ಕರ್ನಾಟಕ ಪಬ್ಲಿಕ್ ಶಾಲೆ: ಹೆಚ್ಚುವರಿ ಆಂಗ್ಲ ಮಾಧ್ಯಮ ವಿಭಾಗ ಆರಂಭ

ಬೆಂಗಳೂರು, ನವೆಂಬರ್ 24: ಕರ್ನಾಟಕ ಸರ್ಕಾರ ಪ್ರಸ್ತುತ ನಡೆಯುತ್ತಿರುವ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಆಂಗ್ಲ ಮಾಧ್ಯಮದ (ದ್ವಿಭಾಷಾ ಮಾಧ್ಯಮ) ತರಗತಿಗಳ ಜೊತೆಗೆ ಹೆಚ್ಚುವರಿಯಾಗಿ ಆಂಗ್ಲ ಮಾಧ್ಯಮದ ವಿಭಾಗಗಳನ್ನು ಪ್ರಾರಂಭಿಸುವ ಬಗ್ಗೆ ಆದೇಶವನ್ನು ಹೊರಡಿಸಿದೆ. ಪ್ರಸ್ತಾಪಿತ 51 ಕೆಪಿಎಸ್‌ಗಳಲ್ಲಿ 1ನೇ ತರಗತಿಯ ಹೆಚ್ಚುವರಿ ವಿಭಾಗವನ್ನು ಪ್ರಾರಂಭಿಸಲು ಅವಶ್ಯವಿರುವ ಶಿಕ್ಷಕರನ್ನು ಪ್ರಾಥಮಿಕ ಶಾಲಾ ಶಿಕ್ಷಕರ ಮರು ನಿಯೋಜನೆ ಮೂಲಕ ಬಳಸಿಕೊಳ್ಳುವುದಾಗಿ ಸರ್ಕಾರವು ಆದೇಶಿಸಿರುತ್ತದೆ ಎಂದು ತಿಳಿಸಲಾಗಿದೆ.

ಈ ಕುರಿತು ಡಾ. ತ್ರಿಲೋಕ್ ಚಂದ್ರ, ಆಯುಕ್ತರು ಶಾಲಾ ಶಿಕ್ಷಣ ಇಲಾಖೆ ಜ್ಞಾಪನಾ ಪತ್ರವನ್ನು ಹೊರಡಿಸಿದ್ದಾರೆ. ಸರ್ಕಾರಿ ಶಾಲೆಗಳ ಬಲವರ್ಧನೆ ಸಂಬಂಧ ಪ್ರಸ್ತುತ ನಡೆಯುತ್ತಿರುವ 286 ಕೆಪಿಎಸ್ ಶಾಲೆಗಳ ಪೈಕಿ ಮಕ್ಕಳ ದಾಖಲಾತಿ ಹೆಚ್ಚಿರುವ ಕೆಲವು ಆಯ್ದ ಶಾಲೆಗಳಲ್ಲಿ 42 ಪೂರ್ವ ಪ್ರಾಥಮಿಕ (ಎಲ್‌ಕೆಜಿ) ಮತ್ತು 51 ಒಂದನೇ ತರಗತಿ ಶಾಲೆಗಳಲ್ಲಿ ಹಾಲಿ ನಡೆಯುತ್ತಿರುವ ಮಾಧ್ಯಮದಲ್ಲಿ ಹೆಚ್ಚುವರಿಯಾಗಿ ಆಂಗ್ಲ ಮಾಧ್ಯಮದ ವಿಭಾಗಗಳನ್ನು ಪ್ರಾರಂಭಿಸುವ ಕುರಿತು ಸರ್ಕಾರದ ಅನುಮೋದನೆ ಕೋರಲಾಗಿತ್ತು ಎಂದು ಹೇಳಿದ್ದಾರೆ.

Kataka Public Schools To Introduce Additional English Medium Division

ಸರ್ಕಾರವು ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಒಟ್ಟು 286 ಕರ್ನಾಟಕ ಪಬ್ಲಿಕ್ ಶಾಲೆಗಳ ಪೈಕಿ 42 ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಆಂಗ್ಲ ಮಾಧ್ಯಮದಲ್ಲಿ ಹೆಚ್ಚುವರಿಯಾಗಿ ಎಲ್‌ಕೆಜಿ ತರಗತಿಗಳನ್ನು ಪ್ರಾರಂಭಿಸಲು ಮತ್ತು 51 ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ 1ನೇ ತರಗತಿಯ ಆಂಗ್ಲ ಮಾಧ್ಯಮದಲ್ಲಿ ಹೆಚ್ಚುವರಿ ವಿಭಾಗವನ್ನು 2024-25ನೇ ಸಾಲಿನಿಂದ ಪ್ರಾರಂಭಿಸಲು ಷರತ್ತುಗಳಿಗೊಳಪಟ್ಟು ಸರ್ಕಾರವು ಅನುಮೋದನೆ ನೀಡಿದೆ ಎಂದು ತಿಳಿಸಿದ್ದಾರೆ.

ಷರತ್ತುಗಳು

* ಇದರಿಂದ ಉಂಟಾಗುವ ಹೆಚ್ಚುವರಿ ವೆಚ್ಚಗಳನ್ನು 2024-25ನೇ ಸಾಲಿನ ಆಯವ್ಯಯದಲ್ಲಿ ಕೆಪಿಎಸ್ ಶಾಲೆಗಳಿಗೆ ನಿಗದಿಪಡಿಸಲಾದ ಅನುದಾನದಲ್ಲಿ ಭರಿಸುವುದು.

* ಪ್ರಸ್ತಾಪಿತ 51 ಕೆಪಿಎಸ್‌ಗಳಲ್ಲಿ 1ನೇ ತರಗತಿಯ ಹೆಚ್ಚುವರಿ ವಿಭಾಗವನ್ನು ಪ್ರಾರಂಭಿಸಲು ಅವಶ್ಯವಿರುವ ಶಿಕ್ಷಕರನ್ನು ಪ್ರಾಥಮಿಕ ಶಾಲಾ ಶಿಕ್ಷಕರ ಮರು ನಿಯೋಜನೆ ಮೂಲಕ ಬಳಸಿಕೊಳ್ಳುವುದಾಗಿ ಸರ್ಕಾರವು ಆದೇಶಿಸಿರುತ್ತದೆ.

* ಸದರಿ ಆದೇಶದಲ್ಲಿನ ಅಂಶಗಳನ್ವಯ ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕೂಡಲೇ ನಿಯಮಾನುಸಾರ ಅಗತ್ಯ ಕ್ರಮಗಳನ್ನು ವಹಿಸುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಈ ಮೂಲಕ ತಿಳಿಸಲಾಗಿದೆ.

ಆರ್ಥಿಕ ಇಲಾಖೆ ಟಿಪ್ಪಣಿ: ಹೆಚ್ಚುವರಿಯಾಗಿ ಆಂಗ್ಲ ಮಾಧ್ಯಮದ ವಿಭಾಗ ಪ್ರಾರಂಭಿಸುವ ಕುರಿತು ಆರ್ಥಿಕ ಇಲಾಖೆಯ ಒಪ್ಪಿಗೆಯನ್ನು ನೀಡಿತ್ತು. ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಎಂ. ಎ. ಮಹಾಲಕ್ಷ್ಮಿ ಸರ್ಕಾರದ ಅಧೀನ ಕಾರ್ಯದರ್ಶಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪ್ರಾಥಮಿಕ) ಆದೇಶವನ್ನು ಹೊರಡಿಸಿದ್ದರು.

ಪ್ರಸ್ತುತ ನಡೆಯುತ್ತಿರುವ ಕೆಪಿಎಸ್ ಶಾಲೆಗಳಲ್ಲಿ ಆಂಗ್ಲ ಮಾಧ್ಯಮದ (ದ್ವಿಭಾಷ ಮಾಧ್ಯಮ) ತರಗತಿಗಳ ಜೊತೆಗೆ ಹೆಚ್ಚುವರಿಯಾಗಿ ಆಂಗ್ಲ ಮಾಧ್ಯಮದ ವಿಭಾಗಗಳನ್ನು ಪ್ರಾರಂಭಿಸುವ ಬಗ್ಗೆ ಎಂಬ ವಿಷಯವನ್ನು ಆದೇಶ ಒಳಗೊಂಡಿದೆ. ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರ ಪತ್ರವನ್ನು ಉಲ್ಲೇಖಿಸಲಾಗಿದೆ.

ಆಯುಕ್ತರ ಪ್ರಸ್ತಾವನೆಯಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಒಟ್ಟು 286 ಕರ್ನಾಟಕ ಪಬ್ಲಿಕ್ ಶಾಲೆಗಳ ಪೈಕಿ 51 ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಳದ ಹಿನ್ನೆಲೆಯಲ್ಲಿ ಈಗಾಗಲೇ 9 ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಹೆಚ್ಚುವರಿ ಎಲ್‌ಕೆಜಿ ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡಲಾಗಿದ್ದು, ಉಳಿದ 42 ಶಾಲೆಗಳಲ್ಲಿ ಆಂಗ್ಲ ಮಾಧ್ಯಮದಲ್ಲಿ ಹೆಚ್ಚುವರಿ ಎಲ್‌ಕೆಜಿ ತರಗತಿಗಳನ್ನು ಪ್ರಾರಂಭಿಸಲು ಮತ್ತು ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿರುವ 51 ಶಾಲೆಗಳಲ್ಲಿ ಆಂಗ್ಲ ಮಾಧ್ಯಮದಲ್ಲಿ ಹೆಚ್ಚುವರಿ 1ನೇ ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡುವಂತೆ ಹಾಗೂ 42 ಶಾಲೆಗಳಲ್ಲಿ ಎಲ್‌ಕೆಜಿ ಹೆಚ್ಚುವರಿ ವಿಭಾಗಕ್ಕೆ 2024-25ನೇ ಸಾಲಿನಲ್ಲಿ ರೂ. 68.25 ಲಕ್ಷಗಳ ಅನುದಾನದ ಅಗತ್ಯವಿರುತ್ತದೆ. ಇದೇ ರೀತಿ 51 ಶಾಲೆಗಳಲ್ಲಿ 1ನೇ ತರಗತಿ ಹೆಚ್ಚುವರಿ ವಿಭಾಗಕ್ಕೆ ರೂ. 51 ಲಕ್ಷಗಳ ಅಗತ್ಯವಿದ್ದು, ಒಟ್ಟಾರೆ ಅಂದಾಜು ವೆಚ್ಚ ರೂ. 119.25 ಲಕ್ಷಗಳನ್ನು ಮಂಜೂರು ಮಾಡಲು ಕೋರಿದ್ದರು.

ಆಯುಕ್ತರು ಸಲ್ಲಿಸಿರುವ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ ಆದೇಶವನ್ನು ಹೊರಡಿಸಲಾಗಿತ್ತು. ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಒಟ್ಟು 286 ಕರ್ನಾಟಕ ಪಬ್ಲಿಕ್ ಶಾಲೆಗಳ ಪೈಕಿ 42 ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಆಂಗ್ಲ ಮಾಧ್ಯಮದಲ್ಲಿ ಹೆಚ್ಚುವರಿಯಾಗಿ ಎಲ್‌ಕೆಜಿ ತರಗತಿಯನ್ನು ಪ್ರಾರಂಭಿಸಲು ಮತ್ತು 51 ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ 1ನೇ ತರಗತಿಯ ಆಂಗ್ಲ ಮಾಧ್ಯಮದಲ್ಲಿ ಹೆಚ್ಚುವರಿ ವಿಭಾಗವನ್ನು 2024-25ನೇ ಸಾಲಿನಿಂದ ಪ್ರಾರಂಭಿಸಲು ಷರತ್ತುಗಳಿಗೊಳಪಟ್ಟು ಸರ್ಕಾರದ ಅನುಮೋದನೆ ನೀಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+