KEA: KCET 25 ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ, ಆಪ್ಷನ್‌ಗೆ ಜುಲೈ 22 ಕೊನೆ ದಿನಾಂಕ
ಬೆಂಗಳೂರು, ಜುಲೈ 19: ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ-ಯುಜಿ (UGCET 2025/KCET) ಪರೀಕ್ಷೆ ಬರೆದು ಫಲಿತಾಂಶವನ್ನೂ ನೋಡಿದ ಅಭ್ಯರ್ಥಿಗಳು ಸೀಟು ಹಂಚಿಕೆಗೆ, ಕಾಲೇಜಿಗೆ ವರದಿ ಮಾಡಿಕೊಳ್ಳಲು ಕಾಯುತ್ತಿದ್ದಾರೆ. ಈ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ ಸೂಚನೆ ನೀಡಿದೆ. ಆಪ್ಷನ್ ದಾಖಲಿಸಲು ಅವಧಿ ವಿಸ್ತರಣೆ ಮಾಡಿದೆ. ಪ್ರಾಧಿಕಾರದ ಸೂಚನೆ ಪಾಲಿಸುವಂತೆ ಹೇಳಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಶುಕ್ರವಾರ ನೀಡಿರುವ ಮಾಹಿತಿಯಂತೆ UGCET-25 ಪರೀಕ್ಷೆ ಬರೆದ ಅರ್ಹರು ಎಂಜಿನಿಯರಿಂಗ್, ದಂತ ವೈದ್ಯಕೀಯ, ಪಶು ವೈದ್ಯಕೀಯ, ಕೃಷಿ ವಿಜ್ಞಾನ, ಬಿಎಸ್ ಸಿ ನರ್ಸಿಂಗ್, ಬಿಪಿಟಿ, ಬಿಪಿಒ, ಎಎಚ್ಎಸ್ ಕೋರ್ಸ್ ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ ದಾಖಲಿಸುವಂತೆ ಸೂಚನೆ ನೀಡಲಾಗಿದೆ. ಆಪ್ಷನ್ ದಾಖಲಿಸಲು ಕೆಇಎ ಜುಲೈ 22 ರವರೆಗೆ ದಿನಾಂಕ ವಿಸ್ತರಣೆ ಮಾಡಿದೆ. ಅದರೊಳಗೆ ಎಚ್ಚರಿಕೆಯಿಂದ ದಾಖಲಿಸುವಂತೆ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು ಹೇಳಿದರು.

ಈ ಮೇಲಿನ ಕೋರ್ಸ್ ಗಳ ಸೀಟ್ ಮ್ಯಾಟ್ರಿಕ್ಸ್ ಬಂದಿದ್ದು ಜುಲೈ 8ರಿಂದ ಆಪ್ಷನ್ಸ್ ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅವಕಾಶ ನೀಡಲಾಗಿದೆ. ವೈದ್ಯಕೀಯ, ಆಯುರ್ವೇದ, ಹೋಮಿಯೋಪತಿ ಮತ್ತು ಯುನಾನಿ, ಫಾರ್ಮಸಿ ಕೋರ್ಸ್ ಗಳ ಸೀಟ್ ಮ್ಯಾಟ್ರಿಕ್ಸ್ ಬಂದ ನಂತರ ಅವುಗಳಿಗೂ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಈ ಕೂಡಲೇ ದಾಖಲಿಸಬೇಕು.
ಇನ್ನೂ ಜುಲೈ 22ರಂದು ಕೊನೆ ದಿನಾಂಕದವರೆಗೆ ಎಷ್ಟು ಬಾರಿಯಾದರೂ ಇಚ್ಛೆ/ಆಯ್ಕೆಗಳನ್ನು ಬದಲಿಸಿಕೊಳ್ಳಬಹುದು. ಆದರೆ ಅಂತಿಮವಾಗಿ ಬದಲಿಸಿದ್ದು ಮಾತ್ರ ಸೀಟು ಹಂಚಿಕೆಗೆ ಪರಿಗಣಿಸಲಾಗುತ್ತದೆ. ಸರ್ಕಾರ ನಿಗದಿಪಡಿಸಿರುವ ಪ್ರತಿ ಕೋರ್ಸ್ ಗಳ ಶುಲ್ಕದ ವಿವರಗಳನ್ನು https://cetonline.karnataka.gov.in/kea/ugcet2025 ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಶುಲ್ಕ ವಿನ್ಯಾಸದಲ್ಲಿ ಏನಾದರು ಬದಲಾವಣೆಗಳು ಆದರೂ ಸಹಿತ ಅದನ್ನು ಕೆಇಎ ವೆಬ್ ಸೈಟ್ ನಲ್ಲಿ ಹಾಕಲಾಗುವುದು. ಅಭ್ಯರ್ಥಿಗಳು ಮೇಲಿಂದ ಮೇಲೆ ವೆಬ್ ಸೈಟ್ ನೋಡುವುದು ಉತ್ತಮ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












Click it and Unblock the Notifications