Karnataka Weather: ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆ: ಎಲ್ಲೆಲ್ಲಿ? ಇಲ್ಲಿದೆ ಮಾಹಿತಿ
ಬೆಂಗಳೂರು, ಜನವರಿ 05: ರಾಜ್ಯದಲ್ಲಿ ಮತ್ತೆ ವರುಣಾರ್ಭಟ ಶುರುವಾಗು ಮುನ್ಸೂಚನೆ ದೊರೆತಿದೆ. ಬದಲಾದ ಹವಾಮಾನ ವೈಪರಿತ್ಯ, ವಾಯುಭಾರ ಕುಸಿತದ ಪರಿಣಾಮವಾಗಿ ರಾಜ್ಯದಲ್ಲಿ ಭಾರಿ ಮಳೆ ಆಗುವ ಮುನ್ಸೂಚನೆ ಇದೆ.
ಹೌದು, ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಈಗಾಗಲೇ ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಸುರಿಯಲಿದ್ದು, ಈ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನೂ ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಬೀದರ್, ಕಲಬುರಗಿ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಶುಕ್ರವಾರ (ಜನವರಿ 5) ಒಂದು ದಿನ ಭಾರೀ ಮಳೆ ಸುರಿಯಲಿದೆ. ಈ ಪೈಕಿ ದಕ್ಷಿಣ ಕನ್ನಡ, ಉಡುಪಿ, ಮಂಡ್ಯ, ಮೈಸೂರು, ಚಿಕ್ಕಮಗಳೂರು ಮತ್ತು ಹಾಸನ ಸೇರಿ ಆರು ಜಿಲ್ಲೆಗಳಲ್ಲಿ ಅತ್ಯಧಿಕ ಮಳೆ ಆಗಲಿದೆ. ಈ ಸಂಬಂಧ ಈ ಜಿಲ್ಲೆಗಳಿಗೆ ಒಂದು ದಿನ ಯೆಲ್ಲೋ ಅಲರ್ಟ್ ಎಚ್ಚರಿಕೆ ಕೋಡಲಾಗಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು. ಕೋಟ, ಹೊನ್ನಾವರ, ಮಂಕಿ, ಮಂಗಳೂರು, ಕುಮಟಾ, ಉಡುಪಿ, ಕುಂದಾಪುರ, ಕಾರವಾರ, ಯಲ್ಲಾಪುರ, ಕಮ್ಮರಡಿ, ಹುಂಚದಕಟ್ಟೆ, ಬಾಳೆಹೊನ್ನೂರು, ಜಯಪುರ, ಪುತ್ತೂರು, ಕಳಸದಲ್ಲಿ ಮಳೆಯಾಗಿದೆ.
ಕರಾವಳಿಯ ಹಲವು ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಮೋಡಕವಿದ ವಾತಾವರಣವಿದೆ, ಕೆಲವು ಕಡೆಗಳಲ್ಲಿ ಇಂದು ಹಗುರ ಮಳೆಯಾಗುವ ಸಾಧ್ಯತೆ ಇದೆ. ವಿಜಯಪುಯರದಲ್ಲಿ 13.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ನಗರದಲ್ಲಿ 25.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 26.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್ಎಎಲ್ನಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.












Click it and Unblock the Notifications