ಆಪರೇಷನ್ ಹಸ್ತಕ್ಕೆ ಠಕ್ಕರ್; ಬಿ ಎಲ್ ಸಂತೋಷ್ ಸಂಪರ್ಕದಲ್ಲಿ 40-50 ಶಾಸಕರು! ಏನಿದು ಅಚ್ಚರಿ ಹೇಳಿಕೆ

ಬೆಂಗಳೂರು, ಸೆಪ್ಟೆಂಬರ್‌ 01: ಮುಂಬರುವ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್‌ ಪಡೆ, ಬಿಜೆಪಿಯ ಹಾಲಿ, ಮಾಜಿ ಶಾಕಸರಿಗೆ ಗಾಳ ಹಾಕಿದ್ದು, ಇದೀಗ ಕಾಂಗ್ರೆಸ್‌ ನಾಯಕರಿಗೆ ನಡುಕ ಹುಟ್ಟಿಸಲು ಬಿ ಎಲ್‌ ಸಂತೋಷ್‌ ಮುಂದಾಗಿದ್ದು, ಬರೋಬ್ಬರಿ 40 ರಿಂದ 50 ಜನ ಕಾಂಗ್ರೆಸ್‌ ಶಾಸಕರನ್ನ ರಿವರ್ಸ್‌ ಆಪರೇಷನ್‌ ಮಾಡಿದ್ದಾರೆ.

ಹೌದು, ಈಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಅಧಿಕಾರಕ್ಕೆ ಬಂದಿದ್ದು, 2024 ರ ಲೋಕಸಭಾ ಚುನಾವಣೆಯಲ್ಲಿಯೂ ಕನಿಷ್ಠ 20 ಸ್ಥಾನಲಗಳನ್ನ ಗೆಲ್ಲುವ ಟಾರ್ಗೆಟ್‌ ಹಾಕಿಕೊಂಡಿದ್ದು, ಹೆಚ್ಚು ಸ್ಥಾನಗಳನ್ನ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರನ್ನ ಸೆಳೆಯುವ ಪ್ರಯತ್ನ ನಡೆಸುತ್ತಿದ್ದು, ಇದೀಗ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್‌ ಸಂತೋಷ್‌ ರಿವರ್ಸ್‌ ಆಪರೇಷನ್‌ ದಾಳ ಉರುಳಿಸಿದ್ದಾರೆ.

Karntaka Congress Leaders In Contact With BL Santosh BJP Hints Reverse Operation

ಇನ್ನೂ ಈ ಕುರಿತು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಮಾತನಾಡಿ, ಬಿಜೆಪಿಯಿಂದ ಯಾರೂ ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ. ಹತ್ತು ಜನ ಹೋದರೂ ಅದಕ್ಕೆ ಸಮನಾದ ಒಬ್ಬರನ್ನು ಕರೆತರಬಹುದು. ನನ್ನ ಜೊತೆಯೇ ಕಾಂಗ್ರೆಸ್‌ ನಿಂದ 40 ರಿಂದ 45 ಜನ ಸಂಪರ್ಕದಲ್ಲಿದ್ದಾರೆ. ದೆಹಲಿಯವರು ಒಪ್ಪಿಗೆ ಕೊಟ್ಟರೆ ಒಂದು ದಿನದ ಕೆಲಸ ಅಷ್ಟೆ. ಆದರೆ ನಮಗೆ ಈಗ ಅಗತ್ಯವಿಲ್ಲ. ನಾವು ಈಗ ಸರ್ಕಾರ ಮಾಡಬೇಕಾಗಿಲ್ಲ ಎಂದು ಹೇಳಿದ್ದಾರೆ.

ಇನ್ನೂ ಅನ್ಯ ಪಕ್ಷದಿಂದ ನಮ್ಮ ಪಕ್ಷಕ್ಕೆ ಬಂದವರನ್ನ ನಾವು ಬಾಂಬೆ ಬಾಯ್ಸ್ ಎಂದು ಹೇಳುವುದು ಬೇಡ. ಅವರು ಕಷ್ಟ ಕಾಲಕ್ಕೆ ನಮ್ಮ ಜೊತೆ ಬಂದಿದ್ದಾರೆ. ಅವರು ಹೋಗುತ್ತಾರೆ ಎಂದು ನಾವೇ ಹೇಳುವುದು ಸರಿಯಲ್ಲ. ಹಾಗೆಂದು ಬಿಟ್ಟು ಹೋಗುವವರ ಬಗ್ಗೆ ಚಿಂತೆ ಬೇಡ. ಅಷ್ಟಕ್ಕೂ ಯಾರೂ ಕೂಡಾ ಪಕ್ಷ ಬಿಟ್ಟು ಹೋಗುವುದಿಲ್ಲ ಎಂದು ಬಿಜೆಪಿ ಮುಖಂಡ ಬಿ ಎಲ್‌ ಸಂತೋಷ್ ಸ್ಪಷ್ಟಪಡಿಸಿದ್ದಾರೆ.

Karntaka Congress Leaders In Contact With BL Santosh BJP Hints Reverse Operation

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ನನಗೆ ಅರಿವಿದೆ. ಪ್ರತಿಪಕ್ಷ ನಾಯಕನ ನೇಮಕ ಆಗಿಲ್ಲ ಅನ್ನುವುದನ್ನೇ ದೊಡ್ಡದು ಮಾಡಿ ಚರ್ಚಿಸುವ ಅಗತ್ಯವೇನು? ಎಂದು ಪ್ರಶ್ನಿಸಿದ ಅವರು, ಮನೆಯಲ್ಲಿ ಮದುವೆ ಆಗದ ಮಗಳು ಇದ್ದರೆ ಹೊರಹಾಕಲು ಆಗುತ್ತಾ? ಕೆಲಸ ಸಿಗದ ಮಗ ಇದ್ದರೆ ಮನೆಯಿಂದ ಹೊರಹಾಕುತ್ತೀರಾ. ತಡವಾಗಿದೆ ಎಂಬುದು ಎಷ್ಟು ಸತ್ಯವೋ ನೇಮಕ ಆಗುವುದೂ ಅಷ್ಟೇ ಸತ್ಯ. ಇನ್ನೂ ಈ ವಿಧಾನಸಭಾ ಚುನಾವಣೆಯಲ್ಲಿ 66 ಸ್ಥಾನ ಗೆದ್ದಿದ್ದೇವೆ. ಈಗ ವಿಪಕ್ಷವಾಗಿ ಇನ್ನಷ್ಟು ಶಕ್ತಿಯುತವಾಗಿದ್ದೇವೆ. ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಚರ್ಚೆ ಬಿಟ್ಟು ಸಂಘಟನೆಯಲ್ಲಿ ತೊಡಗಿ ಎಂದು ಪಕ್ಷದ ನಾಯಕರಿಗೆ ಸೂಚನೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+