ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಗಸ್ಟ್ 24ರಂದೇ ಕೆಎಎಸ್ ಪೂರ್ವಭಾವಿ ಪರೀಕ್ಷೆ

|
Google Oneindia Kannada News

ಬೆಂಗಳೂರು, ಜುಲೈ 31 : ಕೆಎಎಸ್ ಪೂರ್ವಭಾವಿ ಪರೀಕ್ಷೆ ನಿಗದಿಯಂತೆ ಆಗಸ್ಟ್ 24ರಂದು ನಡೆಯಲಿದೆ. ಕೋವಿಡ್ 19 ಪರಿಸ್ಥಿತಿ ಹಿನ್ನಲೆಯಲ್ಲಿ ಎರಡು ಬಾರಿ ಪರೀಕ್ಷೆ ಮುಂದೂಡಲಾಗಿತ್ತು. ಈ ಬಾರಿ ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಂಡು ನಿಗದಿಯಂತೆ ಪರೀಕ್ಷೆ ನಡೆಸಲಾಗುತ್ತದೆ ಎಂದು ಕೆಪಿಎಸ್ಹೇಳಿದೆ.

ಎಸ್‌ಎಸ್‌ಎಲ್‌ಸಿ, ಸಿಇಟಿ ಪರೀಕ್ಷೆಗಳು ಈಗಾಗಲೇ ಯಶಸ್ವಿಯಾಗಿ ನಡೆದಿವೆ. ಅದೇ ಮಾದರಿಯನ್ನು ಮುಂದಿಟ್ಟುಕೊಂಡು ಕೆಎಎಸ್ ಪೂರ್ವಭಾವಿ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದು ಕೆಪಿಎಸ್‌ಸಿ ತಿಳಿಸಿದೆ.

ಕೆಪಿಎಸ್‌ಸಿ ನೇಮಕಾತಿ; 990 ಹುದ್ದೆಗಳಿಗೆ ಅರ್ಜಿ ಹಾಕಿ ಕೆಪಿಎಸ್‌ಸಿ ನೇಮಕಾತಿ; 990 ಹುದ್ದೆಗಳಿಗೆ ಅರ್ಜಿ ಹಾಕಿ

ಪೂರ್ವಭಾವಿ ಪರೀಕ್ಷೆಗಳನ್ನು ಬರೆಯಲು ನಾಲ್ಕೈದು ತಿಂಗಳ ಸಿದ್ಧತೆ ಬೇಕಾಗುತ್ತದೆ. ಮಾರ್ಚ್‌ ಮತ್ತು ಏಪ್ರಿಲ್‌ ತಿಂಗಳಿನಲ್ಲಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುವಾಗ ಕೋಚಿಂಗ್ ಸೆಂಟರ್ ಮುಚ್ಚಲಾಗಿದೆ. ಆದ್ದರಿಂದ, ಪರೀಕ್ಷೆಯನ್ನು ಮುಂದೂಡಬೇಕು ಎಂಬ ಒತ್ತಾಯವೂ ಕೇಳಿ ಬಂದಿದೆ.

ಸಿಇಟಿ ಪರೀಕ್ಷೆ ಬರೆಯಲು ಬಂದ ಕೋವಿಡ್ ಸೋಂಕಿತ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯಲು ಬಂದ ಕೋವಿಡ್ ಸೋಂಕಿತ ವಿದ್ಯಾರ್ಥಿಗಳು

KAS Prelims Exam On August 24

ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ನೀಡುವ ಕೋಚಿಂಗ್ ಸೆಂಟರ್‌ಗಳು ಇನ್ನೂ ಬಾಗಿಲು ತೆರೆದಿಲ್ಲ. ಪರೀಕ್ಷೆ ತೆಗೆದುಕೊಂಡಿರುವ ಹಲವಾರು ವಿದ್ಯಾರ್ಥಿಗಳಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ ಎಂದು ಅಭ್ಯರ್ಥಿಗಳು ಹೇಳಿದ್ದಾರೆ.

ವಿದ್ಯಾರ್ಥಿಗಳ ಆತಂಕ ಹೆಚ್ಚಿಸಿದ ವಿಟಿಯು ಪರೀಕ್ಷೆ ಘೋಷಣೆ ವಿದ್ಯಾರ್ಥಿಗಳ ಆತಂಕ ಹೆಚ್ಚಿಸಿದ ವಿಟಿಯು ಪರೀಕ್ಷೆ ಘೋಷಣೆ

ಪರೀಕ್ಷೆಗಾಗಿ ಇತರ ರಾಜ್ಯಗಳ ವಿದ್ಯಾರ್ಥಿಗಳು ಬೆಂಗಳೂರು ಮತ್ತು ಧಾರವಾಡದಲ್ಲಿ ನೆಲೆಸಿದ್ದರು. ಈಗ ಅವರು ತವರು ರಾಜ್ಯಕ್ಕೆ ವಾಪಸ್ ಹೋಗಿದ್ದಾರೆ. ಈಗ ಪರೀಕ್ಷೆ ಬರೆಯಲು ಬರಬೇಕು. ಆದರೆ ಕೋಚಿಂಗ್ ಸೆಂಟರ್ ಆರಂಭವಾಗಿಲ್ಲ. ಪರೀಕ್ಷೆಯನ್ನು ಮುಂದೂಡಿ ಎಂದು ಅಭ್ಯರ್ಥಿಗಳು ಒತ್ತಾಯಿಸುತ್ತಿದ್ದಾರೆ.

English summary
The Karnataka Public Service Commission (KPSC) said that Karnataka Administrative Service (KAS) prelims exam will held on August 24 as per schedule.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X