ವಿಜಯಪುರ ಮಹಿಳಾ ವಿಶ್ವವಿದ್ಯಾಲಯ ಮರುನಾಮಕರಣಕ್ಕೆ ಅಸ್ತು!

Written By: Ramesh
Subscribe to Oneindia Kannada

ವಿಜಯಪುರ, ಸೆ. 22 : ವಿಜಯಪುರದ ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯ ಮರುನಾಮಕರಣಕ್ಕೆ ಸರ್ಕಾರ ಅಸ್ತು ನೀಡಿದೆ. ವಿಜಯಪುರ ಮಹಿಳಾ ವಿವಿಯನ್ನು ಅಕ್ಕಮಹಾ ದೇವಿ ಮಹಿಳಾ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಯಿತು.

ಕಾವೇರಿ ವಿಚಾರವಾಗಿ ಬುಧವಾರ ನಡೆದ ತುರ್ತು ಸಚಿವ ಸಂಪುಟ ಸಭೆಯಲ್ಲಿ ವಿಜಯಪುರ ಮಹಿಳಾ ವಿವಿಯನ್ನು ಅಕ್ಕಮಹಾ ದೇವಿ ಮಹಿಳಾ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಯಿತು. ಮರುನಾಮಕರಣಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿತು.

Women's University

2014ನೇ ಡಿಸೆಂಬರ್‌ನಲ್ಲಿ ವಿಜಯಪುರದಲ್ಲಿ ನಡೆದ ಅಖಿಲ ಭಾರತ 12ನೇ ಸಾಹಿತ್ಯ ಸಮ್ಮೇಳನದಲ್ಲಿ ಅಕ್ಕಮಹಾದೇವಿಯವರ ಹೆಸರನ್ನು ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯಕ್ಕೆ ಇಡುವ ಸಂಬಂಧ ಸರ್ಕಾರಕ್ಕೆ ಕೋರಿ ಗೊತ್ತುವಳಿಯನ್ನು ಅಂಗಿಕರಿಸಲಾಗಿತ್ತು.
ಈಗ ಅದಕ್ಕೆ ಸರ್ಕಾರ ಅನುಮೋದನೆ ನೀಡಿದೆ.

ಹೊಸ ನಾಮಕರಣಗೊಳಿಸಲು ವಿಶೇಷ ಕಾಳಜಿ ವಹಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿಯವರಿಗೆ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಅಭಿನಂದನೆ ಸಲ್ಲಿಸಿದ್ದಾರೆ.

ವಿಜಯಪುರದಲ್ಲಿ 2003-04ನೇ ಶೈಕ್ಷಣಿಕ ವರ್ಷದಿಂದ ಮಹಿಳಾ ವಿವಿ ಸ್ಥಾಪಿಸಲಾಗಿದೆ. ಕರ್ನಾಟಕದ ಏಕೈಕ ಮಹಿಳಾ ವಿಶ್ವವಿದ್ಯಾಲಯ ಇದಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
The Karnataka State Women's University has been renamed Karnataka State Akka Mahadevi Women's University.The new name was approved at a cabinet meeting in Bengaluru on Wednesday 21.
Please Wait while comments are loading...