Kaveri River: ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆ; ಮೆಟ್ಟೂರು ಜಲಾಶಯದ ಒಳಹರಿವು ಎಷ್ಟಿದೆ?
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದ್ದು ಜೂನ್ ತಿಂಗಳ ಮೊದಲ ದಿನದಿಂದಲೇ ಅಬ್ಬರಿಸಲು ಶುರು ಮಾಡಿದೆ. ದಕ್ಷಿಣ ಒಳನಾಡು, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಕಾವೇರಿ, ಕಪಿಲಾ, ವೇದಾವತಿ ನದಿಗಳು ಮೈದುಂಬಿಕೊಳ್ಳುತ್ತಿವೆ.
ಕರ್ನಾಟಕದಲ್ಲಿ ಮಳೆಯಾದರೆ ತಮಿಳುನಾಡಿಗೂ ಹೆಚ್ಚು ಅನುಕೂಲ ಇದೆ. ಮಂಡ್ಯ, ಮೈಸೂರು, ಕೊಡಗು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಕಾವೇರಿ ನದಿಯ ಹರಿವು ಹೆಚ್ಚುತ್ತಿದ್ದು, ತಮಿಳುನಾಡಿಗೆ ನೀರು ಹರಿಯುತ್ತಿದೆ.

ಭಾನುವಾರ ವ್ಯಾಪಕ ಮಳೆ ಸುರಿದ ಕಾರಣ ಕರ್ನಾಟಕ-ತಮಿಳುನಾಡು ಗಡಿಯಲ್ಲಿರುವ ಬಿಳಿಗುಂಡ್ಲುವಿನಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ತಮಿಳುನಾಡಿಗೆ ಹರಿಯುತ್ತಿದೆ. ಇನ್ನೆರಡು ದಿನಗಳಲ್ಲಿ ಮೆಟ್ಟೂರು ಜಲಾಶಯದ ಒಳಹರಿವು ಹೆಚ್ಚಾಗಲಿದೆ.
ಮೆಟ್ಟೂರು ಜಲಾಶಯದ ವ್ಯಾಪ್ತಿಯಲ್ಲಿ ಕೂಡ ಉತ್ತಮ ಮಳೆಯಾಗುತ್ತಿದ್ದು, ಈ ಬಾರಿ ನೀರಿನ ವಿವಾದ ಶುರುವಾಗದಿದ್ದರೆ ಸಾಕು ಎನ್ನುವಂತಾಗಿದೆ.
ಮೆಟ್ಟೂರು ಜಲಾಶಯದ ಒಳಹರಿವು ಎಷ್ಟಿದೆ?
ಸದ್ಯ ಮೆಟ್ಟೂರು ಜಲಾಶಯದ ಒಳಹರಿವು ಕೇವಲ 77 ಕ್ಯೂಸೆಕ್ಸ್ ಇದೆ. ಜಲಾಶಯದಿಂದ ನದಿಗೆ 2100 ಕ್ಯೂಸೆಕ್ಸ್ ನೀರನ್ನು ಹರಿಸಲಾಗುತ್ತಿದೆ. ಜಲಾಶಯದ ಒಟ್ಟು ಸಂಗ್ರಹ ಸಾಮರ್ಥ್ಯ 93.47 ಟಿಎಂಸಿ ಆಗಿದ್ದು, ಸದ್ಯ 13.523 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ.
ಉತ್ತಮ ಮಳೆ ನಿರೀಕ್ಷೆ
ಕಾವೇರಿ ಜಲಾನಯನ ಪ್ರದೇಶದಲ್ಲಿ ಜೂನ್ 10ರವೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೂರು ದಿನಗಳು ಗುಡುಗು-ಮಿಂಚು ಸಹಿತ ಭಾರಿ ಮಳೆ ಸುರಿಯಲಿದ್ದರೆ, ಉಳಿದ ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಕಳೆದ ವರ್ಷ ರಾಜ್ಯದಲ್ಲಿ ಮಳೆ ಕೊರತೆಯಿದ್ದರೂ ತಮಿಳುನಾಡಿಗೆ ಕಾವೇರಿ ನೀರು ಹರಿಸಲಾಗಿತ್ತು. ಇದು ಕರ್ನಾಟಕ ಕಾವೇರಿ ಜಲಾನಯನ ಪ್ರದೇಶದ ರೈತರ ಬೆಳಗಳಿಗೂ ನೀರು ಬಿಡಲು ಸಾಧ್ಯವಾಗಲಿಲ್ಲ, ಇದು ಜನರ ಆಕ್ರೋಶಕ್ಕೂ ಕಾರಣವಾಗಿತ್ತು.
ಈ ಬಾರಿ ಮುಂಗಾರು ಆರಂಭಕ್ಕೆ ಮುನ್ನವೇ ಉತ್ತಮ ಮಳೆಯಾಗಿದ್ದು, ಕೆಆರ್ ಎಸ್ ಜಲಾಶಯಕ್ಕೂ ಅಲ್ಪ ಪ್ರಮಾಣದಲ್ಲಿ ನೀರು ಬರುತ್ತಿದೆ. ವಾಡಿಕೆಯಂತೆ ಮುಂಗಾರು ಮಳೆ ಸುರಿದರೆ ಈ ಬಾರಿ ಕಬಿನಿ, ಹಾರಂಗಿ, ಹೇಮಾವತಿ, ಕಾವೇರಿ ಜಲಾಶಯ ತುಂಬಿದರೆ ಸಾಕು ಎನ್ನುವಂತಾಗಿದೆ.












Click it and Unblock the Notifications