ನವರಾತ್ರಿ ಸಂಭ್ರಮದಲ್ಲಿ ಕನ್ನಡ ನಾಡಿನ ಮಹಿಳೆಯರಿಗೆ ಮತ್ತೊಂದು ಬಂಪರ್!
ಸಿದ್ದರಾಮಯ್ಯ ಅವರ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಮಹಿಳೆಯರಿಗೆ ಹಲವು ಯೋಜನೆ ಜಾರಿಗೆ ತಂದಿದೆ. ಅದರಲ್ಲೂ ಕನ್ನಡ ನಾಡಿನ ಮಹಿಳೆಯರಿಗೆ ಇಡೀ ದೇಶದಲ್ಲೇ ಅತಿಹೆಚ್ಚು ಸೌಲಭ್ಯ ಸಿಗುವಂತಾಗಿದೆ. ಈಗಾಗಲೇ ಗೃಹಲಕ್ಷ್ಮಿ, ಶಕ್ತಿ ಯೋಜನೆ ಲಾಭ ಪಡೆಯುತ್ತಿರುವ ಕನ್ನಡ ನಾಡಿನ ಮಹಿಳೆಯರಿಗೆ ಮತ್ತೊಂದು ಬಂಪರ್ ಮಾಹಿತಿ ಸಿಕ್ಕಿದೆ. ಹಾಗಾದರೆ ಸಿಎಂ ಸಿದ್ದರಾಮಯ್ಯ ಅವರು ಹಬ್ಬದ ದಿನವೇ ನೀಡಿರುವ ಆ ಸಿಹಿಸುದ್ದಿ ಯಾವುದು?
ಸ್ತ್ರೀಯರು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವಲಯದಲ್ಲಿ ಪರಿಪೂರ್ಣವಾಗಿ ತೊಡಗಿಸಿಕೊಂಡಾಗ ಮಾತ್ರ ದೇಶದ ಆರ್ಥಿಕ ಅಭಿವೃದ್ಧಿಯ ವೇಗ ಹೆಚ್ಚಿರುತ್ತದೆ. ಇದಕ್ಕಾಗಿ ಸ್ತ್ರೀಯರು ಉದ್ಯಮ, ಕೈಗಾರಿಕೆ, ಸೇವಾ ವಲಯದಲ್ಲಿ ಭಾಗವಹಿಸುವುದು ಅತಿ ಮುಖ್ಯ. ಸ್ತ್ರೀ ಸ್ವಾವಲಂಬನೆಗಾಗಿ 100 ಪೆಟ್ರೋಲ್ ಬಂಕ್‌ಗಳನ್ನು ಸ್ಥಾಪಿಸಿ, ಅವುಗಳನ್ನು ಮಹಿಳಾ ಸಹಕಾರಿ… pic.twitter.com/Fsf4F1irfR
— CM of Karnataka (@CMofKarnataka) October 24, 2023
ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿಯಲು ಕಾರಣವಾದ ಅಂಶದಲ್ಲಿ ಗ್ಯಾರಂಟಿ ವಾಗ್ದಾನ ಪ್ರಮುಖ ಪಾತ್ರ ಬೀರಿತ್ತು. ಅದರಲ್ಲೂ 'ಗೃಹಲಕ್ಷ್ಮಿ ಯೋಜನೆ'ಯ ಅಡಿಯಲ್ಲಿ ರಾಜ್ಯದ ಪ್ರತಿ ಕುಟುಂಬದ ಯಜಮಾನಿಗೆ 2000 ರೂಪಾಯಿ ಕೊಡ್ತಿದೆ ಸಿದ್ದರಾಮಯ್ಯ ಸರ್ಕಾರ. ಇದರ ಜತೆ ಶಕ್ತಿ ಯೋಜನೆ ಜಾರಿಗೆ ತಂದು, ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಲು ಸೌಲಭ್ಯ ಕಲ್ಪಿಸಿದೆ. ಹೀಗಿದ್ದಾಗಲೆ ಮತ್ತೊಂದು ಘೋಷಣೆಯನ್ನ ಈಗ ಸಿಎಂ ಮೊಳಗಿಸಿದ್ದಾರೆ.

ಕರ್ನಾಟಕದ ಮಹಿಳೆಯರಿಗಾಗಿ...
ಹೌದು, ಸಿಎಂ ಸಿದ್ದರಾಮಯ್ಯ ಇಂದು ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ಮಹಿಳೆಯರಿಗಾಗಿ ವಿಶೇಷ ಸಂದೇಶ ನೀಡಿದ್ದಾರೆ. ಅದ್ರಲ್ಲೂ ನಾರಿಶಕ್ತಿಯ ಪ್ರತೀಕವಾದ ನವರಾತ್ರಿಯ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಮಹಿಳೆಯರ ಆರ್ಥಿಕ ಶಕ್ತಿಗಾಗಿ ಸರ್ಕಾರ ಜಾರಿಗೆ ತಂದಿರುವ ಮತ್ತೊಂದು ಯೋಜನೆ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ಹಾಗಾದ್ರೆ ಹಬ್ಬದಲ್ಲಿ ಸಿಎಂ ಸಿದ್ದರಾಮಯ್ಯ ನೀಡಿರುವ ಸಿಹಿಸುದ್ದಿ ಏನು? ಮುಂದೆ ಓದಿ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, 'ಸ್ತ್ರೀಯರು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವಲಯದಲ್ಲಿ ಪರಿಪೂರ್ಣವಾಗಿ ತೊಡಗಿಸಿಕೊಂಡಾಗ ಮಾತ್ರ ದೇಶದ ಆರ್ಥಿಕ ಅಭಿವೃದ್ಧಿಯ ವೇಗ ಹೆಚ್ಚಿರುತ್ತದೆ. ಇದಕ್ಕಾಗಿ ಸ್ತ್ರೀಯರು ಉದ್ಯಮ, ಕೈಗಾರಿಕೆ, ಸೇವಾ ವಲಯದಲ್ಲಿ ಭಾಗವಹಿಸುವುದು ಅತಿ ಮುಖ್ಯ. ಸ್ತ್ರೀ ಸ್ವಾವಲಂಬನೆಗಾಗಿ 100 ಪೆಟ್ರೋಲ್ ಬಂಕ್‌ಗಳನ್ನು ಸ್ಥಾಪಿಸಿ, ಅವುಗಳನ್ನು ಮಹಿಳಾ ಸಹಕಾರಿ ಸ್ವಸಹಾಯ ಸಂಘಗಳ ಮೂಲಕ ನಿರ್ವಹಣೆಗೆ ವಹಿಸಲು ಕ್ರಮ ಹಾಗೂ ಪೆಟ್ರೋಲ್ ಬಂಕ್‌ಗಳ ಸ್ಥಾಪನೆಗೆ ಭೂಮಿ, ತರಬೇತಿ, ಪರವಾನಗಿ ಸೇರಿದಂತೆ ಅಗತ್ಯ ಬೆಂಬಲ ನೀಡುವುದಾಗಿ ಬಜೆಟ್‌ನಲ್ಲಿ ಘೋಷಿಸಿದ್ದೇವೆ.' ಎಂದು ತಿಳಿಸಿದ್ದಾರೆ.

ಅಲ್ಲದೆ ತಮ್ಮ ಈ ಟ್ವೀಟ್‌ನಲ್ಲಿ ಮಾತು ಮುಂದುವರಿಸಿದ ಸಿಎಂ ಸಿದ್ದರಾಮಯ್ಯ, 'ಸ್ತ್ರೀಶಕ್ತಿ ಆರಾಧನೆಯ ಈ ನವರಾತ್ರಿ ಹಬ್ಬದ ಸಂದರ್ಭದಲ್ಲಿ ನಮ್ಮ ಸರ್ಕಾರವು ಸ್ತ್ರೀಸಬಲೀಕರಣಕ್ಕೆ ಬದ್ಧವಾಗಿ ಶ್ರಮಿಸುತ್ತಿದೆ ಎಂದು ಹೆಮ್ಮೆಯಿಂದ ಹೇಳಬಯಸುತ್ತೇನೆ.' ಎಂದಿದ್ದಾರೆ. ಸಿಎಂ ಈ ಮೂಲಕ ಹಬ್ಬದ ದಿನವೇ ಮಹಿಳೆಯರಿಗಾಗಿ ಸರ್ಕಾರ ಜಾರಿಗೆ ತಂದಿರುವ ಮತ್ತೊಂದು ಯೋಜನೆ ಬಗ್ಗೆ ಪುನರ್ ಪ್ರಸ್ತಾಪ ಮಾಡಿದ್ದಾರೆ.












Click it and Unblock the Notifications