ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೆಪ್ಟೆಂಬರ್ 20ಕ್ಕೆ ಸಿಇಟಿ ಫಲಿತಾಂಶ; ಎಂಜಿನಿಯರಿಂಗ್ ಶುಲ್ಕ ಹೆಚ್ಚಿಸಲು ನಿರ್ಧಾರ!

|
Google Oneindia Kannada News

ಬೆಂಗಳೂರು, ಸೆ. 03: "ಇದೇ ಸೆಪ್ಟೆಂಬರ್ 20ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (CET) ಫಲಿತಾಂಶ ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವಥ್ ನಾರಾಯಣ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಕಳೆದ ಅಗಸ್ಟ್ 28-29 ಮತ್ತು 30ರಂದು ಸಿಇಟಿ ಪರೀಕ್ಷೆ ನಡೆಸಲಾಗಿತ್ತು. ಕಳೆದ ವರ್ಷದಂತೆ ಈ ವರ್ಷವೂ ಸಿಇಟಿ ಪ್ರಕ್ರಿಯೆಯನ್ನು ಯಾವುದೇ ಗೊಂದಲ-ಸಮಸ್ಯೆ ಇಲ್ಲದೆ ಪೂರ್ಣಗೊಳಿಸಲಾಗುವುದು ಎಂದರು.

"ಸಕಾಲಕ್ಕೆ ಫಲಿತಾಂಶ ನೀಡುವುದೂ ಸೇರಿ ನಿಗದಿತ ವೇಳಾಪಟ್ಟಿಯಂತೆ ಕೌನ್ಸಿಲಿಂಗ್ ಮುಗಿಸಲಾಗುವುದು. ಯಾವುದೇ ಕಾರಣಕ್ಕೂ ಶೈಕ್ಷಣಿಕ ವರ್ಷ ಹಳಿತಪ್ಪಲು ಬಿಡುವುದಿಲ್ಲ. ಜೊತೆಗೆ ಪದವಿ ಪ್ರವೇಶಕ್ಕೆ ಕಾಲಾವಕಾಶವನ್ನು ವಿಸ್ತರಿಸಲಾಗಿದೆ" ಎಂದು ಉನ್ನತ ಶಿಕ್ಷಣ ಸಚಿವರು ತಿಳಿಸಿದ್ದಾರೆ.

2021ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಆಗಸ್ಟ್ 28, 29 ಹಾಗೂ 30ರಂದು ರಾಜ್ಯಾದ್ಯಂತ ಪರೀಕ್ಷಾ ಕೇಂದ್ರಗಳಲ್ಲಿ ನಡೆದಿತ್ತು. ಕಳೆದ ವರ್ಷದಂತೆ ಈ ವರ್ಷವೂ ಕೋವಿಡ್ ಸವಾಲಿನ ನಡುವೆ ಸರ್ಕಾರದ ಮಾರ್ಗಸೂಚಿಯಂತೆ ನಡೆದಿತ್ತು. ಕೋವಿಡ್ ಕಾರಣದಿಂದ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿಯ ಎಲ್ಲ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿತ್ತು. ಹೀಗಾಗಿ ಸಿಇಟಿಯಲ್ಲಿ ಪಡೆಯುವ ಅಂಕಗಳ ಆಧಾರದ ಮೇಲೆಯೇ ರ್ಯಾಂಕ್ ನಿರ್ಧಾರ ಮಾಡಲಾಗುತ್ತಿರುವುದು ಇದೇ ಮೊದಲ ಸಲವಾಗಿದೆ.

ಎಂಜಿನಿಯರಿಂಗ್ ಕಾಲೇಜು ಶುಲ್ಕ ಹೆಚ್ಚಳ

ಎಂಜಿನಿಯರಿಂಗ್ ಕಾಲೇಜು ಶುಲ್ಕ ಹೆಚ್ಚಳ

ಎಂಜಿನಿಯರಿಂಗ್ ಕಾಲೇಜು ಶುಲ್ಕ ಹೆಚ್ಚಳ ವಿಚಾರದ ಬಗ್ಗೆ ಮುಂದಿನ ವಾರ ಸಭೆ ನಡೆಸಲು ತೀರ್ಮಾನ ಮಾಡಲಾಗಿದೆ. ಸಭೆಯಲ್ಲಿ ವಿದ್ಯಾರ್ಥಿಗಳ ಹಿತ ದೃಷ್ಟಿಯಲ್ಲಿಟ್ಟುಕೊಂಡು ಎಲ್ಲ ಅಂಶಗಳ ಬಗ್ಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲು ಉನ್ನತ ಶಿಕ್ಷಣ ಇಲಾಖೆ ಸಚಿವ ಡಾ. ಅಶ್ವಥ್ ನಾರಾಯಣ ತೀರ್ಮಾನ ಮಾಡಿದ್ದಾರೆ.


ಶುಲ್ಕ ಹೆಚ್ಚಳಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಗಳು ಉನ್ನತ ಶಿಕ್ಷಣ ಇಲಾಖೆಗೆಬ ಮನವಿ ಮಾಡಿದೆ. ಶುಲ್ಕ ಹೆಚ್ಚಳ ಮಾಡಿದರೂ ವಿದ್ಯಾರ್ಥಿಗಳ ಹಿತ ಕಾಯಲಾಗುವುದು ಎಂದು ಅಶ್ವಥ್ ನಾರಾಯಣ ಭರವಸೆ ನೀಡಿದ್ದಾರೆ. ಜೊತೆಗೆ ಕ್ರಮದ ಎಚ್ಚರಿಕೆಯನ್ನೂ ಕೊಟ್ಟಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ ನೆಪದಲ್ಲಿ ಶುಲ್ಕ ಹೆಚ್ಚಳಕ್ಕೆ ಅವಕಾಶ ಇಲ್ಲ

ರಾಷ್ಟ್ರೀಯ ಶಿಕ್ಷಣ ನೀತಿ ನೆಪದಲ್ಲಿ ಶುಲ್ಕ ಹೆಚ್ಚಳಕ್ಕೆ ಅವಕಾಶ ಇಲ್ಲ

ಖಾಸಗಿ ಪದವಿ ಕಾಲೇಜುಗಳಲ್ಲಿ ಶುಲ್ಕ ಹೆಚ್ಚಳ ಮಾಡುತ್ತಿರುವ ಬಗ್ಗೆ ವಿವರಿಸಿದರುವ ಡಾ. ಅಶ್ವಥ್ ನಾರಾಯಣ ಅವರು, "ರಾಷ್ಟ್ರೀಯ ಶಿಕ್ಷಣ ನೀತಿ ನೆಪದಲ್ಲಿ ಶುಲ್ಕ ಹೆಚ್ಚಳಕ್ಕೆ ಅವಕಾಶವೇ ಇಲ್ಲ. ವಿದ್ಯಾರ್ಥಿಗಳಿಗೆ ದುಬಾರಿ ಶುಲ್ಕ ವಿಧಿಸಿ ಕಾಲೇಜು ನಡೆಸುವುದು ಸರಿಯಲ್ಲ, ಗುಣಮಟ್ಟದ ಶಿಕ್ಷಣ ಕೊಡುವುದಷ್ಟೇ ಸರಕಾರದ ಉದ್ದೇಶ. ಈ ಬಗ್ಗೆ ದೂರುಗಳು ಬಂದರೆ ಗಮನ ಹರಿಸಿ ಆಯಾ ಕಾಲೇಜುಗಳ ವಿರುದ್ಧ ಕ್ರಮ ಜರುಗಿಸಲಾಗುವುದು" ಎಂದು ಎಚ್ಚರಿಕೆ ನೀಡಿದ್ದಾರೆ.

ಅಕ್ಟೋಬರ್ 1ರವರೆಗೂ ಪದವಿಗೆ ಪ್ರವೇಶಾವಕಾಶ

ಅಕ್ಟೋಬರ್ 1ರವರೆಗೂ ಪದವಿಗೆ ಪ್ರವೇಶಾವಕಾಶ

ವಿದ್ಯಾರ್ಥಿಗಳು ಸರಕಾರೀ ಕಾಲೇಜುಗಳಲ್ಲೇ ದಾಖಲಾಗಬೇಕು. ಅಲ್ಲಿ ಕಡಿಮೆ ಶುಲ್ಕದಲ್ಲಿ ಪದವಿ ನೀಡಲಾಗುವುದು. ಅದರಲ್ಲೂ ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ ಸೌಲಭ್ಯವಿದೆ. ಕೆಲ ಖಾಸಗಿ ಸಂಸ್ಥೆಗಳು ಉದ್ದೇಶಪೂರ್ವಕವಾಗಿ ಹೆಚ್ಚು ಶುಲ್ಕ ವಸೂಲಿ ಮಾಡುತ್ತಿವೆ. ಆ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಡಾ. ಅಶ್ವಥ್ ನಾರಾಯಣ ಅವರು ವಿದ್ಯಾರ್ಥಿಗಳಲ್ಲಿ ವಿನಂತಿಸಿದ್ದಾರೆ.


ಪದವಿ ಕಾಲೇಜುಗಳಿಗೆ ಶುಲ್ಕ ನಿಗದಿ ಮಾಡಲು ಸರಕಾರದ ಮಟ್ಟದಲ್ಲಿ ಸಮಿತಿ ಇಲ್ಲ. ಹೀಗಾಗಿ, ಕೆಲ ಕಾಲೇಜುಗಳು ಇದನ್ನೇ ದುರುಪಯೋಗ ಮಾಡಿಕೊಳ್ಳುತ್ತಿವೆ. ಸಮಿತಿ ಇಲ್ಲ ಎಂದ ಮಾತ್ರಕ್ಕೆ ದುಬಾರಿ ಶುಲ್ಕ ವಿಧಿಸುವ ಹಾಗಿಲ್ಲ ಎಂದ ಸಚಿವರು, ಪದವಿ ಕಾಲೇಜುಗಳಿಗೆ ಅಕ್ಟೋಬರ್ 1 ರವರೆಗೂ ದಾಖಲು ಆಗಬಹುದು. ಅದಕ್ಕೆ ಅವಕಾಶ ನೀಡಲಾಗಿದೆ ಎಂದರು.

Recommended Video

ದಾಖಲೆ ಬರೆದ್ರೂ ಯೆಲ್ಲೋ ಕಾರ್ಡ್ ಪಡೆದು ನೆಕ್ಸ್ಟ್ ಮ್ಯಾಚ್ ನಿಂದ ಔಟಾದ ರೊನಾಲ್ಡೊ | Oneindia Kannada
ಕೊರೊನಾ ಸೋಂಕಿತ ವಿದ್ಯಾಥಿಗಳಿಗೂ ಸಿಇಟಿ!

ಕೊರೊನಾ ಸೋಂಕಿತ ವಿದ್ಯಾಥಿಗಳಿಗೂ ಸಿಇಟಿ!

ರಾಜ್ಯದಲ್ಲಿ ಒಟ್ಟು 2,01,816 ಅಭ್ಯರ್ಥಿಗಳು ಸಿಇಟಿ ಪರೀಕ್ಷೆಗೆ ನೋಂದಾಯಿಸಿದ್ದರು, ಅವರಲ್ಲಿ ಭೌತಶಾಸ್ತ್ರಕ್ಕೆ 1,93,588 ಮತ್ತು ರಸಾಯನಶಾಸ್ತ್ರಕ್ಕೆ 1,93,522 ಹಾಜರಾಗಿದ್ದರು. ಆ ಪೈಕಿ ಕೋವಿಡ್ ಪಾಸಿಟಿವ್ ಇರುವ 12 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 12 ಸೋಂಕಿತ ವಿದ್ಯಾರ್ಥಿಗಳ ಪೈಕಿ 10 ವಿದ್ಯಾರ್ಥಿಗಳಲ್ಲಿ ಬೆಂಗಳೂರಿನಲ್ಲಿ ಹಾಗೂ ಕೋಲಾರ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ತಲಾ ಒಬ್ಬ ವಿದ್ಯಾರ್ಥಿ ಸಿಇಟಿ ಬರೆದಿದ್ದರು. ಆ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿತ್ತು.


ರಾಜ್ಯಾದ್ಯಂತ 530 ಪರೀಕ್ಷಾ ಕೇಂದ್ರಗಳ ಪೈಕಿ 86 ಕೇಂದ್ರಗಳು ಬೆಂಗಳೂರಿನಲ್ಲಿದ್ದವು. ಉಳಿದ ಜಿಲ್ಲೆಗಳಲ್ಲಿ ಒಟ್ಟು 444 ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿತ್ತು. ಹೊರನಾಡು ಮತ್ತು ಗಡಿನಾಡು ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯನ್ನು ಅಗಸ್ಟ್ 30ರಂದು ಬೆಂಗಳೂರು, ಬೀದರ್, ವಿಜಯಪುರ, ಬಳ್ಳಾರಿ, ಬೆಳಗಾವಿ ಮತ್ತು ಮಂಗಳೂರು ಕೇಂದ್ರಗಳಲ್ಲಿ ಮಾತ್ರ ನಡೆಸಲಾಗಿತ್ತು. ಅಲ್ಲಿ ಒಟ್ಟು 1682 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

English summary
KCET 2021 results on Sep 20 as announced earlier, Decision on engineering fees after the meeting said Dr.C.N. Ashwatha Narayana. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X