Rain Alert: ರಾಜ್ಯದ 7 ಜಿಲ್ಲೆಗಳಿಗೆ 5 ದಿನ ಗುಡುಗು ಸಹಿತ ಜೋರು ಮಳೆ ಎಚ್ಚರಿಕೆ! ಗರಿಷ್ಠ ತಾಪಮಾನ 40°C

ಬೆಂಗಳೂರು, ಮಾರ್ಚ್‌ 14: ಕರ್ನಾಟಕದಲ್ಲಿ ಪೂರ್ವ ಮುಂಗಾರು ಮಳೆ ಅಬ್ಬರ ಶುರುವಿಟ್ಟುಕೊಂಡಿದೆ. ನಿತ್ಯ ಕೆಲವು ಜಿಲ್ಲೆಗಳಲ್ಲಿ ದರ್ಶನ ನೀಡುತ್ತಿದ್ದ ಮಳೆರಾಯ ಬಿಡುವು ನೀಡುವ ಲಕ್ಷಣಗಳು ಕಾಣುತ್ತಿಲ್ಲ. ಹವಾಮಾನ ವೈಪರಿತ್ಯದಿಂದಾಗಿ ಕರ್ನಾಟಕದ ಅರ್ಧ ಭಾಗಕ್ಕೆ ಬೇಸಿಗೆ, ಇನ್ನರ್ಧ ಭಾಗಕ್ಕೆ ಮಳೆಗಾಲದ ವಾತಾವರಣ ನಿರ್ಮಾಣವಾಗಿದೆ. ಮುಂದಿನ ಮಾರ್ಚ್ 16ರಿಂದ 5 ದಿನಗಳ ಕಾಲ ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಜೋರು ಮಳೆ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಕೆಲವೆಡೆ ಈಗಾಗಲೇ ಮೂರು ದಿನಗಳಿಂದ ಗುಡುಗು ಸಹಿತ ಮಳೆ ಆಗಿದೆ. ಸಂಜೆ ನಂತರ ಬರುವ ಮಳೆ ಬೇಸಿಗೆ ಧಗೆ ಕಡಿಮೆ ಮಾಡಿದೆ. ಮುಂದಿನ ವಾರವು ಪೂರ್ವ ಮುಂಗಾರು ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಸಾಧಾರಣದಿಂದ ಉತ್ತಮವಾಗಿ ಸುರಿಯುವ ಸಾಧ್ಯತೆ ಇದೆ. ಈ ಭಾಗದಲ್ಲಿ ಮಳೆಗಾಲ ವಾತವರಣ ನಿರ್ಮಾಣವಾಗಿದೆ.

Karntaka Rains Weather Next 5 Days Rain Alert for 7 Districts of State include Mysuru-Hassan

ಇತ್ತ ಉತ್ತರ ಮತ್ತು ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆಯ ಸುಳಿವೇ ಇಲ್ಲ. ಒಣಹವೆ, ಶುಷ್ಕ ವಾತವರಣ ಮುಂದುವರಿದಿದೆ. ರಾಜ್ಯದ ಗರಿಷ್ಠ ತಾಪಮಾನ ಈ ಭಾಗದ ಜಿಲ್ಲೆಗಳಲ್ಲಿ ಕಂಡು ಬರುತ್ತಿದೆ. ಹೀಗಾಗಿ ಇಲ್ಲಿ ಸ್ಪಷ್ಟ ಬೇಸಿಗೆ ಇದೆ. ಸಾಮಾನ್ಯವಾಗಿ ಹೋಳಿ ಹುಣ್ಣಿಮೆ ವೇಳೆ ಕೊಂಚ ಮಳೆ ಬರುವುದು ವಾಡಿಕೆ. ನಾಳೆ ನಾಡಿದ್ದು, ಕೆಲವೆಡೆ ತುಂತುರು ಮಳೆ ಆಗಬಹುದು ಎನ್ನಲಾಗಿದೆ.

ಯಾವೆಲ್ಲ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ಇದೆ

ಮಾರ್ಚ್ 16 ಮತ್ತು 17 ರಂದು ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಅಲ್ಲಲ್ಲಿ ಸಾಧಾರಣ ಮಳೆ, ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರ ಪರಿಸ್ಥಿತಿಗಳು ಮುಂದುವರಿಯಬಹುದು ಎಂದು ಹೇಳಲಾಗಿದೆ.

Karntaka Rains Weather Next 5 Days Rain Alert for 7 Districts of State include Mysuru-Hassan

ಮಾರ್ಚ್ 16 ರಿಂದ ಒಟ್ಟು ಐದು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಅಲ್ಲಲ್ಲಿ ಹಗುರ ಮಳೆ ಆಗಲಿದೆ. ಕೆಲವೆಡೆ ವ್ಯಾಪಕ ಮಳೆ ಸುರಿಯಲಿದೆ. ಇದಕ್ಕೆ ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ತೀವ್ರ ತರಹದ ಬದಲಾವಣೆಗಳು ಕಾರಣ ಹೀಗಾಗಿಯೇ ಮಳೆ ಸುರಿಯುತ್ತಿದೆ ಎಂದು ತಿಳಿಸಲಾಗಿದೆ.

ಕರ್ನಾಟಕದಲ್ಲಿ ದಾಖಲಾದ ಗರಿಷ್ಠ ಉಷ್ಣಾಂಶ

ರಾಜ್ಯದ ಗರಿಷ್ಠ ತಾಪಮಾನ ಕಲಬುರಗಿಯಲ್ಲಿ ದಾಖಲಾಗಿದೆ. ಇಲ್ಲಿ 40 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶವಿದ್ದು, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ 38 ಡಿಗ್ರಿ ಸೆಲ್ಸಿಯಸ್, ಬೀದರ್, ಗದಗ, ಕೊಪ್ಪಳದಲ್ಲಿ ತಲಾ 37 ಡಿಗ್ರಿ ಸೆಲ್ಸಿಯಸ್, ದಾವಣಗೆರೆ, ಧಾರವಾಡದಲ್ಲಿ 36 ಡಿಗ್ರಿ ಸೆಲ್ಸಿಯಸ್, ಮೈಸೂರು, ಚಾಮರಾಜನಗರ, ಚಿತ್ರದುರ್ಗ, ಚಿಂತಾಮಣಿ, ಹಾವೇರಿ, ಬೆಂಗಳೂರು ನಗರ ವ್ಯಾಪ್ತಿಯಲ್ಲಿ 35 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+