Karnataka Rain : ದಕ್ಷಿಣ ಒಳನಾಡು, ಮಲೆನಾಡಿನ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ರಾಜ್ಯದಲ್ಲಿ ಕಳೆದ ವಾರ ಅಬ್ಬರಿಸಿದ್ದ ಮಳೆ ಮತ್ತೆ ಬಿಡುವು ನೀಡಿದೆ. ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಒಣ ಹವೆ ಮುಂದುವರೆಯಲಿದ್ದು, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ.

ಕಳೆದ 24 ಗಂಟೆಯಲ್ಲಿ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಬಿಳಿಗೆರೆಯಲ್ಲಿ 16 ಮಿಮೀ ಮಳೆಯಾಗಿದೆ. ಮುಂದಿನ ಮೂರು ದಿನಗಳ ದಕ್ಷಿಣ ಒಳನಾಡಿನಲ್ಲಿ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

karnataka rains

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ತುಮಕೂರು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ. ಮಲೆನಾಡು ಜಿಲ್ಲೆಗಳಲ್ಲಿ ಕೂಡ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ ಆಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡು, ಕರಾವಳಿ ಭಾಗದಲ್ಲಿ ಒಣಹವೆ

ಇನ್ನು ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬಿಜಾಪುರ, ಬೀದರ್, ಬಳ್ಳಾರಿ, ಧಾರವಾಡ, ಹಾವೇರಿ, ಗದಗ, ಗುಲ್ಬರ್ಗಾ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಹೆಚ್ಚಿನ ತಾಪಮಾನ ದಾಖಲಾಗಲಿದ್ದು, ಎಚ್ಚರಿಕೆ ವಹಿಸುವಂತೆ ಕೇಳಿದೆ.

ಬಿಸಿಲಿಂದ ಪಾರಾಗಲು ಪ್ರಮುಖ ಸಲಹೆ

ಗರಿಷ್ಠ ತಾಪಮಾನ ದಾಖಲಾಗಲಿದ್ದು ಜನತೆ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತೆ ಕೇಳಿದ್ದು, ಹಲವು ಸಲಹೆಗಳನ್ನು ನೀಡಿದೆ. ಆಲ್ಕೋಹಾಲ್, ಚಹಾ, ಕಾಫಿ ಮುಂತಾದ ಹಾನಿಕಾರಕ ತಂಪು ಪಾನೀಯಗಳನ್ನು ಸೇವಿಸಬೇಡಿ ಎಂದು ಕೇಳಿದೆ. ಮಕ್ಕಳು ಮತ್ತು ಸಾಕು ಪ್ರಾಣಿಗಳನ್ನು ಬಿಸಿಲಿನಲ್ಲಿ ನಿಲ್ಲಿಸಿದ ವಾಹನಗಳ ಸಮೀಪ ಬಿಡದಂತೆ ಸೂಚನೆ ನೀಡಿದೆ.

ಚಪ್ಪಲಿ, ಬೂಟುಗಳನ್ನು ಧರಿಸದೇ ಹೊರಗಡೆ ಹೋಗದಂತೆ ಹೇಳಿದೆ. ಬಿಸಿಲಿನ ಸಮಯದಲ್ಲಿ ಅಡುಗೆ ಮಾಡುವುದನ್ನು ತಪ್ಪಿಸಲು ಸಲಹೆ ನೀಡಿದ್ದು, ಬಿಸಿಲಿನಲ್ಲಿ ಹೊರಗಡೆ ಹೋಗುವಾಗ ಟೋಪಿ, ಕನ್ನಡಕ, ಛತ್ರಿಗಳನ್ನು ಬಳಸಲು ಹೇಳಿದೆ.

ಮನೆಯಲ್ಲಿ ಆದಷ್ಟು ಫ್ಯಾನ್ ಬಳಸುವಂತೆ ಕೇಳಿದೆ. ಬಾಯಾರಿಕೆ ಆಗದೇ ಇದ್ದರು ಹೆಚ್ಚಿನ ನೀರು ಕುಡಿಯುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಒಆರ್ ಎಸ್, ಮನೆಯಲ್ಲಿ ತಯಾರಿಸಿದ ಲಸ್ಸಿ, ಶರಬತ್, ನಿಂಬೆ ನೀರು, ಮಜ್ಜಿಗೆಗಳನ್ನು ಬಳಸುವಂತೆ ಮನವಿ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+