ಕಾಸರಗೋಡು : ಭೀಕರ ಅಪಘಾತ, ಮೂವರು ವಿದ್ಯಾರ್ಥಿಗಳ ಸಾವು

By: ಮಂಗಳೂರು ಪ್ರತಿನಿಧಿ
Subscribe to Oneindia Kannada

ಕಾಸರಗೋಡು, ಮೇ 26 : ನಿಂತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದು ಮೂವರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಕಣ್ಣೂರಿನಲ್ಲಿ ನಡೆದಿದೆ. ಅಪಘಾತದಲ್ಲಿ ಐವರು ಗಾಯಗೊಂಡಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗುರುವಾರ ಬೆಳಗ್ಗೆ ಕಣ್ಣೂರಿನ ಇರಿಟ್ಟಿ ಎಂಬಲ್ಲಿ ಈ ಘಟನೆ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಗಳನ್ನು ಆಶಿಕ್ (19), ಮಿನಾಸ್ (19) ಹಾಗೂ ಯಾಸೀನ್ (18) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಕೇರಳದ ವಡಗರದ ಎಂ.ಎಚ್.ಇ.ಎಸ್ ಕಾಲೇಜಿನ ಪದವಿ ವಿದ್ಯಾರ್ಥಿಗಳು. [ಮುಖ್ಯಮಂತ್ರಿ ಸಾಂತ್ವನ-'ಹರೀಶ್' ಯೋಜನೆ ಬಗ್ಗೆ ತಿಳಿಯಿರಿ]

kasaragodu

ಇರಿಟ್ಟಿ ಮಾಕೂಡ್ ಚೆಕ್‌ಪೋಸ್ಟ್ ಬಳಿ ಕಾರನ್ನು ನಿಲ್ಲಿಸಲಾಗಿತ್ತು. ಮಂಗಳೂರಿನಿಂದ ಬಂದ ಸರಕು ತುಂಬಿದ ಲಾರಿ ಕಾರಿಗೆ ಡಿಕ್ಕಿ ಹೊಡೆದು ಅದರ ಮೇಲೆ ಉರುಳಿಬಿದ್ದಿದೆ. ಇದರಿಂದಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಐವರು ಗಾಯಗೊಂಡಿದ್ದಾರೆ. [ಅಪಘಾತವಾದಾಗ ಜೀವ ಉಳಿಸಲು ನೆರವಾಗಿ]

ವೇಗವಾಗಿ ಬಂದ ಲಾರಿ ಚಾಲಕನ ನಿಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. ಕಾರಿನಲ್ಲಿದ್ದ ವಿದ್ಯಾರ್ಥಿಗಳೆಲ್ಲರೂ ಪ್ರವಾಸ ಹೋಗಿದ್ದರು. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

road accident

ಕಾರಿನಲ್ಲಿ ಸಿಲುಕಿಕೊಂಡಿದ್ದವರನ್ನು ಹೊರತೆಗೆಯಲು ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಮತ್ತು ಸ್ಥಳೀಯರು ಹರಸಾಹಸಪಡಬೇಕಾಯಿತು. ಅಪಘಾತದ ಬಗ್ಗೆ ಇರಿಟ್ಟಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

car

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Three students were killed and 5 others were injured when a lorry hit a parked car at Iritti near Kannur, Kasaragodu on Thursday on May 26, 2016 morning.
Please Wait while comments are loading...