Karnataka Rains: ರಾಜ್ಯದಲ್ಲಿ ಮತ್ತೆ ಶುರುವಾಯ್ತು ವರುಣನ ಅಬ್ಬರ; ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಆರ್ಭಟ
ಬೆಂಗಳೂರು, ನವೆಂಬರ್ 21: ರಾಜ್ಯದಲ್ಲಿ ಈ ವರ್ಷ ಮುಂಗಾರು ಹಾಗೂ ಹಿಂಗಾರು ಅಬ್ಬರ ಜೋರಾಗಿತ್ತು. ಕೆಲ ದಿನಗಳ ಬ್ರೇಕ್ ಕೊಟ್ಟಿದ್ದ ಮಳೆರಾಯ ಇದೀಗ ಮತ್ತೆ ಅಬ್ಬರವನ್ನ ಶುರುವಾಗಿದ್ದು, ಕರ್ನಾಟಕದಾದ್ಯಂತ ಮತ್ತೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಕಳೆದ ಒಂದು ವಾರದಿಂದ ಕರ್ನಾಟಕದೆಲ್ಲೆಡೆ ಮತ್ತೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ, ಕೆಲವೇ ದಿನಗಳಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನವೆಂಬರ್ 27ರಿಂದ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನ ನೀಡಿದೆ.
ದಕ್ಷಿಣ ಅಂಡಮಾನ್ನಲ್ಲಿ ಇಂದು ಚಂಡಮಾರುತ ಪರಿಚಲನೆ ಉಂಟಾಗಲಿದೆ, ಎರಡು ದಿನಗಳಲ್ಲಿ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಲಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನ ನೀಡಿದೆ. ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ ಹಾಗೂ ಉತ್ತರ ಒಳನಾಡು ಜಿಲ್ಲೆಗಳಿಗೆ ಒಣ ಹವೆಯಿರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನ ನೀಡಿದೆ.












Click it and Unblock the Notifications