಳ ಕಾಲ ಮತ್ತೆ ಅಬ್ಬರಿಸಲಿದೆ. ಮೊಂಥಾ ಚಂಡಮಾರುತ ಇಂದು ಮಂಗಳವಾರ ಆಂಧ್ರಪ್ರದೇಶ ಕರಾವಳಿ ಭಾಗಕ್ಕೆ ಚಂಡಮಾರುತ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದರಿಂದ ವಿವಿಧ ರಾಜ್ಯಗಳ ಜೊತೆಗೆ ಕರ್ನಾಟಕಕ್ಕೆ ಭಾರೀಯಿಂದ ಅತ್ಯಧಿಕ ಮಳೆ ಬರಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ಕರ್ನಾಟಕ ರಾಜ್ಯದಲ್ಲಿ ಕರಾವಳಿ, ಮಲೆನಾಡು ಹಾಗೂ ಇತರ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಆಗುತ್ತಲೇ ಇದೆ. ಮುಂದಿನ 48 ಗಂಟೆಗಳ ಕಾಲ ಮೊಂಥಾ ಚಂಡಮಾರುತ ಪರಿಣಾಮವಾಗಿ ವಿವಿಧ ಜಿಲ್ಲೆಗಳಲ್ಲಿ ಮಳೆ ಆರ್ಭಟ ಕಂಡು ಬರಲಿದೆ. ಕರಾವಳಿ ಹಾಗೂ ಒಳನಾಡಿನ ಈ ಕೆಳಗಿನ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿಯಲಿದೆ ಎಂದು ಕರ್ನಾಟಕ ಹವಾಮಾನ ತಜ್ಞರು ತಿಳಿಸಿದ್ದಾರೆ.

Karnataka Will Witness Heavy Rain Today and Tomorrow Due Cyclone Montha Forecast details here

ಈ ಜಿಲ್ಲೆಗಳಲ್ಲಿ ಭಾರೀ ಮಳೆ ಆತಂಕ

ಕರಾವಳಿ ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತ್ಯಧಿಕ ಮಳೆ ಬರುವ ಕಾರಣಕ್ಕೆ ಇಂದು ಆರೆಂಜ್ ಅಲರ್ಟ್ ಹಾಗೂ ನಾಳೆ ಬುಧವಾರ ಇದೇ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮಂಗಳೂರು, ಉಡುಪಿ ಕರಾವಳಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಈ ಭಾಗದ ಶಾಲೆ, ಕಾಲೇಜುಗಳಿಗೆ ಇಂದು ಮತ್ತು ನಾಳೆ ರಜೆ ಘೋಷಣೆ ಆಗುವ ಸಾಧ್ಯತೆ ಇದೆ.

ಅದೇ ರೀತಿ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮೈಸೂರು ಭಾಗಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಆಗಲಿದೆ. ಇಲ್ಲಿ ಕನಿಷ್ಠ 65 ಮಿಲಿ ಮೀಟರ್‌ನಿಂದ 115ಮಿಲಿ ಮೀಟರ್‌ವರೆಗೆ ಭಾರೀ ಮಳೆ ಆಗಲಿದ್ದು, ಒಂದು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮಳೆ ನಿರೀಕ್ಷಿತ ಪ್ರದೇಶಗಳಲ್ಲಿ ಮಬ್ಬು ವಾತಾವರಣ, ಚಳಿ ಎದುರಾಗಿದೆ.

ಹಿಂಗಾರು ಮಳೆ ಒಳನಾಡಿನ ಜಿಲ್ಲೆಗಳಲ್ಲಿ ಕಳೆದ 10 ದಿನಗಳಿಂದ ಅಬ್ಬರ ಶುರುವಿಟ್ಟುಕೊಂಡಿದೆ. ಆಗಾಗ ಬಿಸಿಲು ಮರೆಯಾಗುತ್ತಿದ್ದಂತೆ ಜಿಟಿ ಜಿಟಿ ರೂಪದಲ್ಲಿ ಆರಂಭವಾಗುವ ಮಳೆ, ಕೆಲವೆಡೆ ಗಂಟೆಗಳ ಕಾಲ ಸುರಿದಿದೆ. ಅನೇಕ ಜಿಲ್ಲೆಗಳು ಕಳೆದ ಒಂದೇ ವಾರದಲ್ಲಿ ಉತ್ತಮ ಹಿಂಗಾರು ಮಳೆ ಕಂಡಿವೆ.

ಬೆಂಗಳೂರು ಮಳೆ ಮುನ್ಸೂಚನೆ

ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಸಾಮಾನ್ಯ ವಾತಾವರಣ ಕಂಡು ಬರಲಿದೆ. ಆಗಾಗ ಮಬ್ಬು ಕವಿಯಲಿದ್ದು, ಹಗುರ ಮಳೆ ಬರುವ ನಿರೀಕ್ಷೆ ಇದೆ. ತಾಪಮಾನ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಕಂಡು ಬರಲಿದೆ. ಒಂದೆರಡು ಕಡೆಗಳಲ್ಲಿ ಇಂದು ಸಂಜೆ ಇಲ್ಲವೇ ಬುಧವಾರ ಬೆಳಗ್ಗೆ ಜೋರು ಮಳೆ ಆಗುವ ಸಂಭವವಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+