Karnataka Rain: ಡಿ. 7 ರವರೆಗೂ ರಾಜ್ಯದ ಈ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣದೇವ?
ಬೆಂಗಳೂರು, ಡಿಸೆಂಬರ್ 02: ಕರ್ನಾಟಕದಲ್ಲಿ ಹಿಂಗಾರು ಜೋರಾಗಿದ್ದು, ಆಗ್ನೇಯ ಮತ್ತು ನೈಋತ್ಯ ಬಂಗಾಳ ಕೊಲ್ಲಿಯ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಡಿಸೆಂಬರ್ 7 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು, ಕರ್ನಾಟಕದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 5ರವರೆಗೆ ಮಳೆಯಾಗಲಿದ್ದು, ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಶನಿವಾರ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಒಣಹವೆ ಬೀಸಲಿದೆ. ಅಲ್ಲದೇ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮನಾ ಇಲಾಖೆ ಸೂಚನೆ ನೀಡಿದೆ.
ರ್ನಾಟಕದ ಹಲವು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ಕಲಬುರಗಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇನ್ನೂ ತಮಿಳುನಾಡು, ಪಾಂಡಿಚೇರಿ, ಆಂದ್ರಪ್ರದೇಶ, ಓಡಿಸ್ಸಾ ರಾಜ್ಯಗಳ ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮನ ಇಲಾಖೆ ಎಚ್ಚರಿಕೆ ನೀಡಿದೆ












Click it and Unblock the Notifications