ಮಹಿಳಾ ವಿವಿಯ 34 ಸಾವಿರ ಪುಸ್ತಕಗಳು ನೀರುಪಾಲು
ಬಿಜಾಪುರ, ಅ, 14 : ರಾಜ್ಯ ಮಹಿಳಾ ವಿಶ್ವವಿದ್ಯಾಲಯದ ಸುಮಾರು 34 ಸಾವಿರ ಪುಸ್ತಕಗಳು ಮಳೆ ನೀರಿನಲ್ಲಿ ಒದ್ದೆಯಾಗಿವೆ. ಕೆಳ ಮಹಡಿಯಲ್ಲಿದ್ದ ಉಪಯುಕ್ತ ಪುಸ್ತಕಗಳು ಪ್ರಯೋಜನಕ್ಕೆ ಬಾರದಂತಾಗಿವೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಶ್ವವಿದ್ಯಾಲದ ರಜಿಸ್ಟ್ರಾರ್ ಎಸ್. ಎ.ಖಾಜಿ ಮತ್ತು ವೈಸ್ ಛಾನ್ಸೆಲರ್ ಮೀನಾ ಚಂದ್ರಶೇಖರ್ ಪುಸ್ತಕಗಳನ್ನು ಒಣಗಿಸಲಾಗಿದೆ. ಯಾವುದೆ ನಷ್ಟ ಉಂಟಾಗಿಲ್ಲ ಎಂದಿದ್ದಾರೆ.[ನಿಮ್ಮ ಇಷ್ಟದ ಪುಸ್ತಕ ಓದಲೊಂದು ತಾಣ]

ಸರ್ಕಾರದ 1 ಕೋಟಿ ರೂಪಾಯಿ ಅನುದಾನದಲ್ಲಿ ಪ್ರಕಟವಾದ ಪುಸ್ತಕಗಳನ್ನು ಕಟ್ಟಡವೊಂದರ ಕೆಳಮಹಡಿಯಲ್ಲಿ ದಾಸ್ತಾನು ಮಾಡಲಾಗಿತ್ತು. ಆಗಸ್ಟ್ 31 ರಂದು ಸುರಿದ ಭೀಕರ ಮಳೆ ಪರಿಣಾಮ ಕೆಳಮಹಡಿಗೆ ನೀರು ನುಗ್ಗಿದ್ದು ಪುಸ್ತಕಗಳು ಹಾಳಾಗಿವೆ. ನಂತರ ತಾರಸಿಯ ಮೇಲೆ ಒಣಗಿಸುವ ಪ್ರಯತ್ನ ಮಾಡಲಾಗಿದೆ ಎಂದು ವಿವಿಯ ಮೂಲಗಳು ಹೇಳುತ್ತವೆ.
ಸಂಗತಿ ರಾಜ್ಯಪಾಲ, ಕುಲಪತಿ ವಜುಭಾಯಿ ರುಡವಾಲಾ ಗಮನಕ್ಕೂ ಹೋಗಿದೆ ಎನ್ನಲಾಗಿದೆ. ಈ ಬಗ್ಗೆ ತನಿಖೆ ನಡೆಸಲು ಒಂದು ಸಮಿತಿ ನೇಮಕವೂ ಆಗಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬಿಜಾಪುರದ ಮಹಿಳಾ ವಿವಿಗೆ 1 ಕೋಟಿ ರೂ. ಅನುದಾನ ನೀಡಿತ್ತು. ಅದನ್ನು ಬಳಸಿಕೊಂಡು ವಿವಿ ಪುಸ್ತಕ ಪ್ರಕಟ ಮಾಡಿತ್ತು. ಆದರೆ ಸರಿಯಾದ ನಿರ್ವಹಣೆಯಿಲ್ಲದೇ ಎಲ್ಲ ಪುಸ್ತಗಳು ನೀರು ಪಾಲಾಗಿವೆ.[ಭೈರಪ್ಪ ಹೊಗಳಿದ 'ಕರ್ಮ' ಕೃತಿ ವಿಶ್ವದೆಲ್ಲೆಡೆ ಲಭ್ಯ]
40 ಲ್ಷ ರೂ ಮೌಲ್ಯದ ಪುಸ್ತಕಗಳು ಉಪಯೋಗಕ್ಕೆ ಬರುವುದು ಅನುಮಾನ. ಡಾ. ಜಯಶ್ರೀ ನೇತೃತ್ವದ ಸಮಿತಿ ಈ ಪ್ರಕರಣದ ತನಿಖೆ ನಡೆಸುತ್ತಿದ್ದು ಆಡಳಿತ ಮಂಡಳಿಗೆ ಸ್ಪಷ್ಟನೆ ಕೇಳಿ ಈಗಾಗಲೇ ನೋಟಿಸ್ ಜಾರಿ ಮಾಡಿದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications