ಕರ್ನಾಟಕ ಸಿಇಟಿ ಪರೀಕ್ಷೆಗೆ ಸಕಲ ರೀತಿಯಲ್ಲೂ ಸಜ್ಜು-ಡಾ ಅಶ್ವಥ್ ನಾರಾಯಣ
ಬೆಂಗಳೂರು, ಜೂನ್ 15: ರಾಜ್ಯಾದ್ಯಂತ ಮೂರು ದಿನಗಳ ಕಾಲ ಸಿಇಟಿ ಪರೀಕ್ಷೆಗಳು ನಡೆಯಲಿವೆ. ಜೂನ್ 16, 17, 18 ರಂದು 3 ದಿನ ನಡೆಯಲಿದೆ ಸಿಇಟಿ ಪರೀಕ್ಷೆ ನಡೆಯಲಿದೆ. ಈ ಬಾರಿ ನೀಟ್ ಮಾದರಿಯಲ್ಲಿ ಸಿಇಟಿ ಪರೀಕ್ಷೆ ನಡೆಯಲಿದೆ.
ಮಲ್ಲೇಶ್ವರದ ಕರ್ನಾಟಕ ಪರೀಕ್ಷಾ ಪ್ರಧಿಕಾರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಈ ಬಾರೀ ಒಟ್ಟು 2,16,525 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದಾರೆ. ಹಾಲ್ ಟಿಕೆಟ್ ಡೌನ್ ಲೋಡ್ ಗೆ 4 ಬಾರಿ ಸಮಯ ವಿಸ್ತರಣೆ ಮಾಡಲಾಯ್ತು, ಎಲ್ಲರಿಗೂ ಪ್ರವೇಶ ಪತ್ರ ತಲುಪಿದೆ. ಗಡಿ ಭಾಗದ 6 ಜಿಲ್ಲೆಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಈ ಬಾರಿಯೂ ಅದೇ ರೀತಿ ಪರೀಕ್ಷೆ ನಡೆಯಲಿದೆ"''ಎಂದು ತಿಳಿಸಿದರು
486 ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ನಡೆಯಲಿದೆ. ಬೆಂಗಳೂರಿನಲ್ಲಿ 87 ಕೇಂದ್ರ, ಇತರೆ ಜಿಲ್ಲೆಗಳಲ್ಲಿ 399 ಕೇಂದ್ರಗಳ ನಿಗದಿಯಾಗಿದೆ.
ಕಳೆದ ವರ್ಷಕ್ಕಿಂದ ಈ ಬಾರೀ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದಾರೆ. ಒಟ್ಟು 486 ವೀಕ್ಷಕರು, 972 ವಿಶೇಷ ಜಾಗೃತ ದಳದ ಸದಸ್ಯರು, 486 ಪ್ರಶ್ನೆಪತ್ರಿಕೆ ಪಾಲಕರು, ಸುಮಾರು 9600 ಕೊಠಡಿ ಮೇಲ್ವಿಚಾರಕರು ಸೇರಿದಂತೆ ಒಟ್ಟಾರೆ 20,483 ಸಿಬ್ಬಂದಿಗಳು ಪರೀಕ್ಷಾ ಕಾರ್ಯಕ್ಕೆ ನಿಯೋಜನೆ ಮಾಡಲಾಗಿದೆ.

ಹೊರನಾಡು, ಗಡಿನಾಡು ಅಭ್ಯರ್ಥಿಗಳಿಗೆ ಕನ್ನಡ ಭಾಷೆ ಪರೀಕ್ಷೆ
ಹೊರನಾಡು ಮತ್ತು ಗಡಿನಾಡು ಅಭ್ಯರ್ಥಿಗಳಿಗೆ ಕನ್ನಡ ಭಾಷೆ ಪರೀಕ್ಷೆ ನಡೆಯಲಿದೆ. ಪರೀಕ್ಷೆಯನ್ನ ಬೆಂಗಳೂರು, ಬೀದರ್, ವಿಜಯಪುರ, ಬಳ್ಳಾರಿ, ಬೆಳಗಾವಿ ಮತ್ತು ಮಂಗಳೂರು ಕೇಂದ್ರಗಳಲ್ಲಿ ನಡೆಯಲಿದೆ. ಕನ್ನಡ ಭಾಷೆ ಪರೀಕ್ಷೆಗೆ ಒಟ್ಟು 1,708 ಅಭ್ಯರ್ಥಿಗಳು ನೊಂದಣಿ ಮಾಡಿಕೊಂಡಿದ್ದಾರೆ. ಸಿಇಟಿ ಪರೀಕ್ಷೆ ನಡೆದ ಒಂದು ತಿಂಗಳಲ್ಲಿ ಫಲಿತಾಂಶ ಪ್ರಕಟವಾಗಿದೆ ಎಂದು ಡಾ. ಅಶ್ವಥ್ ನಾರಾಯಣ ತಿಳಿಸಿದ್ದಾರೆ.

2,16,525 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ನೋಂದಣಿ
ಯಾವುದೇ ಧರ್ಮ ಸೂಚಕ ವಸ್ತ್ರ ಧರಿಸಿ ಸಿಇಟಿ ಪರೀಕ್ಷೆಗೆ ಬರುವಂತಿಲ್ಲ ಎಂದು ತಿಳಿಸಲಾಗಿದ್ದೂ ಹಿಜಾಬ್ ಧರಿಸುವಂತಿಲ್ಲ ಎಂದು ಪರೀಕ್ಷಾ ಪ್ರಾಧಿಕಾರ ಸೂಚನೆಯನ್ನು ನೀಡಿದೆ. ಆಭರಣಗಳು ಧರಿಸುವಂತಿಲ್ಲ, ಮೊಬೈಲ್, ಬ್ಲೂಟೂತ್, ಕೈಗಡಿಯಾರ ಸೇರಿದಂತೆ ಎಲೆಕ್ಟ್ರಾನಿಕ್ ಉಪಕರಣಗಳು ನಿಷೇಧ ವಿಧಿಸಲಾಗಿದ್ದು. 2,16,525 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು ಪರೀಕ್ಷೆಯನ್ನು ಬರೆಯಲಿದ್ದಾರೆ. ಕೆಸಿಇಟಿ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಹಲವು ನಿರ್ಬಂಧಗಳನ್ನು ವಿಧಿಸಲಾಗಿದ್ದು, ಅವುಗಳನ್ನೆಲ್ಲ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.* ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಬರಬೇಕು
* ಓಎಂಆರ್ ಉತ್ತರ ಪತ್ರಿಕೆಯಲ್ಲಿ ತಮ್ಮ ಹೆಸರು, ಸಿಇಟಿ ಸಂಖ್ಯೆ, ಪ್ರಶ್ನೆ ಪತ್ರಿಕೆಯ ವರ್ಶನ್ ಕೋಡ್ ನಮೂದಿಸಬೇಕು.
* ಮೊದಲ ಗಂಟೆ ಬಾರಿಸಲಿರುವ ನಿಗದಿತ ಅವಧಿಗಿಂತಲೂ ಅರ್ಧ ಗಂಟೆ ಮುಂಚೆ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು.
* ವಿದ್ಯಾರ್ಥಿಗಳು ತಮ್ಮ ಪ್ರವೇಶಪತ್ರ (ಅಡ್ಮಿಶನ್ ಟಿಕೆಟ್) ಮತ್ತು ಯಾವುದಾದರೂ ಒಂದು ಸೂಕ್ತ ಗುರುತಿನ ಪತ್ರವನ್ನು ತರಬೇಕು (ಕಾಲೇಜಿನ ಗುರುತುಪತ್ರ, ಬಸ್ ಪಾಸ್, ಡ್ರೈವಿಂಗ್ ಲೈಸೆನ್ಸ್, ಆಧಾರ್/ಪ್ಯಾನ್ ಕಾರ್ಡ್, ದ್ವಿತೀಯ ಪಿಯುಸಿ/12ನೇ ತರಗತಿಯ ಪ್ರವೇಶ ಪತ್ರ ಇತ್ಯಾದಿಗಳ ಪೈಕಿ ಒಂದು).
* ಯಾವುದೇ ತರಹದ ಕೈಗಡಿಯಾರಗಳನ್ನು ಕಟ್ಟಿಕೊಂಡು ಬರುವಂತಿಲ್ಲ.
* ಟ್ಯಾಬ್, ಮೊಬೈಲ್, ಕ್ಯಾಲ್ಕುಲೇಟರುಗಳನ್ನು ಪರೀಕ್ಷಾ ಕೇಂದ್ರಕ್ಕೆ ತರುವಂತಿಲ್ಲ ಎಂದು ತಿಳಿಸಲಾಗಿದೆ

ಪರೀಕ್ಷೆಗೆ ಕೇಂದ್ರದ ಸುತ್ತ 144 ಸೆಕ್ಷನ್ ಜಾರಿ
ಪಿಎಸ್‌ಐ ನೇಮಕಾತಿ ಹಗರಣ ದಿಂದ ಎಚ್ಚೆತ್ತಿರುವ ಪರೀಕ್ಷಾ ಪ್ರಾಧಿಕಾರ ಕೆಲವು ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ಶಿಕ್ಷಕರ ನೇಮಕಾತಿ ಪರೀಕ್ಷಾ ಸಮಯದಲ್ಲಿ ತೆಗೆದುಕೊಂಡಂತೆ ಕೆಲವು ಭದ್ರತಾ ಕ್ರಮಗಳು ಮತ್ತು ವಿದ್ಯಾರ್ಥಿಗಳನ್ನು ಪರೀಕ್ಷಿಸುವ ವಿಧಾನವನ್ನು ಅನುಸರಿಸಲಾಗುತ್ತಿದೆ. ಪರೀಕ್ಷಾ ಕೇಂದ್ರಗಳ ಬಳಿ ಜಾಮರ್, ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡಲಾಗುತ್ತದೆ. ಪರೀಕ್ಷಾ ಕೇಂದ್ರದ ಸುತ್ತಲು 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಜೆರಾಕ್ಸ್ ಅಂಗಡಿಗಳನ್ನ ಮುಚ್ಚುವುದು ಕಡ್ಡಾಯ ಮಾಡಲಾಗಿದೆ.

ಮೂರು ದಿನಗಳು ನಡೆಯಲಿರು ಸಿಇಟಿ ಪರೀಕ್ಷೆ
16-6-22ರಂದು-10.30 ರಿಂದ 11.30 - ಜೀವಶಾಸ್ತ್ರ
16-6-22 ರಂದು 2.30 ರಿಂದ 3.30-ಗಣಿತ
17-6-22ರಂದು 10.30 ರಿಂದ 11.30- ಭೌತಶಾಸ್ತ್ರ
17-6-22ರಂದ 2.30 ರಿಂದ 3.30-ರಸಾಯನಶಾಸ್ತ್ರ
18-6-22ರಂದು-10.30 ರಿಂದ 11.30-ಹೊರನಾಡ ಕನ್ನಡಿಗರಿಗೆ, ಕನ್ನಡ ಪರೀಕ್ಷೆ
ಇನ್ನು ಇದೇ ಸಮಯದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣರವರಿಗೆ ಸಹಾಯಕ ಪ್ರಾಧ್ಯಪಕರ ನೇಮಕಾತಿ ಪರೀಕ್ಷೆ ಅಕ್ರಮದ ಬಗ್ಗೆ ಕೇಳಲಾದ ಪ್ರಶ್ನೆಗೆ ""ಸಹಾಯಕ ಪ್ರಾಧ್ಯಾಪಕ ಪರೀಕ್ಷೆ ವಿಚಾರ ಕೋರ್ಟ್‌ನಲ್ಲಿದೆ ಸದ್ಯ ಈ ಬಗ್ಗೆ ಚರ್ಚಿಸೋದು ಸೂಕ್ತವಲ್ಲ'' ಎಂದು ಉತ್ತರಿಸಿದರು.
Recommended Video
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications