ಕಸ್ತೂರಿ ರಂಗನ್ ವರದಿಗೆ ವಿರೋಧ, ಬುಧವಾರ ಹೆಬ್ರಿ ಬಂದ್
ಉಡುಪಿ, ಡಿ.16 : ಕಸ್ತೂರಿ ರಂಗನ್ ವರದಿ ವಿರೋಧಿಸಿ ಬುಧವಾರ ಹೆಬ್ರಿ ಬಂದ್‌ಗೆ ಕರೆ ನೀಡಲಾಗಿದೆ. ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟ ಸಮಿತಿ ಹೆಬ್ರಿ ವಲಯದ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಬಂದ್‌ಗೆ ಕರೆ ನೀಡಿದ್ದು, ಬಸ್ ಸಂಚಾರವೂ ಸ್ಥಗಿತಗೊಳ್ಳಲಿದೆ.
ಹೆಬ್ರಿಯ ಅನಂತ ಪದ್ಮನಾಭ ದೇವಾಲಯದ ಸನ್ನಿಧಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೋರಾಟ ಸಮಿತಿ ಅಧ್ಯಕ್ಷ ನವೀನ್ ಅಡ್ಯಂತಾಯ ಬಂದ್ ಬಗ್ಗೆ ಮಾಹಿತಿ ನೀಡಿದರು. ಡಿ. 17ರ ಬೆಳಗ್ಗೆ 9ರಿಂದ ಸಂಜೆ 5ರ ತನಕ ಹೆಬ್ರಿ ಬಂದ್ ಹಾಗೂ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಅವರು ಹೇಳಿದರು.

ಹೆಬ್ರಿ, ಚಾರ, ಬೇಳಂಜೆ, ಕುಚ್ಚಾರು, ಕಬ್ಬಿನಾಲೆ ಸುತ್ತಮುತ್ತಲಿನ ಸಂತ್ರಸ್ತರು ಸೇರಿದಂತೆ ಸುಮಾರು 35 ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ. ಹೆಬ್ರಿಯ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ವರ್ತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು. [ಕಸ್ತೂರಿ ರಂಗನ್ ವರದಿ : ಕೊಡುಗು ಬಂದ್]
ಬುಧವಾರ ಬೆಳಗ್ಗೆ 6ರಿಂದ ಸಂಜೆ 6ರ ತನಕ ಹೆಬ್ರಿ ಮಾರ್ಗದಲ್ಲಿ ಯಾವುದೇ ಬಸ್ಸಿನ ಸಂಚಾರವಿರುವುದಿಲ್ಲ ಎಂದು ಹೇಳಿದ ಅವರು, ರಾಜಕೀಯ ಬಿಟ್ಟು ಪ್ರತಿಯೊಬ್ಬರು ಪ್ರತಿಭಟನೆಯಲ್ಲಿ ಭಾಗವಹಿಸಬೇಕು. ಯಾವುದೇ ಅಹಿತಕರ ಘಟನೆಗೆ ಅವಕಾಶ ಮಾಡಿಕೊಡದಂತೆ ಶಾಂತಿಯುತವಾಗಿ ಬಂದ್‌ಗೆ ಬೆಂಬಲ ನೀಡಿ ಎಂದು ಜನರಿಗೆ ಮನವಿ ಮಾಡಿದರು.
ಏನಿದು ವರದಿ : ಪಶ್ಚಿಮಘಟ್ಟ ಸಂರಕ್ಷಣೆ ಬಗ್ಗೆ ಮಾಧವ ಗಾಡ್ಗೀಳ್ ವರದಿ ಬಂದ ನಂತರ ಕೇಂದ್ರ ಸರ್ಕಾರ 2012 ಆಗಸ್ಟ್ 17ರಂದು ಬಾಹ್ಯಾಕಾಶ ವಿಜ್ಞಾನಿ ಡಾ.ಕೆ.ಕಸ್ತೂರಿ ರಂಗನ್ ಅಧ್ಯಕ್ಷತೆಯಲ್ಲಿ ಉನ್ನತ ಹಂತದ ಸಮಿತಿ ರಚಿಸಿತ್ತು. ಆದರೆ, ಈ ವರದಿಯನ್ನು ಜಾರಿಗೊಳಿಸಬಾರದು ಎಂದು ಜನರು ಒತ್ತಾಯಿಸುತ್ತಿದ್ದಾರೆ.
ಪಶ್ಚಿಮಘಟ್ಟದಲ್ಲಿ ಗಣಿಗಾರಿಕೆ ನಿಷೇಧಿಸುವುದು, ಪರಿಸರದ ಮೇಲೆ ಹಾನಿಯುಂಟು ಮಾಡುವ ಕೈಗಾರಿಕೆಗಳನ್ನು ನಿಷೇಧಿಸುವುದು, ನಗರೀಕರಣ ಮತ್ತು ಅಭಿವೃದ್ಧಿ ಕಾಮಗಾರಿಗಳ ಮೇಲೆ ನಿಯಂತ್ರಣ, ಕೃಷಿಯಲ್ಲಿ ರಾಸಾಯನಿಕ ಕೀಟನಾಶಕ ಬಳಸದಂತೆ ನಿಷೇಧ ಮುಂತಾದ ಪ್ರಸ್ತಾವನೆಗಳು ವರದಿಯಲ್ಲಿವೆ.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications