Karnataka rain: ಈ 6 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಭಾರೀ ಮಳೆ, ಹಳದಿ ಎಚ್ಚರಿಕೆ

ಬೆಂಗಳೂರು, ಸೆಪ್ಟಂಬರ್ 24: ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳಲ್ಲಿ ಈ ಆರು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ವ್ಯಾಪಕ ಮಳೆ ಆಗಲಿದೆ. ಈ ಹಿನ್ನೆಲೆಯಲ್ಲಿ ಹಳದಿ ಎಚ್ಚರಿಕೆ ನೀಡಲಾಗಿದೆ. ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಒಳನಾಡು ಜಿಲ್ಲೆಗಳಾದ ಕಲಬುರಗಿ, ಬೀದರ್, ವಿಜಯಪುರ, ಯಾದಗಿರಿ, ರಾಮನಗರ ಮತ್ತು ಕರಾವಳಿ ಭಾಗದ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ದಾಖಲಾಗಲಿದ್ದು, ಹಳದಿ ಎಚ್ಚರಿಕೆ ಘೋಷಿಸಲಾಗಿದೆ. ಇದೇ ವೇಳೆ ಇನ್ನಿತರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣವಾಗಿ ಮಳೆ ಬರಲಿದೆ.

Karnatakas Six Districts Face Heavy Rain In Next 24 House As IMD Predicts, See Full Forecast

ಮುನ್ಸೂಚನೆ ಪ್ರಕಾರ, ಸೆಪ್ಟಂಬರ್ 29ರವರೆಗೆ ರಾಜ್ಯದ ವಿವಿಧೆಡೆ ಮುಂಗಾರು ಸಕ್ರಿಯವಾಗಿರಲಿದೆ. ಸೆಪ್ಟಂಬರ್ 29 ಹಾಗೂ 29ರಂದು ಸಹಿತ ಗುಡುಗು, ಮಿಂಚು ಗಾಳಿ ಸಹಿತ ಅತ್ಯಧಿಕ ಮಳೆ ನಿರೀಕ್ಷೆ ಇದೆ ಎಂದು ಅಂದಾಜಿಸಲಾಗಿದೆ.

ಜೂನ್‌ನಿಂದ ಆರಂಭವಾದ ಮುಂಗಾರು ಋತು ಸೆಪ್ಟಂಬರ್ ಅಂತ್ಯಕ್ಕೆ ಕೊನೆಗೊಳ್ಳಲಿದೆ. ಇದಕ್ಕೆ ಕೆಲವೇ ದಿನಗಳು ಬಾಕಿ ಇದೆ. ಇದಾದ ಬಳಿಕ ಹಿಂಗಾರು ಮಳೆಯ ಋತು ಆಋಂಭವಾಗಲಿದ್ದು, ಈ ಮಧ್ಯೆ ರಾಜ್ಯಾದ್ಯಂತ ಬಿರುಗಾಳಿ ಸಹಿತಿ ವ್ಯಾಪಕ ಮಳೆ ಬರುವ ಸಂಭವ ಇದೆ ಎನ್ನಲಾಗಿದೆ.

ಸಾಧಾರಣ ಮಳೆಯ ಜಿಲ್ಲೆಗಳು ಯಾವವು?

ಹಳದಿ ಎಚ್ಚರಿಕೆ ಪಡೆದ ಜಿಲ್ಲೆಗಳ ಹೊರತುಪಡಿಸಿದರೆ ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ್ಳ, ಬಳ್ಳಾರಿ, ಚಿತ್ರದುರ್ಗ, ರಾಯಚೂರು, ದಾವಣಗೆರೆ, ತುಮಕೂರು, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಆಗಾಗ ಹಗುರದಿಂದ ಸಾಧಾರಣವಾಗಿ ಮಳೆ ಆಗಲಿದೆ.

Karnatakas Six Districts Face Heavy Rain In Next 24 House As IMD Predicts, See Full Forecast

ಇನ್ನೂ ಬೆಂಗಳೂರು ನಗರದಲ್ಲಿ ಸೆಪ್ಟಂಬರ್ 29ರವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವೇ ಕಂಡು ಬರಲಿದೆ. ತಾಪಮಾನದಲ್ಲಿ ಮತ್ತಷ್ಟು ಇಳಿಕೆ ಆಗಲಿದ್ದು, ಗರಿಷ್ಠ ತಾಪಮಾನ 29-28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ನಗರದ ಕೆಲವೆಡೆ ತುಂತುರು, ಇನ್ನೂ ಹಲವೆಡೆ ಜೋರು ಮಳೆ ಆಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+