Karnataka Weather: ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜನವರಿ 8ರವರೆಗೆ ಮಳೆ- ಇಲ್ಲಿದೆ ಮಾಹಿತಿ

ಬೆಂಗಳೂರು, ಜನವರಿ 02: ರಾಜ್ಯದಲ್ಲಿ ಕಳೆದ ವರ್ಷ ವಾಡಿಕೆಗಿಂತ ಸಾಕಷ್ಟು ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ತೀವ್ರ ಬರಗಾಲ ಎದುರಾಯಿತು. ಆದರೆ, ಈ ವರ್ಷ ವಾಡಿಕೆಯಷ್ಟು ಮಳೆಯಾಗಲಿದೆ ಎನ್ನುವ ಆಶಾಭಾವವಿದೆ.

ಹೌದು, ರಾಜ್ಯದಲ್ಲಿ ಒಂದೆಡೆ ಚಳಿ ಮತ್ತೊಂದೆಡೆ ಮೋಡಕವಿದ ವಾತಾವರಣವಿದ್ದು, ಕೆಲವೆಡೆ ಮುಂದಿನ ನಾಲ್ಕೈದು ದಿನ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಜನವರಿ 2 ರಿಂದ 8 ರವರೆಗೆ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಅಲ್ಲದೇ ಜನವರಿ 5 ಮತ್ತು ಜನವರಿ 6 ರಂದು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Karnatakas Many Districts Will Witness Heavy Rainfall From January 3

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಹಾವೇರಿ, ಕೊಪ್ಪಳ, ರಾಯಚೂರಿನಲ್ಲಿ ಮಳೆಯಾಗಲಿದೆ. ಅಲ್ಲದೇ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಗದಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ರಾಜ್ಯದ ಗರಿಷ್ಠ ತಾಪಮಾನ ಮಾಹಿತಿ ಇಲ್ಲಿದೆ.

ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ರಾಜ್ಯದಲ್ಲಿ ಚಳಿಯ ವಾತಾವರಣ ಹೆಚ್ಚಾಗಿದ್ದು, 28 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಎಚ್​ಎಎಲ್​ನಲ್ಲಿ 26.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಇತ್ತ ವಿಜಯಪುರದಲ್ಲಿ 10.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇನ್ನೂ ಬೆಂಗಳೂರಿನಲ್ಲಿ 27 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಮಂಗಳೂರಿನಲ್ಲಿ 31 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ಹಾಗೂ ಶಿವಮೊಗ್ಗದಲ್ಲಿ 31ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶವಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+