ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಸ್ತೂರಿ ರಂಗನ್ ವರದಿಗೆ ವಿರೋಧ, ಡಿ.2ರಂದು ಕೊಡಗು ಬಂದ್

|
Google Oneindia Kannada News

ಕೊಡಗು, ಡಿ.1 : ಪಶ್ಚಿಮಘಟ್ಟ ಸಂರಕ್ಷಣೆ ಬಗ್ಗೆ ಡಾ.ಕಸ್ತೂರಿರಂಗನ್‌ ಸಮಿತಿ ನೀಡಿರುವ ವರದಿಯನ್ನು ಅನುಷ್ಠಾನಗೊಳಿಸಬಾರದು ಎಂದು ಒತ್ತಾಯಿಸಿ ಕಸ್ತೂರಿ ರಂಗನ್‌ ವರದಿ ವಿರೋಧಿ ಹೋರಾಟ ಸಮಿತಿ ಮತ್ತು ಸರ್ವಪಕ್ಷಗಳು ಸೇರಿ ಡಿ.2ರಂದು ಕೊಡಗು ಬಂದ್‌ಗೆ ಕರೆ ನೀಡಿವೆ.

ಕೊಡಗು ಬಂದ್‌ ಬಗ್ಗೆ ಮಾಹಿತಿ ನೀಡಿರುವ ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್‌ ಅವರು, ಕಸ್ತೂರಿ ರಂಗನ್‌ ವರದಿಯನ್ನು ತಿರಸ್ಕರಿಸುವಂತೆ ಒತ್ತಾಯಿಸಿ ಮತ್ತು ಅರಣ್ಯಾಧಿಕಾರಿಗಳ ವರ್ತನೆಯನ್ನು ಖಂಡಿಸಿ ಡಿ. 2ರಂದು ಬೆಳಗ್ಗೆ 6ರಿಂದ ಸಂಜೆ 6 ಗಂಟೆಯವರೆಗೆ ಜಿಲ್ಲೆಯಾದ್ಯಂತ ಬಂದ್‌ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

appachu ranjan

ಸರ್ವಪಕ್ಷಗಳು, ವಿವಿಧ ಸಂಘಟನೆಗಳ ಸದಸ್ಯರು ಸಭೆ ಸೇರಿ ಕೊಡಗು ಬಂದ್ ಮಾಡುವ ಕುರಿತು ತೀರ್ಮಾನ ಕೈಗೊಂಡಿದ್ದೇವೆ. ಜಿಲ್ಲೆಗೆ ಮಾರಕವಾಗಿರುವ ಯೋಜನೆಗಳ ಹಿಂದೆ ಪರಿಸರವಾದಿಗಳ ಕೈವಾಡವಿದ್ದು, ಅವರು ಸರ್ಕಾರವನ್ನೇ ಮೀರಿ ಬೆಳೆದಿದ್ದಾರೆ. ಈ ವಿಷಯದ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿಯೂ ಪ್ರಸ್ತಾಪಿಸಲಾಗುವುದು ಎಂದು ಅಪ್ಪಚ್ಚು ರಂಜನ್ ತಿಳಿಸಿದರು. [ಕಸ್ತೂರಿ ರಂಗನ್ ವರದಿಗೆ ಕೊಡವರ ವಿರೋಧ]

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಬಿ.ಟಿ. ಪ್ರದೀಪ್‌ ಅವರು ಕೊಡಗು ಬಂದ್‌ಗೆ ಬೆಂಬಲ ನೀಡಿದ್ದು, ಅರಣ್ಯ ಸಂರಕ್ಷಣೆಯ ಹೆಸರಿನಲ್ಲಿ ಕೊಡಗು ಜಿಲ್ಲೆಗೆ ಮಾರಕವಾದ ಕಾನೂನನ್ನು ಜಾರಿಗೊಳಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜಕೀಯ ಮರೆತು ಜಿಲ್ಲೆಯ ಶಾಸಕರಿಗೆ ಬೆಂಬಲ ನೀಡುತ್ತಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

ಅಹವಾಲು ಸ್ವೀಕಾರ : ನ.28ರಂದು ಕಸ್ತೂರಿ ರಂಗನ್ ವರದಿ ಸಂಬಂಧ ರಾಜ್ಯ ಸಮಿತಿಯ ಸದಸ್ಯರಾದ ಬ್ರಿಜೇಶ್ ಕುಮಾರ್ ದೀಕ್ಷಿತ್, ವಿಪಿನ್ ಸಿಂಗ್ ನೇತೃತ್ವದ ತಂಡವು ಕೊಡಗು ಜಿಲ್ಲೆಯ ಸಾರ್ವಜನಿಕರು, ಸಂಘ ಸಂಸ್ಥೆಗಳು ಮತ್ತಿತರರಿಂದ ಅಹವಾಲು ಸ್ವೀಕರಿಸಿದ್ದಾರೆ.

ಏನಿದು ವರದಿ : ಪಶ್ಚಿಮಘಟ್ಟ ಸಂರಕ್ಷಣೆ ಬಗ್ಗೆ ಮಾಧವ ಗಾಡ್ಗೀಳ್ ವರದಿ ಬಂದ ನಂತರ ಕೇಂದ್ರ ಸರ್ಕಾರ 2012 ಆಗಸ್ಟ್ 17ರಂದು ಬಾಹ್ಯಾಕಾಶ ವಿಜ್ಞಾನಿ ಡಾ.ಕೆ.ಕಸ್ತೂರಿ ರಂಗನ್ ಅಧ್ಯಕ್ಷತೆಯಲ್ಲಿ ಉನ್ನತ ಹಂತದ ಸಮಿತಿ ರಚಿಸಿತ್ತು. ಆದರೆ, ಈ ವರದಿಯನ್ನು ಜಾರಿಗೊಳಿಸಬಾರದು ಎಂದು ಕೊಡಗಿನಲ್ಲಿ ಜನರು ಒತ್ತಾಯಿಸುತ್ತಿದ್ದಾರೆ.

ಪಶ್ಚಿಮಘಟ್ಟದಲ್ಲಿ ಗಣಿಗಾರಿಕೆ ನಿಷೇಧಿಸು­ವುದು, ಪರಿಸರದ ಮೇಲೆ ಹಾನಿ­ಯುಂಟು ಮಾಡುವ ಕೈಗಾರಿಕೆಗಳನ್ನು ನಿಷೇಧಿಸುವುದು, ನಗರೀಕರಣ ಮತ್ತು ಅಭಿವೃದ್ಧಿ ಕಾಮಗಾರಿಗಳ ಮೇಲೆ ನಿಯಂತ್ರಣ, ಕೃಷಿಯಲ್ಲಿ ರಾಸಾಯನಿಕ ಕೀಟನಾಶಕ ಬಳಸದಂತೆ ನಿಷೇಧ ಮುಂತಾದ ಪ್ರಸ್ತಾವನೆಗಳಿವೆ.

ಸಮಿತಿ ಪಶ್ಚಿಮ ಘಟ್ಟದಲ್ಲಿ ಹಲವು ಪ್ರದೇಶಗಳನ್ನು ಸೂಕ್ಷ್ಮ ವಲಯ ಎಂದು ಗುರುತಿಸಿದೆ. ಕೊಡಗು ಸೇರಿದಂತೆ ರಾಜ್ಯದ ಹತ್ತು ಜಿಲ್ಲೆಗಳು ಈ ಸೂಕ್ಷ್ಮ ವಲಯದಲ್ಲಿವೆ. ಒಟ್ಟು 1,550 ಗ್ರಾಮಗಳು ಇದರ ವ್ಯಾಪ್ತಿಯೊಳಗೆ ಬರುತ್ತವೆ. ಕೊಡುಗು ಜಿಲ್ಲೆಯ 53 ಗ್ರಾಮಗಳ ಇದರಲ್ಲಿವೆ.

English summary
As people of Kodagu have strongly opposed Kasturirangan report on the protection of Western Ghat. Many organizations called for Kodagu bandh on December 2, Tuesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X