Darshan Thoogudeepa: ಮೊಮ್ಮಗನ ನೋಡಿ ಕಣ್ಣೀರಿಟ್ಟ ರೇಣುಕಾಸ್ವಾಮಿ ತಂದೆ
ಚಿತ್ರದುರ್ಗ, ಅಕ್ಟೋಬರ್ 16: ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ಬರ್ಬರವಾಗಿ ಕೊಲೆಯಾಗಿದ್ದ ರೇಣುಕಾಸ್ವಾಮಿ ಪತ್ನಿಗೆ ಗಂಡು ಮಗು ಜನನವಾಗಿದೆ. ಚಿತ್ರದುರ್ಗದ ಕೀರ್ತಿ ಆಸ್ಪತ್ರೆಯಲ್ಲಿ ರೇಣುಕಾಸ್ವಾಮಿ ಪತ್ನಿ ಗಂಡು ಮಗುವಿಗೆ ಜನ್ಮ ನೀಡಿದ್ದು, ರೇಣುಕಾಸ್ವಾಮಿ ಕುಟುಂಬದವರು ಖುಷಿಯಲ್ಲಿದ್ದಾರೆ.
ಮೃತ ರೇಣುಕಾಸ್ವಾಮಿ ಮನೆಗೆ ಮೊಮ್ಮಗನ ಆಗಮನ ಹಿನ್ನೆಲೆಯಲ್ಲಿ ಕುಟುಂಬಸ್ಥರಲ್ಲಿ ಸಂಭ್ರಮ, ಸಂತಸ ಮನೆ ಮಾಡಿದೆ. ಮೊಮ್ಮಗ ಜನ್ಮ ಸಂಭ್ರಮದ ವೇಳೆ ಮಾಧ್ಯಮಗಳ ಮುಂದೆ ಮೊದಲ ಬಾರಿಗೆ ಕಾಶೀನಾಥ ಶಿವನಗೌಡ್ರ ನಗೆ ಬೀರಿದ್ದಾರೆ.

ಮೊಮ್ಮಗ ಜನನದಿಂದ ಸಂತಸದಲ್ಲಿರುವ ರೇಣುಕಾಸ್ವಾಮಿ ತಂದೆಕಾಶೀನಾಥ ಶಿವನಗೌಡ್ರ ಮಾಧ್ಯಮಗಳ ಜೊತೆಗೆ ಮಾತನಾಡಿ, ನಮ್ಮ ಮಗನೇ ಹುಟ್ಟಿ ಬಂದಷ್ಟು ಸಂತೋಷವಾಗಿದೆ ಎಂದು ಮಗನನ್ನು ನೆನೆದು ಕಾಶೀನಾಥ ಶಿವನಗೌಡ್ರ ಮಗನನ್ನು ನೆನೆದು ಕಣ್ಣೀರಿಟ್ಟಿದ್ದಾರೆ. ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ತುಂಬಾ ಕಾಳಜಿ ವಹಿಸಿದ್ದಾರೆ. ನಾನು ವೈದ್ಯರು ಹಾಗೂ ಸಿಬ್ಬಂದಿಗೆ ಚಿರರುಣಿ ಎಂದು ಚಿತ್ರದುರ್ಗದಲ್ಲಿ ಮೃತ ರೇಣುಕಾಸ್ವಾಮಿ ತಂದೆ ಕಾಶೀನಾಥ ಶಿವನಗೌಡ್ರ ಹೇಳಿದರು.
ರೇಣುಕಾಸ್ವಾಮಿ ಕೊಲೆಯಾದಾಗ ಸಹನಾ ಗರ್ಭಿಣಿಯಾಗಿದ್ದರು. ಸಹನಾ ಅವರು ಇಂದು ಬೆಳಗ್ಗೆ 5 ಗಂಟೆಗೆ ಗಂಡು ಮಗುವಿಗೆ ಜನ್ಮ ನೀಡಿದ್ದರು. ನಟ ದರ್ಶನ್ ಅಂಡ್ ಗ್ಯಾಂಗ್ ಜೂನ್ 8 ರಂದು ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿ ನಂತರ ಚಿತ್ರಹಿಂಸೆ ನೀಡಿ ಕೊಲೆ ಮಾಡಿದ್ದಾರೆ ಎಂಬ ಆರೋಪವಿದೆ. ಸದ್ಯ ಈ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಸೇರಿ ಆರು ಮಂದಿ ಆರೋಪಿಗಳು ಜೈಲಿನಲ್ಲಿದ್ದಾರೆ.
ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ಕೊಲೆಯಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಪತ್ನಿ ಸಹನಾ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಇಂದು ಬೆಳಗಿನ ಜಾವ 6ಗಂಟೆ 55 ನಿಮಿಷದಲ್ಲಿ ನಗರದ ಜೆಸಿಆರ್ ಬಡಾವಣೆಯಲ್ಲಿರುವ ಕೀರ್ತಿ ಆಸ್ಪತ್ರೆಯಲ್ಲಿ ಸಹನಾ ಮಗುವಿಗೆ ನನ್ಮ ನೀಡಿದರು. ನಿಗದಿತ ದಿನಾಂಕಕ್ಕಿಂತ ಒಂದು ವಾರ ಮೊದಲೇ ಮಗು ಜನನ ಹಿನ್ನೆಲೆ, ವೈದ್ಯಾಧಿಕಾರಿಗಳು ಮಗುವನ್ನು ಅಬ್ಜರ್ವೇಶನ್ ನಲ್ಲಿ ಇಟ್ಟಿದ್ದಾರೆ. ಮೃತ ರೇಣುಕಾ ಸ್ವಾಮಿ ಮನೆಯಲ್ಲಿ ಸಂಭ್ರಮದ ವಾತಾವರಣ ಸೃಷ್ಟಿಯಾಗಿದೆ.
ನಟಿ ಪವಿತ್ರಾ ಗೌಡಗೆ ಮೃತ ರೇಣುಕಾ ಸ್ವಾಮಿ ಅಶ್ಲೀಲ ಮೆಸೇಜ್ ಮಾಡಿದ ಆರೋಪದಲ್ಲಿ ಚಿತ್ರದುರ್ಗದಿಂದ ರೇಣುಕಾ ಸ್ವಾಮಿಯನ್ನು ಕರೆದೊಯ್ದು ಕೊಲೆ ಮಾಡಲಾಗಿತ್ತು. ಈ ಸಂಬಂಧ ನಟ ದರ್ಶನ್ ಮತ್ತು ಗ್ಯಾಂಗ್ ಜೈಲು ಸೇರಿದ್ದಾರೆ. ಅಲ್ಲದೆ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ರದ್ದು ಮಾಡಿದೆ.












Click it and Unblock the Notifications