Karnataka Rains: ಮುಂದಿನ ಮೂರು ಗಂಟೆಗಳಲ್ಲಿ ಈ ಜಿಲ್ಲೆಗಳಲ್ಲಿ ಸುರಿಯಲಿದೆ ರಣಮಳೆ

Karnataka Rains: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ತಗ್ಗಿದ್ದು, ಕೆಲವು ಭಾಗಗಳಲ್ಲಿ ಮಾತ್ರ ಭಾರೀ ಮಳೆ ಮುಂದುವರೆದಿದೆ. ಹಾಗೆಯೇ ಇಂದು (ಆಗಸ್ಟ್‌ 09) ಇನ್ನೂ ಕೆಲವೇ ಕ್ಷಣಗಳಲ್ಲಿ ಭಾರೀ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ. ಹಾಗಾದರೆ ಎಲ್ಲೆಲ್ಲಿ ಮಳೆ ಬೀಳಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಕಳೆದ ಬಾರಿ ಅಂದರೆ 2023ರಲ್ಲಿ ಮುಂಗಾರು ಕೈಕೊಟ್ಟ ಹಿನ್ನೆಲೆ ನದಿ, ಕೆರೆ-ಕಟ್ಟೆಗಳು, ಜಲಾಶಯಗಳು ಬತ್ತಿಹೋಗುವ ಹಂತವನ್ನು ತಲುಪಿದ್ದವು. ಇನ್ನು ಈ ಬಾರೀ ಜೂನ್‌ ಆರಂಭದಿಂಲೇ ಮುಂಗಾರು ಚುರುಕು ಪಡೆದು, ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಅವಾಂತರಗಲೇ ಸೃಷ್ಟಿಯಾಗಿವೆ. ಇದುವರೆಗೂ ಕೆಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಇನ್ನು ಮೂರು ಗಂಟೆಗಳಲ್ಲಿ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ.

Karntaka Rains Heavy rainfall forecast in these districts of state in few moments on August 9th

ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಹಲವು ಪ್ರಮುಖ ಜಲಾಶಯಗಳು ಭರ್ತಿಯಾಗಿದ್ದರೆ, ಇನ್ನು ಕೆಲವು ಡ್ಯಾಂಗಳು ತುಂಬುವ ಹಂತವನ್ನು ತಲುಪಿವೆ. ಹಾಗೆಯೇ ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಹಾಗೂ ಮಲೆನಾಡು ಭಾಗಗಳಲ್ಲೂ ಅಲ್ಲಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದ ಉತ್ತರ ಒಳನಾಡಿನ, ದಕ್ಷಿಣ ಒಳನಾಡಿನ ಜಿಲ್ಲೆಗಳ ಅಲ್ಲಲ್ಲಿ ಪ್ರತ್ಯೇಕವಾಗಿ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಬೆಳಗಾವು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಭಾರೀ ಮಳೆಯಿಂದ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಹಾಗೆಯೇ ಇಂದು ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಮತ್ತೊಂದೆಡೆ ಮೈಸೂರು, ಶಿವಮೊಗ್ಗ, ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಬೀದರ್‌ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ.

ಭಾರೀ ಮಳೆಯಿಂದ ಈಗಾಗಲೇ ಪಕ್ಕದ ರಾಜ್ಯವಾದ ಕೇರಳದ ವಯನಾಡಿಲ್ಲಿ ಭೂಕುಸಿತ ಸಂಭವಿಸಿ ರಾಜ್ಯದ ಹಲವರು ಇದರಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+