Rain Alert: ಆ. 21ರವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ, ಇಂದಿನ ಹವಾಮಾನ ವರದಿ
ಬೆಂಗಳೂರು, ಆಗಸ್ಟ್ 15: ಕರ್ನಾಟಕದಾದ್ಯಂತ ಮುಂಗಾರು ಮಳೆ ಚುರುಕುಗೊಳ್ಳಲು ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ತೀವ್ರತೆ ಕಾರಣವೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಗಾರು ಋತುವಿನ ಆರಂಭದಿಂದಲೂ ಸಮುದ್ರ ಮಟ್ಟದಲ್ಲಿ ನಿರಂತರ ಬದಲಾವಣೆಗಳು ಮುಂದುವರಿದಿವೆ. ಪರಿಣಾಮ ಕರಾವಳಿ, ಮಲೆನಾಡು ಹಾಗೂ ಒಳನಾಡಿನಲ್ಲಿ ಸಾಧಾರಣದಿಂದ ಭಾರೀ ಮಳೆ ಆಗುತ್ತಿದೆ. ರಾಜ್ಯದಲ್ಲಿ ಮುಂದಿನ ಆಗಸ್ಟ್ 21ರವರೆಗೆ ಏಳು ದಿನ ಭಾರೀ ಮಳೆ ನಿರೀಕ್ಷೆ ಇದೆ. ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ನೀಡಲಾಗಿದೆ.
ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಅತ್ಯಧಿಕ ಮಳೆ ಮುನ್ಸೂಚನೆ ಇದೆ. ಗಾಳಿಯ ವೇಗವು ಸಮುದ್ರ ತೀರದಲ್ಲಿ ಹೆಚ್ಚಾಗಲಿದೆ. ಮಲೆನಾಡಿನ ಜಿಲ್ಲೆಗಳಲ್ಲಿ ಕೊಂಚ ಮಳೆ ತಗ್ಗಿದ್ದರು ಸಹಿತ ಭಾರೀ ಮಳೆ ಆಗಲಿದೆ. ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಸಾಧಾರಣ ಮತ್ತು ಭಾರಿ ಮಳೆ ನಿರೀಕ್ಷೆ ಇದೆ. ಧಾರಾಕಾರ ಮಳೆಯ ಸೋಮವಾರವು ಮುಂದುವರಿದರೆ ಅಂದು ಒಂದರೆ ಜಿಲ್ಲೆಯ ಕೆಲ ಶಾಲೆಗಳಿಗೆ ರಜೆ ನೀಡುವ ನಿರೀಕ್ಷೆ ಇದೆ.

ಆಗಸ್ಟ್ 15 ರಂದು ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಅತೀ ಭಾರಿ ಮಳೆ ಪ್ರಯುಕ್ತ ಆರೆಂಜ್ ಅರ್ಲ್ ನೀಡಲಾಗಿದೆ. ನಂತರ ಆಗಸ್ಟ್ 18 &19 ರಂದು ಮತ್ತೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ನಿರೀಕ್ಷೆ ಇದೆ. ಇಲ್ಲಿ ಕನಿಷ್ಠ 70 ಮಿಲಿ ಮೀಟರ್ ಮಳೆ ನಿರೀಕ್ಷೆ ಇದ್ದು, ಏಳು ದಿನಗಳಲ್ಲಿ ನಡುವೆ ಬೇರೆ ಬೇರೆ ದಿನಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಒಳನಾಡು ಜಿಲ್ಲೆಗಳಿಗೆ ಚುರುಕು ಮಳೆ
ಈ ಮೇಲಿನ ಜಿಲ್ಲೆಗಳಲ್ಲಿ ಮುಂಗಾರು ನಿರಂತರವಾಗಿ ಅಬ್ಬರಿಸದೇ ದಿನ ಬಿಟ್ಟು ದಿನ ಚುರುಕು ಮಳೆ ಆಗಲಿದೆ. ಉಳಿದಂತೆ ತುಮಕೂರು, ವಿಜಯನಗರ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಜಿಟಿ ಜಿಟಿ ಮಳೆ ನಿರೀಕ್ಷೆ ಇದೆ. ಇದರ ಹೊರತು ಗಂಭೀರ ಸ್ವರೂಪದ ಮಳೆ ಲಕ್ಷಣ ಈ ಭಾಗದಲ್ಲಿ ಇಲ್ಲ ಎಂದು ಹವಾಮಾನ ತಜ್ಞರು ಶುಕ್ರವಾರದ ಮುನ್ಸೂಚನೆಯಲ್ಲಿ ತಿಳಿಸಿದ್ದಾರೆ.
ರಾಜ್ಯದೆಲ್ಲಡೆ ಮೋಡ ಕವಿದ ವಾತಾವರಣ, ಚಳಿ
ನೆನ್ನೆ ಉತ್ತರ ಕನ್ನಡ ಜಿಲ್ಲೆಯ ವ್ಯಾಪ್ತಿಯ ಅನೇಕ ಕಡೆಗಳಲ್ಲಿ ಭಾರೀ ಮಳೆ ಆಗಿದೆ. ವಂಡಿಗೆ ಭಾಗದಲ್ಲಿ ಗರಿಷ್ಠ 161 ಮಿಲಿ ಮೀಟರ್ ಮಳೆ ದಾಖಲಾಗಿದೆ. ರಾಜ್ಯಾದ್ಯಂತ ತಂಪು ವಾತಾವರಣ ಕಂಡ ಬರುತ್ತಿದೆ. ಉತ್ತರ ಕರ್ನಾಟಕದ ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಬೆಂಗಳೂರು ನಗರ, ಶಿವಮೊಗ್ಗ ಭಾಗಗಳಲ್ಲಿ ವ್ಯಾಪಕ ಮಳೆ ದಾಖಲಾಗಿದೆ. ದಿನವೀಡಿ ಮಳೆಗೆ ಜನರು ಹೈರಾಣಾಗಿದ್ದಾರೆ. ಮೋಡ ಕವಿದ ವಾತಾವರಣ ಕಂಡು ಬರುತ್ತಿದ್ದು, ಸೂರ್ಯನ ದರ್ಶನ ಅಪರೂಪ ಎಂಬಂತಹ ವಾತಾವರಣ ರಾಜ್ಯದಲ್ಲಿ ನಿರ್ಮಾಣವಾಗಿದೆ.












Click it and Unblock the Notifications