Karnataka Weather: ರಾಜ್ಯದ 22ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನವರಿ 9ರವರೆಗೆ ಮಳೆ: ಎಲ್ಲೆಲ್ಲಿ? ಇಲ್ಲಿದೆ ಮಾಹಿತಿ

ಬೆಂಗಳೂರು, ಜನವರಿ 03: ರಾಜ್ಯದಲ್ಲಿ ಕಳೆದ ವರ್ಷ ವಾಡಿಕೆಯಂತೆ ಮಳೆಯಾಗದೇ ತೀವ್ರ ಬರಗಾಲ ಎದುರಾಯಿತು.ಈ ವರ್ಷ ಆರಂಭದಿಂದಲೇ ಮಳೆಯಾಗಲಿದೆ ಎನ್ನುವ ಆಶಾಭಾವವಿದೆ. ಈಗಾಗಲೇ ರಾಜ್ಯಾದ್ಯಂತ ಶೀತಗಾಳಿ ಬೀಸುತ್ತಿದ್ದು, ಹಲವೆಡೆ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ.

ಹೌದು, ವರ್ಷದ ಆರಂಭದಲ್ಲಿಯೇ ವರುಣಾದೇವನ ಆಗಮನವಾಗಲಿದೆ. ರಾಜ್ಯದ 22 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನವರಿ 9 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnatakas Many Districts Will Witness Heavy Rainfall Till january 09

ಇಂದಿನಿಂದ 5-6 ದಿನಗಳ ಕಾಲ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಅಲ್ಲದೇ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಜನವರಿ 7 ರಿಂದ 9 ರವರೆಗೆ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇನ್ನೂ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಇಂದು ಮತ್ತು ನಾಳೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.

ಇನ್ನೂ ಬೆಂಗಳೂರಿನಲ್ಲಿ ಶೀತಗಾಳಿಯಿದ್ದು, ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ,ವಿಜಯನಗರದಲ್ಲಿ ಜನವರಿ 6 ರಿಂದ 3 ದಿನಗಳ ಕಾಲ ಮಳೆಯಾಗಲಿದೆ.

ಬೆಂಗಳೂರುನಲ್ಲಿ 28 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್​ಎಎಲ್​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ವಿಜಯಪುರದಲ್ಲಿ 11.1 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಮಂಗಳೂರಿನಲ್ಲಿ 29 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಶಿವಮೊಗ್ಗದಲ್ಲಿ 29ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+