7th Pay Commission: ಬಜೆಟ್ ಮಂಡನೆಗೂ ಮುನ್ನ ರಾಜ್ಯ 4 ಸಾರಿಗೆ ನಿಗಮಗಳಿಂದ ಸರ್ಕಾರಕ್ಕೆ ಎಚ್ಚರಿಕೆ
Karnataka Budget 2025: ರಾಜ್ಯದ 2025ನೇ ಸಾಲಿನ ಬಜೆಟ್ ಅನ್ನು ಇಂದು (ಮಾರ್ಚ್ 07) ಇನ್ನೂ ಕೆಲವೇ ಕ್ಷಣಗಳಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಂಡನೆ ಮಾಡಲಿದ್ದಾರೆ. ಈ ಬಜೆಟ್‌ನಲ್ಲಿ ಇಡೀ ರಾಜ್ಯದ ಜನತೆ ದೊಡ್ಡ ಮಟ್ಟದಲ್ಲಿ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಹಾಗೆಯೇ ರಾಜ್ಯದ 4 ಸಾರಿಗೆ ನಿಗಮಗಳ ಸಂಘನೆಗಳ ಒಕ್ಕೂಟವೂ ಕೂಡ ಬೇಡಿಕೆಯೊಂದನ್ನು ಸರ್ಕಾರದ ಮುಂದಿಟ್ಟಿದೆ.
ಇದೀಗ ಗ್ಯಾರಂಟಿ ಗದ್ದಲಗಳ ನಡುವೆ ಸಿಎಂ ಸಿದ್ದರಾಯಮಯ್ಯ ಅವರು ದಾಖಲೆಯ 16ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಬಜೆಟ್‌ನಲ್ಲಿ ರಾಜ್ಯದ 4 ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟವೂ ಕೂಡ ಬೇಡಿಕೆಯೊಂದನ್ನು ಸರ್ಕಾರದ ಮುಂದಿಟ್ಟು ಎಚ್ಚರಿಕೆ ಸಂದೇಶ ರವಾನಿಸಿದೆ.

2025ನೇ ಸಾಲಿನ ರಾಜ್ಯದ ಬಜೆಟ್‌ನಲ್ಲಿ ಸಾರಿಗೆ ನೌಕರರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸಿ, 7ನೇ ವೇತನ ಆಯೋಗದ ವರದಿಯಂತೆ ಎಲ್ಲಾ ಸೌಲಭ್ಯ ಸೇರಿದಂತೆ ಇತರೆ ಬೇಡಿಕೆಗಳಿಗೆ ಸಂಬಂಧಿಸಿದಂತೆ ಆದೇಶ ಹೊರಡಿಸಬೇಕು. ಇಲ್ಲದಿದ್ದರೆ, ಮುಂದಿನ ಹೋರಾಟಕ್ಕೆ ದಿನಾಂಕ ನಿಗದಿಪಡಿಸಿ ಸಾರಿಗೆ ಮುಷ್ಕರಕ್ಕೆ ಕರೆ ನೀಡಲಾಗುತ್ತದೆ ಎಂದು ಕರ್ನಾಟಕ ರಾಜ್ಯ 4 ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಎಚ್ಚರಿಕೆ ನೀಡಿದೆ.
ಎಚ್.ಡಿ.ಕುಮಾರಸ್ವಾಮಿ ಹೇಳಿದ್ದೇನು?: ರಾಜ್ಯದ ಖಜಾನೆ ಖಾಲಿಯಾಗಿದ್ದು, ಬಹಳಷ್ಟು ಹಣ ಸೋರಿಕೆಯಾಗಿದೆ. ಇದರ ಮಧ್ಯೆ ಬಜೆಟ್ ಅಧಿವೇಶನ ನಡೆಸಿದರೆ ಏನಾದರೂ ಅರ್ಥವಿದೆಯೇ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನ 136 ಕ್ಷೇತ್ರಗಳಲ್ಲಿ ಗೆಲ್ಲಿಸಿದ್ದಾರೆ. ಒಳ್ಳೆಯ ಕೆಲಸಗಳನ್ನು ಮಾಡುವಂತೆ ಕೇಳುತ್ತಲೇ ಇದ್ದೇನೆ. ಕಳೆದ ಬಜೆಟ್‌ನಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 5,000 ಕೋಟಿ ರೂಪಾಯಿ ಕ್ರಿಯಾಯೋಜನೆ ಘೋಷಿಸಿತ್ತು. ನಂತರ ಒಂದು ಬಿಡಿಗಾಸು ಕೊಟ್ಟಿಲ್ಲ ಎಂದರು.
ಅಂಕಿ ಅಂಶಗಳನ್ನು ನೋಡಿದರೆ ಎಷ್ಟರ ಮಟ್ಟಿಗೆ ಬಡವರ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟಿದೆ ಎಂದು ಗೊತ್ತಾಗುತ್ತದೆ. ಕಲ್ಯಾಣ ಕರ್ನಾಟಕಕ್ಕೆ ಎಷ್ಟು ಹಣ ನೀಡಲಾಗಿದೆ? ಸರ್ಕಾರ ಜನರ ಸಮಸ್ಯೆಗಳನ್ನು ಪರಿಹರಿಸುವತ್ತ ಗಮನ ಹರಿಸುವುದಕ್ಕಿಂತ ರಾಜಕೀಯ ಹೇಳಿಕೆಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಈಗಿನ ಸ್ಥಿತಿ ನೋಡಿದರೆ ರಾಜ್ಯ ಬಜೆಟ್‌ನಲ್ಲಿ ದೊಡ್ಡ ಮಟ್ಟದ ನಿರೀಕ್ಷೆ ಇಡಲು ಸಾಧ್ಯವಿಲ್ಲ. ಗ್ಯಾರಂಟಿ ಹೆಸರಿನಲ್ಲಿ ಸಾಲ ಆಗದಿರಲೆಂದು ಆಶಿಸುತ್ತೇನೆ ಎಂದು ಹೇಳಿದರು.
ಭಾನುವಾರ ಸಂಜೆ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಜೆಟ್ ಅಧಿವೇಶನದಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ತಂತ್ರಗಳ ಕುರಿತು ಚರ್ಚಿಸಲಾಯಿತು.
ಸಭೆ ಕುರಿತು ಮಾತನಾಡಿದ ಕುಮಾರಸ್ವಾಮಿಯವರು ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದಕ್ಕಿಂತ ಅವುಗಳನ್ನು ದುರ್ಬಳಕೆ ಮಾಡಿಕೊಂಡು ರಾಜಕೀಯ ಲಾಭ ಮಾಡಿಕೊಂಡಿದ್ದೇ ಹೆಚ್ಚು. 3-4 ತಿಂಗಳು ಗೃಹಲಕ್ಷ್ಮಿ ಹಣ ಬಾಕಿ ಇಟ್ಟುಕೊಂಡು ಯಾವುದಾದರೂ ಚುನಾವಣೆ ಬಂದಾಗ ಒಮ್ಮೆಲೇ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗುತ್ತಿದೆ. ಇದು ಸರ್ಕಾರ ಜನರಿಗೆ ಮಾಡುತ್ತಿರುವ ಮಹಾಮೋಸ. ಈ ವಿಷಯವನ್ನು ಕಲಾಪದಲ್ಲಿ ಪರಿಣಾಮಕಾರಿಯಾಗಿ ಚರ್ಚೆ ನಡೆಸಬೇಕೆಂದಯ ಸಲಹೆ ನೀಡಿದದ್ದ.












Click it and Unblock the Notifications