384 ಗೆಜೆಟೆಡ್ ಪ್ರೊಬೆಷನರ್ಸ್ ಹುದ್ದೆಗಳ ನೇಮಕಾತಿ ಬಗ್ಗೆ ಅಪ್ಡೇಟ್ ಕೊಟ್ಟ ಸರ್ಕಾರ
ರಾಜ್ಯ ಸರ್ಕಾರವು 2023-24ನೇ ಸಾಲಿನ 384 ಗೆಜೆಟೆಡ್ ಪ್ರೊಬೆಷನರ್ಸ್ ಹುದ್ದೆಗಳ ನೇಮಕಾತಿ ಬಗ್ಗೆ ಅಪ್ಡೇಟ್ ನೀಡಿದೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ನಡೆದಿದೆ. ವಿಧಾನ ಪರಿಷತ್ ಸದಸ್ಯ ನಿರಾಣಿ ಹನುಮಂತ ರುದ್ರಪ್ಪ ಅವರ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಸಣ್ಣ ನೀರಾವರಿ ಸಚಿವ ಎನ್.ಎಸ್.ಭೋಸರಾಜು ಅವರು ನೇಮಕಾತಿ ಬಗ್ಗೆ ಮಾಹಿತಿ ಹಂಚಿಕೊಂಡರು.
ಕೆಎಎಸ್ ಪೂರ್ವಭಾವಿ ಪರೀಕ್ಷೆ ಬರೆದು ಪಾಸಾದ ಪರೀಕ್ಷೆಯ ಅಭ್ಯರ್ಥಿಗಳ ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಗೆಜೆಟೆಡ್ ಪ್ರೊಬೆಷನರ್ಸ್ (ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇಮಕಾತಿ) ನಿಯಮಗಳು 1997 ಹಾಗೂ ತಿದ್ದುಪಡಿ ನಿಯಮಗಳನ್ವಯ ಪ್ರಕಟಿಸಲಾಗುತ್ತದೆ ಎಂದು ಸಚಿವ ಭೋಸರಾಜು ಹೇಳಿದರು.

2023-24ನೇ ಸಾಲಿನ 384 ಗೆಜೆಟೆಡ್ ಪ್ರೊಬೆಷನರ್ಸ್ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಲೋಕಸೇವಾ ಆಯೋಗವು 2025ರ ಮೇ 3ರಿಂದ 2025ರ ಮೇ 9ರವರೆಗೆ ಮುಖ್ಯ ಪರೀಕ್ಷೆ ನಡೆಸಿದೆ. ಇದರ ಪರೀಕ್ಷೋತ್ತರ ಕಾರ್ಯಗಳ ಪ್ರಕ್ರಿಯೆಯು ಸದ್ಯ ಪ್ರಗತಿಯಲ್ಲಿದೆ. ಇದು ಮುಂದಿನ 20 ದಿನದಲ್ಲಿ ಪೂರ್ಣಗೊಳ್ಳಲಿದೆ ಎಂದು ಮಾಹಿತಿ ನೀಡಿದರು.
11,000 ಶಿಕ್ಷಕರ ನೇಮಕ
ಮುಂದಿನ ಶೈಕ್ಷಣಿಕ ವರ್ಷದೊಳಗೆ 11 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸದನದಲ್ಲಿ ಉತ್ತರಿಸಿದರು. ರಾಜ್ಯದಲ್ಲಿ ಒಟ್ಟು 41,088 ಸರ್ಕಾರಿ ಪ್ರಾಥಮಿಕ ಶಾಲೆಗಳಿವೆ. 1,78,935 ಹುದ್ದೆಗಳು ಮಂಜೂರಾಗಿದ್ದು, ಈ ಪೈಕಿ 1,33,345 ಹುದ್ದೆಗಳು ಭರ್ತಿಯಾಗಿ 45,590 ಹುದ್ದೆಗಳು ಖಾಲಿ ಇವೆ. ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ನೇಮಕಾತಿ ಮಾಡಲು ಈಗಾಗಲೇ ಕ್ರಮ ವಹಿಸಲಾಗಿದೆ ಎಂದರು.
ರಾಜ್ಯದಲ್ಲಿ 5,024 ಸರ್ಕಾರಿ ಪ್ರೌಢ ಶಾಲೆಗಳಿದ್ದು, ಈ ಪ್ರೌಢಶಾಲೆಗಳಿಗೆ 44,144 ಹುದ್ದೆಗಳು ಮಂಜೂರಾಗಿರುತ್ತವೆ. ಈ ಪೈಕಿ 32,010 ಹುದ್ದೆಗಳು ಭರ್ತಿಯಾಗಿದ್ದು 12,134 ಹುದ್ದೆಗಳು ಖಾಲಿ ಇರುತ್ತವೆ. ಪ್ರಸ್ತುತ ಖಾಲಿ ಇರುವ ಹುದ್ದೆಗಳಿಗೆ ಎದುರಾಗಿ, 2025-2026ನೇ ಶೈಕ್ಷಣಿಕ ಸಾಲಿಗೆ ಪ್ರಾಥಮಿಕ ಶಾಲೆಗಳಲ್ಲಿ 40,000 ಮತ್ತು ಪ್ರೌಢಶಾಲೆಗಳಲ್ಲಿ 11,000 ಒಟ್ಟಾರೆಯಾಗಿ 51,000 ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡುವ ಮೂಲಕ ಶಿಕ್ಷಕರ ಕೊರತೆಯನ್ನು ಸರಿದೂರಿಸಲಾಗಿದೆ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ಕ್ರಮವಹಿಸಲಾಗಿದೆ. ಅಲ್ಲದೇ ವಿಕಲಚೇತನ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ದೃಷ್ಟಿಯಿಂದ ವಿಶೇಷ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗೆ ವಾರದಲ್ಲಿ 5 ದಿನ ಬೆಳಿಗ್ಗೆ ಬಿಸಿ ಹಾಲು, ಇದರೊಂದಿಗೆ ಮಿಕ್ಸ್ ರಾಗಿ ಮಾಲ್ಟ್, ಮಧ್ಯಾಹ್ನ ಬಿಸಿ ಊಟದೊಂದಿಗೆ ವಾರದಲ್ಲಿ ಆರು ದಿನ ಪೂರಕ ಪೌಷ್ಠಿಕ ಆಹಾರವಾಗಿ ಮೊಟ್ಟೆ ಅಥವಾ ಬಾಳೆಹಣ್ಣನ್ನು ಉಚಿತವಾಗಿ ವಿತರಿಸಲಾಗುತ್ತಿದೆ. ವಿದ್ಯಾವಿಕಾಸ ಯೋಜನೆಯಡಿ 1ರಿಂದ 10ನೇ ತರಗತಿಯ ಮಕ್ಕಳಿಗೆ ಎಲ್ಲ ಸರ್ಕಾರಿ ಶಾಲಾ ಮಕ್ಕಳಿಗೆ ವಿದ್ಯಾ ವಿಕಾಸ ಯೋಜನೆಯಡಿಯಲ್ಲಿ ಸಮವಸ್ತ್ರ ಸರಬರಾಜು ಮಾಡಲು ಮೊದಲನೇ ಜೊತೆ ಸಮವಸ್ತ್ರಕ್ಕಾಗಿ ₹83.07 ಕೋಟಿ ಬಿಡುಗಡೆ ಮಾಡಲಾಗಿದೆ. ಎರಡನೇ ಜೊತೆ ಸಮವಸ್ತ್ರಕ್ಕಾಗಿ ₹80.66 ಕೋಟಿ ಲಭ್ಯವಿರುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಉತ್ತರಿಸಿದರು.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು












Click it and Unblock the Notifications