Karntaka Rains: ಕೆಲವೇ ಕ್ಷಣಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

Karntaka Rains: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಮತ್ತೆ ಚುರುಕು ಪಡೆದಿದೆ. ಹಾಗೆಯೇ ಇಂದು (ಜುಲೈ 30) ಇನ್ನೂ ಕೆಲವೇ ಕ್ಷಣಗಳಲ್ಲಿ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ. ಮಾಹಿತಿ ಇಲ್ಲಿದೆ ನೋಡಿ.

ಈಗಾಗಲೇ ಕೇರಳದ ವಯನಾಡಿನಲ್ಲಿ ಭೂಸಿತದಿಂದ 117ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅದರಲ್ಲೂ ಇದೀಗ ಈ ರಾಜ್ಯದಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದ್ದು, ಇದರ ಪ್ರಭಾವ ಕರ್ನಾಟಕದ ಮೇಲೂ ಬೀರಲಿದೆ ಎನ್ನುವ ಮುನ್ಸೂಚನೆ ಇದೆ. ಭಾರೀ ಮಳೆ ಹಿನ್ನೆಲೆ ಕೇರಳದಿಂದ ಕರ್ನಾಟಕಕ್ಕೆ ನೀರು ಹರಿ ಹರಿಸಿದರೆ, ಮೈಸೂರು, ಚಾಮರಾಜನಗರ ಜಿಲ್ಲೆಗಳ ಮೇಲೆ ಹೆಚ್ಚು ಪ್ರಭಾವ ಬೀರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.

Karntaka Rains Heavy rainfall forecast in these districts in few moments on july 30

ದಕ್ಷಿಣ ಕನ್ನಡದಲ್ಲಿ ಮಳೆರಾಯನ ಆರ್ಭಟ ಮತ್ತೆ ಚುರುಕು ಪಡೆದಿದೆ. ಅಷ್ಟೇ ಅಲ್ಲದೆ, ಉತ್ತರ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಬೆಳಗಾವಿ, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಅದರಲ್ಲೂ ಇನ್ನೂ ಕೆಲವೇ ಕ್ಷಣಗಳಲ್ಲಿ ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಮುಂದುವರೆಯಲಿದೆ ಎನ್ನುವ ಮುನ್ಸೂಚನೆ ಇದೆ. ಧಾರವಾಡ, ಮಂಡ್ಯ, ದಾವಣಗೆರೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೀದರ್‌, ರಾಯಚೂರು, ಕಲಬುರಗಿ, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.

ಈಗಾಗಲೇ ಭಾರೀ ಮಳೆ ಮುಂದುವರೆದಿದ್ದು, ನದಿ, ಕೆರೆ-ಕಟ್ಟೆಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಇನ್ನು ಭಾರೀ ಮಳೆಯಿಂದ ರಾಜ್ಯದ ಹಲವು ಪ್ರಮುಖ ಜಲಾಶಯಗಳು ಭರ್ತಿಯಾಗಿದ್ದು, ಇನ್ನು ಕೆಲವು ತುಂಬುವ ಹಂತವನ್ನು ತಲುಪಿವೆ. ಭರ್ತಿಯಾದ ಜಲಾಶಯಗಳಿಂದ ನೀರು ಹೊರಗಡೆ ಬಿಡಲಾಗಿದ್ದು, ಅಲ್ಲಿನ ಸುತ್ತಮುತ್ತಲಿನ ನದಿಪಾತ್ರದ ಜನರಿಗೆ ಪ್ರವಾಹದ ಭೀತಿ ಎದುರಾಗಿದೆ. ಮತ್ತೊಂದೆಡೆ ಕೊಡಗು ಜಿಲ್ಲೆಗೆ ಮುಂಜಾಗ್ರತಾ ಕ್ರಮವಾಗಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಕೃಷ್ಣ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿಸಲಾಗಿದ್ದು, ಇದರಿಂದ ಉತ್ತರ ಕರ್ನಾಕದ ಹಲವು ಜಿಲ್ಲೆಗಳಲ್ಲಿ ಮನೆ-ಮಠ, ರೈತರು ಬೆಳೆದ ಬೆಳೆಗಳು ಕೊಚ್ಚಿಕೊಂಡು ಹೋಗಿದ್ದು, ಇದರಿಂದ ಅಲ್ಲಿನ ಜನರ ಜೀವನ ಹೇಳತೀರಾಗಿದೆ.

ಹಾಗೆಯೇ ಕೇರಳದಲ್ಲಿ ಮಳೆರಾಯನ ಆರ್ಭಟ ಕ್ಷಣ ಕ್ಷಣಕ್ಕೂ ಚುರುಕು ಪಡೆಯುತ್ತಲಿದೆ. ವಯನಾಡಿನಲ್ಲಿ ಭೂಕುಸಿತ ಉಂಟಾಗಿ 117ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು, ಇನ್ನೂ ಸಾವಿನ ಸಂಖ್ಯೆ ಏರುತ್ತಲೇ ಇದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮತ್ತೊಂದೆಡೆ ಹವಾಮಾನ ಇಲಾಖೆ ಇನ್ನು ಎರಡು ದಿನಗಳ ಕಾಲ ಈ ಭಾಗದಲ್ಲಿ ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ ನೀಡಿದೆ. ಕೇರಳದಲ್ಲಿ ಒಂದು ವೇಳೆ ಮಳೆ ಹೀಗೆ ಮುಂದುವರೆದರೆ, ಇಲ್ಲಿನ ನದಿಗಳ ನೀರನ್ನು ಕರ್ನಾಟಕಕ್ಕೆ ಹರಿಸಲಾಗುತ್ತದೆ. ಇದರಿಂದ ಹೆಚ್ಚು ಅಪಾಯ ಆಗುವುದೇ ಮೈಸೂರು, ಚಾಮರಾಜನಗರ, ಕೊಡಗು ಜಿಲ್ಲೆಗಳಿಗೆ ಎನ್ನುವ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+