ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರಿಗೆ ಕೆ.ಸಿ.ವೇಣುಗೋಪಾಲ್‌, ಡಿ.ಕೆ.ಶಿವಕುಮಾರ್‌ಗೆ ಕರೆ!

|
Google Oneindia Kannada News

ಬೆಂಗಳೂರು, ಮೇ 21 : ಲೋಕಸಭಾ ಚುನಾವಣೆ ಫಲಿತಾಂಶ ಘೋಷಣೆಗೂ ಮುನ್ನ ಕರ್ನಾಟಕದ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆ ಆರಂಭವಾಗಿದೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ.

ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ

ಮಂಗಳವಾರ ಸಂಜೆ ಕೆ.ಸಿ.ವೇಣುಗೋಪಾಲ್ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಜೊತೆ ಸಭೆ ನಡೆಸಲಿದ್ದಾರೆ.

ಮೈತ್ರಿ ಸರ್ಕಾರಕ್ಕೆ ಸಂಕಷ್ಟ ಎದುರಾದರೆ ಟ್ರಬಲ್ ಶೂಟರ್ ಇಲ್ಲ!ಮೈತ್ರಿ ಸರ್ಕಾರಕ್ಕೆ ಸಂಕಷ್ಟ ಎದುರಾದರೆ ಟ್ರಬಲ್ ಶೂಟರ್ ಇಲ್ಲ!

ಮಾಜಿ ಸಚಿವ, ಶಿವಾಜಿನಗರ ಶಾಸಕ ರೋಷನ್ ಬೇಗ್ ಅವರ ಹೇಳಿಕೆ ಕಾಂಗ್ರೆಸ್‌ನಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಈ ಬಗ್ಗೆ ಪಕ್ಷದ ನಾಯಕರಿಂದ ವೇಣುಗೋಪಾಲ್ ಮಾಹಿತಿ ಪಡೆಯಲಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗುವ ನಿರೀಕ್ಷೆ ಇದೆ.

ಮೈತ್ರಿ ಸರ್ಕಾರ : ಕಾಂಗ್ರೆಸ್ ಶಾಸಕರ ಹೇಳಿಕೆಗೆ ರಾಹುಲ್ ಅಸಮಾಧಾನಮೈತ್ರಿ ಸರ್ಕಾರ : ಕಾಂಗ್ರೆಸ್ ಶಾಸಕರ ಹೇಳಿಕೆಗೆ ರಾಹುಲ್ ಅಸಮಾಧಾನ

ಮೇ 23ರಂದು ಲೋಕಸಭಾ ಚುನಾವಣೆ ಫಲಿತಾಂಶ, ಕುಂದಗೋಳ, ಚಿಂಚೋಳಿ ವಿಧಾನಸಭಾ ಕ್ಷೇತ್ರದ ಫಲಿತಾಂಶ ಪ್ರಕಟವಾಗಲಿದೆ. ಈ ಹಿನ್ನಲೆಯಲ್ಲಿ ಕೆ.ಸಿ.ವೇಣುಗೋಪಾಲ್ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ. ಮುಂದಿನ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ......

ಡಿ.ಕೆ.ಶಿವಕುಮಾರ್‌ಗೆ ಕರೆ

ಡಿ.ಕೆ.ಶಿವಕುಮಾರ್‌ಗೆ ಕರೆ

ಬೆಂಗಳೂರಿಗೆ ಆಗಮಿಸಲಿರುವ ಕೆ.ಸಿ.ವೇಣುಗೋಪಾಲ್ ಅವರು ಕರ್ನಾಟಕ ಕಾಂಗ್ರೆಸ್ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಅವರಿಗೆ ಕರೆ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ವಿದೇಶ ಪ್ರವಾಸದಲ್ಲಿದ್ದಾರೆ. ಅಗತ್ಯವಿದ್ದರೆ ಪ್ರವಾಸ ಮೊಟಕುಗೊಳಿಸಿ ಆಗಮಿಸಬೇಕು ಎಂದು ಕೆ.ಸಿ.ವೇಣುಗೋಪಾಲ್ ಅವರು ಡಿ.ಕೆ.ಶಿವಕುಮಾರ್ ಅವರ ಜೊತೆ ಮಾತುಕತೆ ನಡೆಸಿದ್ದಾರೆ.

ಮೇ 27ರ ತನಕ ವಿದೇಶ ಪ್ರವಾಸ

ಮೇ 27ರ ತನಕ ವಿದೇಶ ಪ್ರವಾಸ

ಡಿ.ಕೆ.ಶಿವಕುಮಾರ್ ಕುಟುಂಬ ಸದಸ್ಯರ ಜೊತೆ ಆಸ್ಟ್ರೇಲಿಯಾ ಪ್ರವಾಸಕ್ಕೆ ತೆರಳಿದ್ದಾರೆ. ನಿಗದಿತ ವೇಳಾಪಟ್ಟಿಯಂತೆ ಅವರು ಮೇ 27ರ ತನಕ ರಾಜ್ಯಕ್ಕೆ ಆಗಮಿಸುವುದಿಲ್ಲ. ಮೈತ್ರಿ ಸರ್ಕಾರ ಪತನಗೊಳ್ಳುವಂತಹ ಬೆಳವಣಿಗೆ ನಡೆದರೆ ತಕ್ಷಣ ವಾಪಸ್ ಬರಲು ಸಿದ್ಧರಾಗಿರಿ ಎಂಬ ಮಾಹಿತಿಯನ್ನು ವೇಣುಗೋಪಾಲ್ ರವಾನೆ ಮಾಡಿದ್ದಾರೆ.

ಕುಮಾರಸ್ವಾಮಿ, ದೇವೇಗೌಡ ಭೇಟಿ

ಕುಮಾರಸ್ವಾಮಿ, ದೇವೇಗೌಡ ಭೇಟಿ

ಮತ್ತೊಂದು ಕಡೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಎಚ್.ಡಿ.ದೇವೇಗೌಡ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಮಧ್ಯಾಹ್ನ ದೇವೇಗೌಡರ ನಿವಾಸಕ್ಕೆ ತೆರಳಿರುವ ಕುಮಾರಸ್ವಾಮಿ, ಅಲ್ಲಿಯೇ ಭೋಜನ ಸವಿದರು, ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದರು.

ಕೆ.ಸಿ.ವೇಣುಗೋಪಾಲ್ ಚರ್ಚೆ

ಕೆ.ಸಿ.ವೇಣುಗೋಪಾಲ್ ಚರ್ಚೆ

ಮೇ 23ರಂದು ಫಲಿತಾಂಶ ಪ್ರಕಟವಾದ ಬಳಿಕ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಮುಂದಿನ ನಡೆ ಬಗ್ಗೆ ತೀರ್ಮಾನ ಕೈಗೊಳ್ಳಬಹುದು. ಅದಕ್ಕಾಗಿ ಶಾಸಕರು ಅವರ ಜೊತೆ ಹೋಗದಂತೆ ತಡೆಯಲು ಕೆ.ಸಿ.ವೇಣುಗೋಪಾಲ್ ಅವರು ರಾಜ್ಯ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ.

English summary
AICC general secretary and Karnataka in-charge K.C.Venugopal will visit Bengaluru on May 21, 2019 night. K.C.Venugopal called water resource minister D.K.Shivakumar who is in foreign tour.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X