Karnataka Rain: ರಾಜ್ಯದ ಈ ಜಿಲ್ಲೆಯಲ್ಲಿ ಮುಂದುವರೆದ ಮಳೆರಾಯನ ಅಬ್ಬರ; ಇಲ್ಲಿದೆ ವಿವರ

ಬೆಂಗಳೂರು, ನವೆಂಬರ್‌ 20: ರಾಜ್ಯದಲ್ಲಿ ಮತ್ತೆ ಹಿಂಗಾರು ಚುರುಕುಗೊಂಡಿದ್ದು, ನವೆಂಬರ್‌ 23 ರಿಂದ ಮೂರು ದಿನ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೌದು, ಕರ್ನಾಟಕದ ದಕ್ಷಿಣ ಒಳನಾಡಿನ ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ನವೆಂಬರ್ 24 ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಒಣಹವೆ ವಾತಾವರಣ ಕಂಡು ಬಂದಿದೆ, ಹಿಂಗಾರು ಮಳೆ ಸಹ ಕ್ಷೀಣವಾಗಿತ್ತು. ಇದೀಗ ಮತ್ತೆ ಹಿಂಗಾ-ರು ಚುರುಕುಗೊಂಡಿದ್ದು, ಮತ್ತೆ ಮಳೆರಾಯನ ಆಗಮನವಾಗಲಿದೆ.

heavy-rainfall-till-november-24

ನವೆಂಬರ್‌ 23 ರಿಂದ ನವೆಂಬರ್‌ 26 ರ ವರೆಗೆ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಕೆಲವಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನೂ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಕೂಡ ನವೆಂಬರ್ 24ರ ಬಳಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರದಲ್ಲಿ ನವೆಂಬರ್ 22 ರಿಂದ ಮಳೆಯಾಗಲಿದ್ದು, ಐದು ದಿನಗಳ ಕಾಲ ಮಳೆ ಮುಂದುವರೆಯಲಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದಾನೆ.

ಇನ್ನೂ ನವೆಂಬರ್ 25ರ ತನಕ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಕೋಲಾರ, ಚಾಮರಾಜನಗರ, ಮಂಡ್ಯ, ಚಿಕ್ಕಮಗಳೂರು, ಕೊಡಗು, ರಾಮನಗರ ಮೈಸೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಹೆಚ್ಚು ಮಳೆಯಾಗುವ ಜಿಲ್ಲೆಗಳ ಜಿಲ್ಲಾಡಳಿತಕ್ಕೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+