ಕೆಐಎಡಿಬಿ ಹಗರಣ: ಮಾಜಿ ಸಚಿವ ಕಟ್ಟಾ ನಾಯ್ಡುಗೆ ಬಿಗ್ ರಿಲೀಫ್
ಮಾಜಿ ಸಚಿವ ಕಟ್ಟಾಸುಬ್ರಹ್ಮಣ್ಯ ನಾಯ್ಡು ವಿರುದ್ಧ ದಾಖಲಾಗಿದ್ದ ಕೆಐಎಡಿಬಿ ಭೂ ಹಗರಣ ಪ್ರಕರಣಗಳನ್ನು ಹೈಕೋರ್ಟಿನ ಏಕಸದಸ್ಯ ಪೀಠ ಗುರುವಾರ ರದ್ದುಗೊಳಿಸಿದೆ.
ಬೆಂಗಳೂರು, ನವೆಂಬರ್ 03: ಮಾಜಿ ಸಚಿವ ಕಟ್ಟಾಸುಬ್ರಹ್ಮಣ್ಯ ನಾಯ್ಡು ವಿರುದ್ಧ ದಾಖಲಾಗಿದ್ದ ಕೆಐಎಡಿಬಿ ಭೂ ಹಗರಣ ಪ್ರಕರಣಗಳನ್ನು ಹೈಕೋರ್ಟಿನ ಏಕಸದಸ್ಯ ಪೀಠ ಗುರುವಾರ ರದ್ದುಗೊಳಿಸಿದೆ. ಕಟ್ಟಾ ನಾಯ್ಡು ಅಲ್ಲದೆ ಬಿಜೆಪಿ ಶಾಸಕರಾದ ಎಸ್.ಆರ್. ವಿಶ್ವನಾಥ್, ಎಸ್. ಮುನಿರಾಜು ಅವರಿಗೆ ಇದರಿಂದ ರಿಲೀಫ್ ಸಿಕ್ಕಿದೆ.
ಯಲಹಂಕ ಕ್ಷೇತ್ರದ ಶಾಸಕ ವಿಶ್ವನಾಥ್ ಹಾಗೂ ದಾಸರಹಳ್ಳಿ ಶಾಸಕ ಮುನಿರಾಜ್ ವಿರುದ್ಧ ಕೋರ್ಟ್ನಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು ಎಂದು ಹೈಕೋರ್ಟ್ನ ಏಕಸದಸ್ಯ ಪೀಠ ಪ್ರಕರಣವನ್ನು ರದ್ದುಗೊಳಿಸಿದೆ.

ವಿಶ್ವನಾಥ್ ವಿರುದ್ಧ ಭೂಕಬಳಿಕೆ ಹಾಗೂ ಮುನಿರಾಜು ವಿರುದ್ಧ ಖಾಸಗಿ ಜಮೀನು ಒತ್ತುವರಿ ಮಾಡಿಕೊಂಡ ಆರೋಪದ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ದೂರು ದಾಖಲಾಗಿತ್ತು.
ಕೆಐಎಡಿಬಿ ಭೂಹಗರಣಕ್ಕೆ ಸಂಬಂಧಪಟ್ಟಂತೆ ಕಟ್ಟಾಸುಬ್ರಹ್ಮಣ್ಯ ನಾಯ್ಡು ಸಚಿವ ಸ್ಥಾನವನ್ನು ಕಳೆದುಕೊಂಡು, ಜೈಲುಪಾಲಾಗಿದ್ದರು. ಆದರೆ,2011ರ ಡಿಸೆಂಬರ್ ನಲ್ಲಿ ಕೆಐಎಡಿಬಿ ಹಗರಣದ ಆರೋಪಿಯಾಗಿರುವ ಕಟ್ಟಾ ಸುಬ್ರಮಣ್ಯ ನಾಯ್ಡು ಹಾಗೂ ಕಟ್ಟಾ ಜಗದೀಶ್ ಮತ್ತು ಇಟಸ್ಕಾ ಎಂಡಿ ಶ್ರೀನಿವಾಸ್ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರಾಗಿತ್ತು.
ಹೈಕೋರ್ಟ್ನ ಏಕಸದಸ್ಯ ಪೀಠ ಬಿಜೆಪಿಯ ಈ ಮೂವರು ಮುಖಂಡರ ವಿರುದ್ಧ ದಾಖಲಾಗಿದ್ದ ಭೂಹಗರಣದ ಪ್ರಕರಣಗಳನ್ನು ರದ್ದುಗೊಳಿಸಿದೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications