ಅತೃಪ್ತ ಶಾಸಕರಿಗೆ ಕೊನೆಯ ಆಫರ್ ಕೊಟ್ಟ ಸಿದ್ದರಾಮಯ್ಯ!
ಬೆಂಗಳೂರು, ಜುಲೈ 08 : 'ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿಯ ಪ್ರಯತ್ನ ಎಂದಿಗೂ ಫಲ ಕೊಡುವುದಿಲ್ಲ. ಸಮ್ಮಿಶ್ರ ಸರ್ಕಾರ ಉಳಿಯಲಿದೆ, ಮುಂದುದರೆಯಲಿದೆ' ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರಿನಲ್ಲಿ ಸೋಮವಾರ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿ ನಡೆಸಿದರು. 'ಎಲ್ಲಾ ಸಚಿವರು ಸ್ವಯಂ ಪ್ರೇರಣೆಯಿಂದ ರಾಜೀನಾಮೆ ನೀಡಿದ್ದಾರೆ' ಎಂದರು.

'ಪ್ರತಿನಿತ್ಯ ನಡೆಯುತ್ತಿರುವ ಎಲ್ಲಾ ಬೆಳವಣಿಗೆಗಳನನ್ನು ನೋಡುತ್ತಿದ್ದೀರಿ. ಬಿಜೆಪಿಗೆ ಸಂಸದೀಯ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ. ಹೆದರಿಸಿ, ಆಮಿಷಗಳನ್ನು ವೊಡ್ಡಿ, ಶಾಸಕರನ್ನು ಬಿಜೆಪಿ ಖರೀದಿ ಮಾಡುತ್ತಿದೆ' ಎಂದು ಸಿದ್ದರಾಮಯ್ಯ ಆರೋಪಿಸಿದರು.
'ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ 5 ಬಾರಿ ಪ್ರಯತ್ನ ನಡೆಸಿದೆ ಎಲ್ಲವೂ ವಿಫಲವಾಗಿದೆ. 6ನೇ ಪ್ರಯತ್ನವೂ ವಿಫಲವಾಗಲಿದೆ. ಮೈತ್ರಿ ಸರ್ಕಾರ ಮುಂದುವರೆಯಲಿದೆ' ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
'ಎಲ್ಲಾ 22 ಸಚಿವರು ಸ್ವಯಂ ಪ್ರೇರಣೆಯಿಂದಾಗಿ ರಾಜೀನಾಮೆ ನೀಡಿದ್ದಾರೆ. ಮುಂದಿನ ತೀರ್ಮಾನವನ್ನು ತೆಗೆದುಕೊಳ್ಳಲು ಸಂಪೂರ್ಣ ಸ್ವತಂತ್ರ ನೀಡಿದ್ದಾರೆ. ಸಂಪುಟ ಪುನಾರಚನೆ ಮಾಡುತ್ತೇವೆ' ಎಂದು ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು.
ಕೆ.ಸಿ.ವೇಣುಗೋಪಾಲ್ ಹೇಳಿದ್ದೇನು?
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು, 'ಕಳೆದ 1 ವರ್ಷದಿಂದ ವರ್ಷದಿಂದ ಬಿಜೆಪಿ ಮೈತ್ರಿ ಸರ್ಕಾರವನ್ನು ಪತನಗೊಳಿಸಲು ಪ್ರಯತ್ನಗಳನ್ನು ಮಾಡುತ್ತಿದೆ. ಇಡಿ, ಸಿಬಿಐ ಅನ್ನು ಬಳಕೆ ಮಾಡಿಕೊಂಡು ಸರ್ಕಾರ ಬೀಳಿಸುವ ಪ್ರಯತ್ನವನ್ನು ಮಾಡುತ್ತಿದೆ' ಎಂದು ದೂರಿದರು.
'ಕಳೆದ ಮೂರು ದಿನದಿಂದ ಕರ್ನಾಟಕದ ಹಿರಿಯ ನಾಯಕರ ಜೊತೆ ವಿವರವಾದ ಚರ್ಚೆಯನ್ನು ನಡೆಸಿದ್ದೇವೆ. ಸಚಿವರು ಸ್ವಯಂ ಪ್ರೇರಿತವಾಗಿ ರಾಜೀನಾಮೆ ನೀಡಿದ್ದಾರೆ. ಅವರಿಗೆ ನಾನು ಧನ್ಯವಾದವನ್ನು ಸಲ್ಲಿಸುತ್ತೇನೆ. ನಮಗೆ ಪಕ್ಷದ ಕಾರ್ಯಕರ್ತರು, ಶಾಸಕರ ಮೇಲೆ ನಂಬಿಕೆ ಇದೆ' ಎಂದು ವೇಣುಗೋಪಾಲ್ ಹೇಳಿದರು.












Click it and Unblock the Notifications