ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾವೇರಿ ವಿವಾದ : ತಜ್ಞರ ತಂಡ ಕಳಿಸುವಂತೆ ಕೇಂದ್ರಕ್ಕೆ ಪತ್ರ

By ವಿಕಾಸ್ ನಂಜಪ್ಪ
|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 08 : ಕರ್ನಾಟಕದಲ್ಲಿನ ಪರಿಸ್ಥಿತಿಯ ಕುರಿತು ಅವಲೋಕನ ನಡೆಸಲು ತಜ್ಞರ ತಂಡವನ್ನು ಕಳಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಕೇಂದ್ರ ಸರ್ಕಾರ ತಂಡವನ್ನು ಕಳಿಸಿದರೆ ಅದು ಕರ್ನಾಟಕ ಮತ್ತು ತಮಿಳುನಾಡು ಎರಡೂ ರಾಜ್ಯಗಳಿಗೆ ಭೇಟಿ ನೀಡಲಿದೆ.

ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಅರವಿಂದ್ ಜಾಧವ್ ಅವರು ಈ ಕುರಿತು ಕೇಂದ್ರ ಜಲಸಂಪನ್ಮೂಲ ಇಲಾಖೆಗೆ ಪತ್ರ ಬರೆದಿದ್ದಾರೆ. ಆದಷ್ಟು ಬೇಗ ಕರ್ನಾಟಕದಲ್ಲಿನ ಪರಿಸ್ಥಿತಿಯನ್ನು ಅವಲೋಕನ ಮಾಡಲು ತಂಡವನ್ನು ಕಳಿಸಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.[ಕಾವೇರಿ ವಿವಾದ : ಸಿದ್ದರಾಮಯ್ಯ ರೆಡಿಯೋ ಸಂದೇಶ]

arvind jadhav

ಬುಧವಾರ ರಾಜ್ಯವನ್ನು ಉದ್ದೇಶಿಸಿ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 'ನಾಲ್ಕು ದಿನಗಳೊಳಗೆ ಮೇಲುಸ್ತುವಾರಿ ಸಮಿತಿ ಮುಂದೆ ಹೋಗುವಂತೆ ಸುಪ್ರೀಂಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ. ನಾವು ತಡಮಾಡದೆ ಮೇಲುಸ್ತುವಾರಿ ಸಮಿತಿ ಮುಂದೆ ಹಾಜರಾಗಿ ರಾಜ್ಯದ ಸಂಕಷ್ಟದ ಪರಿಸ್ಥಿತಿಯನ್ನು ಹೇಳಿಕೊಳ್ಳುತ್ತೇವೆ' ಎಂದು ಹೇಳಿದ್ದರು.[ಚಿತ್ರಗಳು : ಮಂಡ್ಯದಲ್ಲಿ ಕಾವೇರಿ ಹೋರಾಟ]

ಈ ವರ್ಷದ ಜೂನ್ ತಿಂಗಳಿನಿಂದ ಆಗಸ್ಟ್ ಅಂತ್ಯದ ವರೆಗಿನ ಅವಧಿಯಲ್ಲಿ ಕಾವೇರಿ ಜಲಾನಯನ ಪ್ರದೇಶ ಮಳೆಯ ತೀವ್ರ ಅಭಾವಕ್ಕೆ ತುತ್ತಾಗಿದೆ. ನಮ್ಮ ನಾಲ್ಕು ಜಲಾಶಯಗಳಾದ ಕೃಷ್ಣರಾಜ ಸಾಗರ, ಹಾರಂಗಿ, ಹೇಮವಾತಿ ಮತ್ತು ಕಬಿನಿಗೆ ಆಗಸ್ಟ್ ಅಂತ್ಯದ ವರೆಗೆ ಸಾಮಾನ್ಯ ವರ್ಷದಲ್ಲಿ 215.70 ಟಿಎಂಸಿ ನೀರು ಹರಿದುಬರಬೇಕಾಗಿತ್ತು. ಆದರೆ ಮಳೆಯ ಅಭಾವದಿಂದಾಗಿ ಈ ವರ್ಷ ಕೇವಲ 114.66 ಟಿಎಂಸಿ ನೀರು ಮಾತ್ರ ಬಂದಿದೆ.

Must Read : ಬೆರಳ ತುದಿಯಲ್ಲಿ ರಿಲಯನ್ಸ್ ಕಾರ್ ವಿಮೆ ನವೀಕರಣ

ಆದರೆ, ತಮಿಳುನಾಡು ಸರ್ಕಾರ ಕಾವೇರಿ ನದಿ ನೀರು ಬಿಡುವಂತೆ ಕರ್ನಾಟಕಕ್ಕೆ ಸೂಚಿಸುವಂತೆ ಸುಪ್ರೀಂಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ 10 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 15,000 ಕ್ಯುಸೆಕ್ ನೀರು ಹರಿಸುವಂತೆ ಆದೇಶ ನೀಡಿದೆ.

English summary
The Chief Secretary of Karnataka has written to the water secretary at the centre to send a team to analyse and study the water situation. The letter written in the backdrop of the Cauvery water verdict urges the team of experts to visit both Karnataka and TN and study the situation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X