Karnataka Rains: ಎಚ್ಚರ..ಎಚ್ಚರ..ಎಚ್ಚರ.. ರಾಜ್ಯದಲ್ಲಿ ಮತ್ತೆ ವರುಣಾರ್ಭಟ; ಜೂನ್ 26ರವರೆಗೂ ಭಾರಿ ಮಳೆ

ಬೆಂಗಳೂರು, ಜೂನ್‌ 20: ಕರ್ನಾಟಕದಲ್ಲಿ ಮಳೆರಾಯನ ಅಬ್ಬರ ಮುಂದುವರೆಯಲಿದೆ. ರಾಜಧಾನಿ ಬೆಂಗಳೂರು ಸೇರಿ ವಿವಿಧ ಭಾಗಗಳಲ್ಲಿ ವರುಣಾರ್ಭಟ ಜೋರಾಗಿದ್ದು, ಕರ್ನಾಟಕದಾದ್ಯಂತ ಜೂನ್ 26ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 7 ದಿನಗಳ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ. ಇನ್ನೂ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕಳೆದ ಎರಡು ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವರುಣಾ ದೇವನ ಅಬ್ಬರ ಕಡಿಮೆಯಾಗಿತ್ತು. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಜೂನ್ 26ರವರೆಗೂ ಮಳೆಯಾಗಲಿದೆ.

Karnataka s coastal districts will witness heavy rainfall till June 26

ಕಳೆದ ವರ್ಷಕ್ಕಿಂತ ಈ ವರ್ಷ ಮುಂಗಾರು ಮಳೆ ರಾಜ್ಯಕ್ಕೆ ಮೊದಲೇ ಭೇಟಿ ಕೊಟ್ಟಿದ್ದು, ಕಳೆದ ವರ್ಷಕ್ಕಿಂತ ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ಕರ್ನಾಟಕದಲ್ಲಿ ಮುಂಗಾರು ಆರಂಭವಾಗುತ್ತಿದ್ದಂತೆ ಮಳೆ ಯ ಪ್ರಮಾಣ ಕಡಿಮೆಯಾಗಿತ್ತು. ಮುಂಗಾರು ಪೂರ್ವ ಮಳೆಯ ಅಬ್ಬರವೇ ಹೆಚ್ಚಿತ್ತು. ಕಳೆದ ಎರಡು ದಿನಗಳಿಂದ ಮುಂಗಾರು ಮಳೆ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ತುಸು ಹೆಚ್ಚಿತ್ತು. ಇದೀಗ ಮತ್ತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಮಲೆನಾಡು ಹಾಗೂ ಕರಾವಳಿ ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಅಲ್ಲದೇ ವಿಜಯನಗರ, ತುಮಕೂರು, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬಳ್ಳಾರಿಯಲ್ಲಿ ಒಣಹವೆ ಇರಲಿದೆ. ಉಪ್ಪಿನಂಗಡಿ, ಗೇರುಸೊಪ್ಪ, ಮಂಕಿ, ಯಲ್ಲಾಪುರ, ಆಗುಂಬೆ, ಕೊಟ್ಟಿಗೆಹಾರ, ಕಮ್ಮರಡಿ, ಭಾಗಮಂಡಲ, ಹುಂಚದಕಟ್ಟೆ, ಶಿರಾಲಿ, ಕದ್ರಾ, ಸುಳ್ಯ, ಕುಮಟಾ, ಧರ್ಮಸ್ಥಳ, ಬೆಳ್ತಂಗಡಿ, ಹೊನ್ನಾವರ, ಕಳಸ, ಹೊಸಕೋಟೆ, ಅಂಕೋಲಾ, ಮೂಡುಬಿದಿರೆ, ಕಾರವಾರದಲ್ಲಿ ಮಳೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+