KAS Officers Transfer: ರಾಜ್ಯದಲ್ಲಿ ದಿಢೀರ್ ನಾಲ್ವರು ಕೆಎಎಸ್ ಅಧಿಕಾರಿಗಳ ವರ್ಗಾವಣೆ

KAS Officers Transfer: ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಆಗಾಗ ಸರ್ಜರಿ ಮಾಡುತ್ತಲಿರುತ್ತದೆ. ಹಾಗೆಯೇ ಇದೀಗ ನಾಲ್ವರು ಹಿರಿಯ ಕೆಎಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಹಾಗಾದ್ರೆ ಯಾರನ್ನು ಎಲ್ಲಿಗೆ ವರ್ಗಾಯಿಸಲಾಗದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ರಾಜ್ಯ ಸರ್ಕಾರವು ಬೆಂಗಳೂರು ನಗರ ಭೂಸ್ವಾಧೀನಾಧಿಕಾರಿ ಸೇರಿದಂತೆ ನಾಲ್ವರು ಹಿರಿಯ ಶ್ರೇಣಿಯ ಕೆಎಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.

KAS Officers Transfer Karnataka Government Transfers 4 Senior Officers Know Complete details

ನಾಲ್ವರು ಕೆಎಎಸ್ ಅಧಿಕಾರಿಗಳ ವರ್ಗಾವಣೆ

ಕರ್ನಾಟಕ ರಾಜ್ಯಪಾಲರ ನಿರ್ದೇಶನದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ (DPAR) ಸರ್ಕಾರದ ಅಧೀನ ಕಾರ್ಯದರ್ಶಿಯಾದ ಕೇಶವಪ್ರಸಾದ್ ಕೆ.ಹೆಚ್. ಅವರು ಈ ಕುರಿತು ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದ್ದಾರೆ. ಈ ಆದೇಶದ ಹಿನ್ನೆಲೆಯಲ್ಲಿ ತಮ್ಮ ಪ್ರಸ್ತುತ ಹುದ್ದೆಯಿಂದ ಬಿಡುಗಡೆಗೊಂಡು ಮುಂದಿನ ಸ್ಥಳ ನಿರೀಕ್ಷೆಗಾಗಿ ಕಾಯುವ ಅಧಿಕಾರಿಗಳು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಲ್ಲಿ ಕಾರ್ಯ ವರದಿ ಸಲ್ಲಿಸಬೇಕೆಂದು ಅಧಿಸೂಚನೆಯಲ್ಲಿ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ.

ಆಡಳಿತಾತ್ಮಕ ಅಗತ್ಯಗಳಿಗೆ ತಕ್ಕಂತೆ ಕಾಲಕಾಲಕ್ಕೆ ನಡೆಯುವ ಸಾಮಾನ್ಯ ಪ್ರಕ್ರಿಯೆಯ ಭಾಗವಾಗಿ ಈ ವರ್ಗಾವಣೆಗಳನ್ನು ಮಾಡಲಾಗಿದೆ. ಮುಂದಿನ ಆದೇಶದವರೆಗೆ ಅಧಿಕಾರಿಗಳು ಇಲಾಖೆಯ ಸೂಚನೆಯಂತೆ ಕಾರ್ಯನಿರ್ವಹಿಸಬೇಕಾಗುತ್ತದೆ. ಯಾರನ್ನ ಎಲ್ಲಿಗೆ ವರ್ಗಾವಣೆ ಮಾಡಲಾಗಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

ಯಾರು ಎಲ್ಲಿಗೆ ವರ್ಗಾವಣೆ?

* ಸೌಮ್ಯ ಎನ್ ಗೌಡ: ಬೆಂಗಳೂರು ನಗರ ಜಿಲ್ಲೆಯ ವಿಶೇಷ ಭೂಸ್ವಾಧೀನಾಧಿಕಾರಿಯಾಗಿದ್ದ ಇವರನ್ನು ಕಂದಾಯ ಇಲಾಖೆ ಭೂಸ್ವಾಧೀನ, ಪುನರ್ ವಸತಿ ಹಾಗೂ ಪುನರ್ ನಿರ್ಮಾಣ ಉಪ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

* ತಬಸ್ಸುಮ್ ಜಹೇರಾ: ತುಮಕೂರು ಮಹಾನಗರ ಪಾಲಿಕೆ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿದ್ದ ಇವರನ್ನು ತುಮಕೂರಿನ ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

* ಸೋಮಪ್ಪ ಕಡಕೋಳ: ವಿಶೇಷ ಭೂಸ್ವಾಧೀನಾಧಿಕಾರಿ ಆಗಿದ್ದ ಇವರನ್ನು ತುಮಕೂರು ನಗರ ಪಾಲಿಕೆ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.

* ಡಾ. ವಿಜಯ್ ಕುಮಾರ್ ಬಿ. ಅಜೂರ್: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಉಪ ಕಾರ್ಯದರ್ಶಿಯಾಗಿದ್ದ ಇವರನ್ನು ವಿಜಯಪುರ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಕುಲಸಚಿವರನ್ನಾಗಿ ನೇಮಕ ಮಾಡಲಾಗಿದೆ. ಕುಲಸಚಿವರಾಗಿದ್ದ ಶಂಕರಗೌಡ ಸೋಮನಾಳ ಅವರಿಗೆ ಯಾವುದೇ ಹುದ್ದೆಯನ್ನು ಇನ್ನೂ ತೋರಿಸಿಲ್ಲ.

ವರ್ಗಾವಣೆಯಾದ ಅಧಿಕಾರಿಗಳು

* ಸೌಮ್ಯ ಎನ್ ಗೌಡ
* ತಬಸ್ಸುಮ್ ಜಹೇರಾ
* ಸೋಮಪ್ಪ ಕಡಕೋಳ
* ಡಾ. ವಿಜಯ್ ಕುಮಾರ್ ಬಿ. ಅಜೂರ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+