National Highway: ಕರಾವಳಿ ಹಾಗೂ ಉತ್ತರ ಕರ್ನಾಟಕ ಜಿಲ್ಲೆಗಳ ಸಂಪರ್ಕ ಸೇತುವೆಯಾಗಿರುವ ಹೆದ್ದಾರಿ ಬಗ್ಗೆ ಮಹತ್ವದ ಅಪ್ಡೇಟ್
National Highway: ರಾಜ್ಯದಲ್ಲಿ ರಾಷ್ಟ್ರೀಯ ಹೆದ್ದಾರಿ ಜಾಲ ವಿಸ್ತರಣೆ ಆಗುತ್ತಲಿದೆ. ಇದೀಗ ಕರಾವಳಿ ಹಾಗೂ ಉತ್ತರ ಕರ್ನಾಟಕ ಜಿಲ್ಲೆಗಳ ಸಂಪರ್ಕ ಸೇತುವೆ ಆಗಿರುವ ಹೆದ್ದಾರಿ ಮೇಲ್ದರ್ಜೆಗೇರಿಸುವ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಮಹತ್ವದ ಅಪ್ಡೇಟ್‌ವೊಂದನ್ನು ಕೊಟ್ಟಿದ್ದಾರೆ. ಹಾಗಾದ್ರೆ, ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಉತ್ತರ ಕನ್ನಡ, ಹಾವೇರಿ, ಗದಗ, ಧಾರವಾಡ ಮತ್ತು ಬಾಗಲಕೋಟೆ ಜಿಲ್ಲೆಗಳ ಮೂಲಕ ಹಾದು ಹೋಗಿರುವ ಕಾರವಾರ - ಇಳಕಲ್ ರಾಜ್ಯ ಹೆದ್ದಾರಿಯನ್ನು ಮೆಲ್ದರ್ಜೆಗೇರಿಸುವ ಕುರಿತು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಮಹತ್ವದ ಮಾಹಿತಿಯೊಂದನ್ನು ರವಾನೆ ಮಾಡಿದ್ದಾರೆ.

ಯಾವೆಲ್ಲಾ ಜಿಲ್ಲೆಗಳ ಮೇಲೆ ಹಾದುಹೋಗಿದೆ?: ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಯಲ್ಲಾಪುರ, ಧಾರವಾಡ, ಗದಗ, ಬಾಗಲಕೋಟೆ ಜಿಲ್ಲೆಯ ಇಳಕಲ್ ಪ್ರದೇಶದ ವೇಲೆ ಈ ಹೆದ್ದಾರಿ ಹಾದುಹೋಗಿದೆ. ಪ್ರಮುಖವಾಗಿ ನೋಡುವುದಾದರೆ, ಉತ್ತರ ಕರ್ನಾಟಕದ ಭಾಗದ ಹೆಚ್ಚಿನ ಜಿಲ್ಲೆಗಳ ಮೇಲೆ ಹಾದುಹೋಗಿದೆ.
ಇದೀಗ ಈ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆರಿಸಲು ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭರವಸೆ ನೀಡಿದ್ದಾರೆ. ಕಾರವಾರ-ಇಳಕಲ್ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪತ್ರದ ಮೂಲಕ ಬಸವರಾಜ ಬೊಮ್ಮಾಯಿ ಅವರಿಗೆ ನಿತಿನ್ ಗಡ್ಕರಿ ಅವರು ತಿಳಿಸಿದ್ದಾರೆ.
ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕಾರವಾರ - ಇಳಕಲ್ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಬೇಕು. ಶೀಘ್ರವೇ ಡಿಪಿಆರ್ ಮಾಡಿ ಕಾಮಗಾರಿ ಪ್ರಾರಂಭಿಸುವಂತೆಯೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಇತ್ತೀಚೆಗಷ್ಟೇ ಮನವಿ ಮಾಡಿದ್ದರು. ಇದೀಗ ಈ ಮನವಿಗೆ ಕೇಂದ್ರ ಗಡ್ಕರಿ ಅವರು ಸ್ಪಂದಿಸಿದ್ದಾರೆ.
ನವದೆಹಲಿಯಲ್ಲಿ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ್ದ ಬೊಮ್ಮಾಯಿ ಅವರು, ಕಾರವಾರ, ಕೈಗಾ, ಮುಂಡಗೋಡ, ಸವಣೂರು, ಗದಗ, ಗಜೇಂದ್ರಗಡ ಮಾರ್ಗವಾಗಿ ಇಳಕಲ್ ತಲುಪುವ ಸುಮಾರು 318 ಕಿಲೋ ಮೀಟರ್ ಉದ್ದದ ಈ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ಈಗಾಗಲೇ ತಾತ್ವಿಕ ಒಪ್ಪಿಗೆ ನೀಡಲಾಗಿದೆ. ಯೋಜನೆಯ ಡಿಪಿಆರ್ ಸಲ್ಲಿಕೆ ಆಗಿದ್ದು, ಭೂ ಸ್ವಾಧೀನ ಪಡಿಸಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಈ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ತೀರ್ಮಾನ ಮಾಡಿರುವುದರಿಂದ, ರಾಜ್ಯ ಸರ್ಕಾರದ ಸರಿಯಾದ ನಿರ್ವಹಣೆ ಇಲ್ಲದ ಕಾರಣ ವಾಹನ ಸಂಚರಿಸಲು ಸಾಧ್ಯ ಆಗದ ಸ್ಥಿತಿಯಲ್ಲಿದೆ. ಮತ್ತೊಂದೆಡೆ ಯೋಜನೆಗೆ ಅಧಿಕೃತ ಅನುಮತಿ ನೀಡದೇ ಇರುವುದರಿಂದ ರಾಷ್ಟ್ರೀಯ ಹೆದ್ದಾರಿ ಪಾಧಿಕಾರವೂ ಯಾವುದೇ ಕೆಲಸ ಮಾಡುತ್ತಿಲ್ಲ. ಆದ್ದರಿಂದ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ತಕ್ಷಣವೇ ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಿ, ಕಾಮಗಾರಿ ಆರಂಭಿಸುವಂತೆ ಮನವಿ ಮಾಡಿದ್ದರು.
ಯಾವೆಲ್ಲಾ ಜಿಲ್ಲೆಗಳ ಮೇಲೆ ಹಾದುಹೋಗುತ್ತದೆ?
* ಉತ್ತರ ಕನ್ನಡ: ಕಾರವಾರ, ಯಲ್ಲಾಪುರ, ಕೈಗಾ
* ಹಾವೇರಿ: ಬ್ಯಾಂಕಾಪುರ, ಸಾವನೂರು
* ಬಾಗಲಕೋಟೆ: ಇಳಕಲ್, ಹನುಮಸಾಗರ
* ಧಾರವಾಡ: ಹುಬ್ಬಳ್ಳಿ-ಧಾರವಾಡ
* ಗದಗ
ಈ ಹೆದ್ದಾರಿ ಉತ್ತರ ಕನ್ನಡ ಜಿಲ್ಲೆಯ ಕಾರವಾರದಿಂದ ಆರಂಭವಾಗಲಿದ್ದು, ಬಾಗಲಕೋಟೆ ಜಿಲ್ಲೆಯ ಇಳಕಲ್‌ವರೆಗೂ ವ್ಯಾಪಿಸಿದೆ. ಇದು ಉತ್ತರ ಕನ್ನಡ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ಜಿಲ್ಲೆಗಳ ಮೇಲೆ ಹಾದುಹೋಗಲಿದೆ. ಇದನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಿದರೆ ಈ ಭಾಗದಲ್ಲಿ ಅಭಿವೃದ್ಧಿ ಕ್ರಾಂತಿಯೇ ಆಗಲಿದೆ. ವಾಹನ ಸವಾರರಿಗೆ ಹೆಚ್ಚು ಅನುಕೂಲ ಆಗಲಿದೆ.
ಪ್ರಯೋಜನಗಳು
* ಕರಾವಳಿ ಪ್ರದೇಶವನ್ನು ಉತ್ತರ ಒಳನಾಡಿನ ಕೈಗಾರಿಕಾ, ವಾಣಿಜ್ಯ ಹಾಗೂ ಕೃಷಿ ಪ್ರದೇಶಗಳೊಂದಿಗೆ ಸಂಪರ್ಕಿಸುತ್ತದೆ.
* ಸರಕು ಸಾಗಣೆ, ವ್ಯಾಪಾರಕ್ಕೆ ಅನುಕೂಲ.
* ಕಾರವಾರ ಬಂದರು, ಹುಬ್ಬಳ್ಳಿ-ಧಾರವಾಡ ವಾಣಿಜ್ಯ ಕೇಂದ್ರ ಮತ್ತು ಇಳಕಲ್‌ನ ಕೈಗಾರಿಕಾ ಪ್ರದೇಶಗಳಿಗೆ ಪ್ರಮುಖ ಸಂಪರ್ಕ ಕಲ್ಪಸುವ ರಸ್ತೆ ಇದಾಗಿದೆ.
* ಸ್ಥಳೀಯ ರೈತರಿಗೆ ಮಾರುಕಟ್ಟೆ ಸಂಪರ್ಕ ಸುಲಭ
* ಪ್ರವಾಸೋದ್ಯಮಕ್ಕೆ ಉತ್ತೇಜನ
* ಉದ್ಯೋಗ ಹಾಗೂ ವ್ಯಾಪಾರ ಚಟುವಟಿಕೆಗಳಿಗೆ ಬೆಂಬಲ
ಒಟ್ಟಿನಲ್ಲಿ, ಹೇಳುವುದಾರೆ, ಕಾರವಾರ - ಇಳಕಲ್ ಹೆದ್ದಾರಿ ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನ ಅಭಿವೃದ್ಧಿಗೆ ಪ್ರಮುಖ ಪಾತ್ರ ವಹಿಸುವ ಸಾರಿಗೆ ಮಾರ್ಗವಾಗಿದೆ ಅಂದ್ರೆ ತಪ್ಪಾಗಲಾರದು. ಇದು ರಾಷ್ಟ್ರೀಯ ಹೆದ್ದಾರಿಯಾದ್ರೆ, ಇನ್ನೂ ದೊಟ್ಟ ಮಟ್ಟದಲ್ಲಿ ಅಭಿವೃದ್ಧಿ ಕ್ರಾಂತಿ ಆಗಲಿದೆ.












Click it and Unblock the Notifications