ಮಿನಿ ಮಹಾಸಮರ: ಮೇ 29 ಕ್ಕೆ ಸ್ಥಳೀಯ ಸಂಸ್ಥೆಗಳ ಚುನಾವಣೆ

ಬೆಂಗಳೂರು, ಮೇ 28: ನಾಳೆ (ಮೇ 29) ರಂದು ರಾಜ್ಯದ 61 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗವು ಸರ್ವ ತಯಾರಿಯನ್ನು ಮಾಡಿಕೊಂಡಿದೆ.

ಸ್ಥಳೀಯ ಚುನಾವಣೆಯಲ್ಲಿ ರಾಜ್ಯದ ಮಿನಿ ಮಹಾಸಮರವೆಂದೇ ಬಿಂಬಿಸಲಾಗುತ್ತಿದ್ದು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮೈತ್ರಿ ಪಕ್ಷಗಳಾದ ಜೆಡಿಎಸ್-ಕಾಂಗ್ರೆಸ್ ಪರಸ್ಪರ ಎದುರಾಳಿಗಳಾಗಿ ಸ್ಪರ್ಧಿಸುತ್ತಿದ್ದಾರೆ.

ನಗರ ಸಭೆ, ಪಂಚಾಯಿತಿ, ಪುರಸಭೆ, ತಾಲ್ಲೂಕು ಪಂಚಾಯಿತಿ ಹೀಗೆ ಒಟ್ಟು 61 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯುತ್ತಿದ್ದು, ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಚುನಾವಣೆ ಮತದಾನ ನಡೆಯಲಿದೆ. ಚುನಾವಣೆ ನಡೆಯುತ್ತಿರುವ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಸಾರ್ವಜನಿಕ ರಜೆ ಘೋಷಿಸಲಾಗಿದೆ.

Karnatakas 61 local body election on May 29

ಚುನಾವಣಾ ಆಯೋಗದ ಮಾಹಿತಿಯಂತೆ 61 ಸ್ಥಳೀಯ ಸಂಸ್ಥೆಗಳ 1326 ವಾರ್ಡ್‌ಗಳ ಪೈಕಿ 30 ವಾರ್ಡ್‌ಗಳಲ್ಲಿ ಅಭ್ಯರ್ಥಿಗಳು ಈಗಾಗಲೇ ಅವಿರೋಧವಾಗಿ ಆಯ್ಕೆಯಾಗಿದೆ. ಕಾಂಗ್ರೆಸ್‌ನಿಂದ 1224, ಬಿಜೆಪಿಯಿಂದ 1125, ಜೆಡಿಎಸ್ 780 ಅಭ್ಯರ್ಥಿಗಳು ಸೇರಿದಂತೆ ಒಟ್ಟು 4360 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.

ನಾಳೆ ಮತದಾನವು ಸೂಕ್ತವಾಗಿ ನಡೆಯದೆ ಮರುಮತದಾನದ ಅವಶ್ಯಕತೆ ಬಿದ್ದಲ್ಲಿ, ಮೇ 30 ರಂದೇ ಮರುಮತದಾನ ನಡೆಸಲಾಗುತ್ತದೆ. ಮೇ 31 ರಂದು ಮತ ಎಣಿಕೆ ನಡೆಯಲಿದ್ದು, ಅಂದೇ ಫಲಿತಾಂಶ ಹೊರಬೀಳಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+