karnataka Rain: ರಾಜ್ಯದ ಈ ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಭಾರೀ ಮಳೆ; ಹವಾಮಾನ ಇಲಾಖೆ ಕೊಟ್ಟ ಸೂಚನೆ ಏನು?

ಬೆಂಗಳೂರು, ನವೆಂಬರ್‌ 18: ಕರ್ನಾಟಕದಲ್ಲಿ ಹಿಂಗಾರು ಚುರುಕುಗೊಂಡಿದ್ದು, ಇಂದಿನಿಂದ ರಾಜ್ಯಾದ್ಯಂತ ಐದು ದಿನಗಳ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೂಚನೆ ನೀಡಿದೆ.

ಹೌದು, ಸಿಲಿಕಾನ್‌ ಸಿಟಿ ಬೆಂಗಳುರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ರಾತ್ರಿ ಗುಡುಗ ಸಹಿತ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ. ಅಲ್ಲದೇ ಬೆಳಗಾವಿ, ಧಾರವಾಡ, ಗದಗ, ಚಾಮರಾಜನಗರ, ಚಿಕ್ಕಮಗಳೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲೂ ಸಹ ಭಾರೀ ಮಳೆಯಾಗಲಿದೆ.

Karnatakas Many Districts Will Witness Heavy Rainfall Till November 22

ಇನ್ನೂ ಇಂದಿನಿಂದ ಐದು ದಿನಗಳ ಕಾಲ ಚಳಿಯ ನಡುವೆಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದ್ದು, ದಕ್ಷಿಣ ಕನ್ನಡ, ಉಡುಪಿ, ರಾಯಚೂರು, ಚಿಕ್ಕಬಳ್ಳಾಪುರ, ಕೊಪ್ಪಳ, ಗದಗ, ಮೈಸೂರು, ವಿಜಯನಗರ, ಶಿವಮೊಗ್ಗ, ಕೋಲಾರ, ಕೊಡಗು ಹಾಗೂ ಹಾಸನದಲ್ಲಿ ಉತ್ತಮ ಮಳೆಯಾಗಲಿದೆ. ಇನ್ನೂ ಮಳೆ ಹೆಚ್ಚಾಗುವಂತೆ ಕೆಲ ಜಿಲ್ಲಾಡಳಿತಗಳಿಗೂ ಅಲರ್ಟ್ ನೀಡಲಾಗಿದೆ.

ಇನ್ನೂ ನವೆಂಬರ್‌ ತಿಂಗಳು ಪೂರ್ತಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದೆ.

ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೇ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+