Katrnataka weather: ರಾಜ್ಯದ ಎಲ್ಲೆಲ್ಲಿ ಮೋಡ ಕವಿದ ವಾತಾವರಣ ಇರಲಿದೆ?-ಹವಾಮಾನ ವರದಿ ಹೇಳೋದೇನು?
ಕರ್ನಾಟಕ, ಜನವರಿ, 21: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಂಜು ಮುಸುಕಿದ ವಾತಾವರಣದ ಜೊತೆಗೆ ಚಳಿಯ ಪ್ರಮಾಣವು ಹೆಚ್ಚಾಗುತ್ತಲೇ ಇದೆ. ಬೆಳಗ್ಗೆ 10 ಗಂಟೆಯಾದರೂ ಸೂರ್ಯದೇವನ ದರ್ಶನವೇ ಆಗುವುದಿಲ್ಲ, ಬದಲಿಗೆ ಮಂಜು ಕವಿದಿರುತ್ತದೆ. ಹಾಗೆಯೇ ಇಂದು ಕೂಡ ಬಹುತೇಕ ಭಾಗಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಇದೇ ವಾತವರಣ ಮುಂದುವರೆಯಲಿದ್ದು, ಕೆಲವೇ ಜಿಲ್ಲೆಗಳಲ್ಲಿ ಮಾತ್ರ ಬೆಳಗ್ಗೆಯಿಂದಲೂ ಸಂಜೆವರೆಗೂ ಮೋಡ ಕವಿದ ವಾತಾವರಣ ಇರಲಿದೆ ಎನ್ನುವ ಮುನ್ಸೂಚನೆ ಇದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಕೂ ಬೆಳಗ್ಗೆ 10 ಗಂಟೆಯಾದರೂ ಮಂಜು ಮುಸುಕಿದ ವಾತಾವರಣವೇ ಇರಲಿದೆ. ಹಾಗೆಯೇ ತಾಪಮಾನದ ಪ್ರಮಾಣ ಕಡಿಮೆಯಿರಲಿದ್ದು, ಚಳಿಯ ಪ್ರಮಾಣ ಹೆಚ್ಚಿರಲಿದೆ ಎನ್ನುವ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ರಾತ್ರಿ ವೇಳೆ ಚಳಿಯ ವಾತಾವರಣ ಮುಂದುವರೆದಿದ್ದು, ಇಂದು (ಜನವರಿ 21) ಕೂಡ ಇದೇ ವಾತಾವರಣ ಮುಂದುವರಿಯಲಿದೆ. ಇನ್ನು ಕೆಲವೇ ಭಾಗಗಳಲ್ಲಿ ಮಾತ್ರ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯಾವುದ ಸಾಧ್ಯೆತೆಯಿದೆ ಎನ್ನುವ ಮಿನ್ಸೂಚನೆ ಇದೆ. ಹಾಗಾದರೆ ಎಲ್ಲೆಲ್ಲಿ ಹೆಚ್ಚು ಚಳಿ ಇರಲಿದೆ, ಯಾವ್ಯಾವ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಕೆಲವು ಕಡೆ ಉಷ್ಣಾಂಶ 3 ಡಿಗ್ರಿ ಸೆಲ್ಸಿಯಸ್‌ವರೆಗೂ ಏರಿಕೆಯಾಗುವ ಸಾಧ್ಯೆತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ. ಬೆಂಗಳೂರು, ಚಿತ್ರದುರ್ಗ ಜಿಲ್ಲೆಗಳ ಕೆಲವು ಕಡೆಗೆ ಮೋಡ ಕವಿದ ವಾತಾವರಣ ಇರಲಿದ್ದು, ಬೆಳಗಿನ ಸಮಯದಲ್ಲಿ ಮೈನಡುಗಿಸುವ ಚಳಿಯ ವಾತಾವರಣ ಇರಲಿದೆ ಎಂದು ತಿಳಿಸಿದೆ.
ನಿನ್ನೆ (ಜನವರಿ 20) ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡಗಳಲ್ಲಿ ಸಹಜ ವಾತಾವರಣಇರಲಿದೆ. ಕೆಲವು ಕಡೆ ಕೆಲ ಹೊತ್ತು ಆಕಾಶದಲ್ಲಿ ಚದುರಿದ ಮೋಡಗಳಿರುವ ವಾತಾವರಣವೂ ಕಂಡುಬಂದೀತು. ಅದೇ ರೀತಿ, ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ ಗದಗ, ಬಾಗಲಕೋಟೆ, ಬೀದರ್, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಗಳಲ್ಲಿ ಚಳಿಯ ವಾತಾವರಣ ಇರಲಿದ್ದು, ಮಧ್ಯಾಹ್ನದ ವೇಳೆ ಒಣಹವೆ ಮುಂದುವರೆದಿತ್ತು ಎಂದು ತಿಳಿಸಿದೆ.
ಇಂದು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಾಮರಾಜನಗರ, ಕೋಲಾರ, ರಾಮನಗರ, ಹಾಸನ, ಚಿಕ್ಕಮಗಳೂರು, ಕೊಡಗು, ಮೈಸೂರು, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರುಗಳಲ್ಲಿ ಚಳಿಯ ವಾತಾವರಣ ಇರಲಿದ್ದು, ಮಧ್ಯಾಹ್ನದ ವೇಳೆ ಒಣಹವೆ ಮುಂದುವರೆಯಲಿದೆ. ಕೆಲವು ಕಡೆ ಭಾಗಶಃ ಮೋಡಕವಿದ ಅಥವಾ ಚದುರಿದ ಮೋಡಗಳಿರುವ ವಾತಾವರಣದ ಎಂದು ತಿಳಿಸಿದೆ.
ಇನ್ನು ಇಂದು ರಾಜ್ಯ ರಾರಧಾನು ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಸುತ್ತಮುತ್ತ ಜಿಲ್ಲೆಗಳಲ್ಲಿ ಭಾನುವಾರ ರಾತ್ರಿ ವೇಳೆ ಚಳಿಯ ಪ್ರಮಾಣ ಹೆಚ್ಚಿರಲಿದೆ. ಕೆಲವು ಕಡೆ ಮುಂಜಾನೆ ಮಂಜು ಮುಸುಕಿದ ವಾತಾವರಣ ಇರಲಿದ್ದು, ಮಧ್ಯಾಹ್ನದ ವೇಳೆ ಬಿಸಿಲು ಇರಲಿದೆ. ಕೆಲವು ಕಡೆ ಮಾತ್ರ ಮೋಡ ಕವಿದ ವಾತಾವರಣ ಮುಂದುರೆಯುವ ಸಾಧ್ಯತೆಯಿದೆ. ಸಂಜೆ ಚಳಿಯೂ ಹೆಚ್ಚಾಗಬಹುದು. ಉಳಿದಂತೆ, ಮಧ್ಯಾಹ್ನದ ವೇಳೆ ಒಣಹವೆ ಇರಲಿದೆ ಎನ್ನುವ ಮುನ್ಸೂಚನೆ ಇದೆ.
ಒಟ್ಟಿನಲ್ಲು ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಇಂದು ಗರಿಷ್ಠ ತಾಪಮಾನ 29.5 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 17.8 ಡಿಗ್ರಿ ಸೆಲ್ಸಿಯಸ್ ದಾಖಲು ಆಗುವ ಸಾಧ್ಯತೆಯಿದೆ. ಅದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಗರಿಷ್ಠ ತಾಪಮಾನ 30.1 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 17.5 ಡಿಗ್ರಿ ಸೆಲ್ಸಿಯಸ್ ದಾಖಲು ಆಗಲಿದೆ ಎಂದು ತಿಳಿಸಿದೆ.












Click it and Unblock the Notifications