ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೋದಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್ ಅಭಿನಂದನೆ!

|
Google Oneindia Kannada News

ಬೆಂಗಳೂರು, ಡಿ. 25: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯಡಿ (ಪಿಎಂ ಕಿಸಾನ್ ಯೋಜನೆ) ಇಂದು 9 ಕೋಟಿ ರೈತರಿಗೆ ತಲಾ 2 ಸಾವಿರ ರೂಪಾಯಿಯಂತೆ ಒಟ್ಟು 18 ಸಾವಿರ ಕೋಟಿ ರೂಪಾಯಿಗಳನ್ನು ಕೇಂದ್ರ ಸರಕಾರ ಜಮಾ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಈ ಹಣವನ್ನು ರೈತರ ಖಾತೆಗಳಿಗೆ ನೇರವಾಗಿ ಬಿಡುಗಡೆ ಮಾಡಿ ತಮ್ಮ ರೈತಪರ ಕಳಕಳಿಯನ್ನು ಸಾಬೀತುಪಡಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಅವರು ಶ್ಲಾಘಿಸಿದ್ದಾರೆ.

ಪಿಎಂ ಕಿಸಾನ್ ಯೋಜನೆಯಡಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಮೂರು ಕಂತುಗಳಲ್ಲಿ ವರ್ಷಕ್ಕೆ ಒಟ್ಟು 6,000 ರೂಪಾಯಿ ನೀಡಲಾಗುತ್ತಿದೆ. ಈ ಯೋಜನೆ ಆರಂಭವಾದ ದಿನದಿಂದ ಇದುವರೆಗೆ 1 ಲಕ್ಷ 10 ಸಾವಿರ ಕೋಟಿ ರೂಪಾಯಿ ರೈತರ ಖಾತೆಗಳಿಗೆ ಜಮಾ ಆಗಿದೆ. ಇದು ಕೇಂದ್ರದ ಬಿಜೆಪಿ ಸರಕಾರವು ಅಧಿಕಾರಕ್ಕೆ ಬಂದ ಬಳಿಕ ಅನುಷ್ಠಾನಕ್ಕೆ ಬಂದ ಅತ್ಯಂತ ಮಹತ್ವದ ಯೋಜನೆಯಾಗಿದೆ ಎಂದು ವಿವರಿಸಿದ್ದಾರೆ.

Kateel praised Modi for releasing Prime Minister Kisan Samman Fund directly to farmers accounts

ರೈತರ ಖಾತೆಗೆ 18000 ಕೋಟಿ ರೂ ನೇರ ಜಮಾ; ಮೋದಿರೈತರ ಖಾತೆಗೆ 18000 ಕೋಟಿ ರೂ ನೇರ ಜಮಾ; ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರಕಾರವು ಕೃಷಿ ಉತ್ಪಾದನಾ ವೆಚ್ಚ ಕಡಿಮೆ ಮಾಡಿದೆ. ಮಣ್ಣಿನ ಆರೋಗ್ಯ ಕಾರ್ಡ್, ಕೋಟ್ಯಂತರ ರೈತರಿಗೆ ಫಸಲ್ ಬಿಮಾ ಯೋಜನೆ ಮೂಲಕ ನೆರವು, ಬೇವು ಲೇಪಿತ ಯೂರಿಯಾ ಸೇರಿದಂತೆ ಅನೇಕ ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿದೆ. ಕಳೆದ 2014ರಿಂದ ರೈತಪರವಾಗಿ ನಿರಂತರ ಚಿಂತನೆ, ಯೋಜನೆ ಅನುಷ್ಠಾನದ ಮೂಲಕ ತಮ್ಮ ಕಾಳಜಿ ವ್ಯಕ್ತಪಡಿಸಿದ್ದಾರೆಂದು, ಪ್ರಧಾನಿ ನರೇಂದ್ರ ಮೋದಿ, ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಇದೆ ಸಂದರ್ಭದಲ್ಲಿ ನಳಿನ್ ಕುಮಾರ್ ಕಟೀಲ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.

Recommended Video

ಬೆಂಗಳೂರು: ರಿಲಯನ್ಸ್ ಡಿಜಿಟಲ್ ಶಾಪ್ ನಲ್ಲಿ ಕಳ್ಳರ ಕರಾಮತ್ತು | Reliance digital | Oneindia Kannada

English summary
Under the Prime Minister's Kisan Samman Fund (PM Kisan Scheme) today, the central government has amassed a total of Rs 18,000 crore for each of the 9 crore farmers. BJP President Nalin Kumar Kateel praised Prime Minister Narendra Modi for releasing the money directly to farmers 'accounts and proving his farmers' concerns. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X