ರಾಜ್ಯಸಭೆ ಚುನಾವಣೆ; ಬಿಜೆಪಿ ಅಭ್ಯರ್ಥಿಯಿಂದ ನಾಮಪತ್ರ
ಬೆಂಗಳೂರು, ನವೆಂಬರ್ 29 : ರಾಜ್ಯಸಭಾ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕೆ. ಸಿ. ರಾಮಮೂರ್ತಿ ನಾಮಪತ್ರ ಸಲ್ಲಿಸಿದರು. ಒಂದು ರಾಜ್ಯಸಭಾ ಸದಸ್ಯ ಸ್ಥಾನವನ್ನು ಭರ್ತಿ ಮಾಡಲು ಡಿಸೆಂಬರ್ 12ರಂದು ಚುನಾವಣೆ ನಡೆಯಲಿದೆ.
ಶುಕ್ರವಾರ ಕೆ.ಸಿ ರಾಮಮೂರ್ತಿ ರಾಜ್ಯಸಭಾ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಉಪಸ್ಥಿತರಿದ್ದರು.

ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭಾ ಸದಸ್ಯರನ್ನು ಆಯ್ಕೆ ಮಾಡಲು ಡಿಸೆಂಬರ್ 12ರಂದು ಉಪ ಚುನಾವಣೆ ನಡೆಯಲಿದೆ. ಡಿಸೆಂಬರ್ 2 ನಾಮಪತ್ರವನ್ನು ಸಲ್ಲಿಕೆ ಮಾಡಲು ಕೊನೆಯ ದಿನವಾಗಿದೆ. ಡಿಸೆಂಬರ್ 5 ನಾಮಪತ್ರ ವಾಪಸ್ ಪಡೆಯಲು ಕೊನೆ ದಿನ.
ಕರ್ನಾಟಕ ವಿಧಾನಸಭೆಯ ಶಾಸಕರು ರಾಜ್ಯಸಭಾ ಸದಸ್ಯರನ್ನು ಆಯ್ಕೆ ಮಾಡಲಿದ್ದಾರೆ. ಕೆ. ಸಿ. ರಾಮಮೂರ್ತಿ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಈಗ ಚುನಾವಣೆ ನಡೆಯುತ್ತಿದೆ. ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಇನ್ನೂ ಅಂತಿಮಗೊಂಡಿಲ್ಲ.
ಕೆ. ಸಿ. ರಾಮಮೂರ್ತಿ ಕಾಂಗ್ರೆಸ್‌ನಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಅವರ ಸದಸ್ಯತ್ವದ ಅವಧಿ 2022ರ ಜೂನ್ ತನಕ ಇದೆ. ಅವಧಿ ಮುಗಿಯುವ ಮುನ್ನವೇ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು.












Click it and Unblock the Notifications