Karnataka Rain: ಡಿ. 5 ರವರೆಗೂ ರಾಜ್ಯದ ಈ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣದೇವ? ಹವಾಮಾನ ಇಲಾಖೆ ಕೊಟ್ಟ ಸೂಚನೆ ಏನು?

ಬೆಂಗಳೂರು, ಡಿಸೆಂಬರ್‌ 01: ಕರ್ನಾಟಕದಲ್ಲಿ ಹಿಂಗಾರು ಜೋರಾಗಿದ್ದು, ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಡಿಸೆಂಬರ್ 5ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೌದು, ಕರ್ನಾಟಕದ ಹಲವು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ಕಲಬುರಗಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Karnatakas Many Districts Will Witness Heavy Rainfall Till December 5

ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ, ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಸಾಮಾನ್ಯವಾಗಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ಬಹಳಷ್ಟು ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗ್ಗೆ ಮಂಜು ಮುಸುಕಿದ ವಾತಾವರಣವಿರಲಿದೆ ಎಂದು ಹೇಳಿದೆ.

ಮುಂದಿನ ಹಲವು ದಿನಗಳಲ್ಲಿ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಲಕ್ಷಣಗಳು ಇವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಬೆಂಗಳೂರು ಸೇರಿ ರಾಜ್ಯದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಡಿಸೆಂಬರ್ 5 ರವರೆಗೆ ಮಳೆಯಾಗಲಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ತುಮಕೂರು ಹಾಗೂ ವಿಜಯನಗರದಲ್ಲಿ ಮಳೆಯಾಗಲಿದೆ.

ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮಳೆ ಸಾಮಾನ್ಯ ಪ್ರಮಾಣದಲ್ಲಿ ಆಗಲಿದೆ. ಆದರೆ ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಹಿಂಗಾರು ಮಳೆ ಅಬ್ಬರಿಸುವ ಸಾಧ್ಯತೆಗಳು ಇವೆ. ಈ ಪೈಕಿ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ತುಮಕೂರು, ಚಿತ್ರದುರ್ಗ, ಜಿಲ್ಲೆಗಳಲ್ಲಿ ಭಾರೀ ಮಳೆ ಸಂಭವವಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+