ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

''ಪಿಯುಸಿ ಪರೀಕ್ಷೆ ರದ್ದಾದರೂ ಸಿಇಟಿ ನಡೆಸುತ್ತೇವೆ'' - ಡಿಸಿಎಂ ಅಶ್ವತ್ಥ್ ನಾರಾಯಣ

|
Google Oneindia Kannada News

ಬೆಂಗಳೂರು, ಜೂ. 05: ''ರಾಜ್ಯದಲ್ಲಿ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿದ್ದರೂ ಸಿಇಟಿ ಪರೀಕ್ಷೆ ನಡೆಯಲಿದೆ. ಸಿಇಟಿಯನ್ನೂ ರದ್ದು ಮಾಡಿದರೆ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಲಿದೆ ಎಂಬ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ'' ಎಂದು ಉಪ ಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ, ''ಸಿಇಟಿ ಅಂಕ ಆಧರಿಸಿ ಮೆಡಿಕಲ್, ಇಂಜಿನಿಯರಿಂಗ್​, ಡೆಂಟಲ್ ಸೀಟ್​ಗಳನ್ನು ಹಂಚಲಾಗುತ್ತದೆ. ಸಿಇಟಿ ನಡೆಸದೆಯೇ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಬಹುದಿತ್ತು. ಆದರೆ ಇದರಿಂದಾಗಿ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಸಮಸ್ಯೆಯಾಗಲಿದೆ'' ಎಂದು ಅಭಿಪ್ರಾಯಿಸಿದರು.

"ಎಸ್ಎಸ್ಎಲ್‌ಸಿ ಅಂಕಗಳನ್ನು ಪರಿಗಣಿಸಿ ದ್ವಿತೀಯ ಪಿಯು ಫಲಿತಾಂಶ''

ಇನ್ನು ''ಈಗಾಗಲೇ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಈ ಕಾರಣದಿಂದಾಗಿ ಮೆಡಿಕಲ್, ಎಂಜಿನಿಯರಿಂಗ್ ಸೀಟ್ ಪಡೆಯಲು ಪರೀಕ್ಷೆ ನಡೆಸುವುದು ಅತ್ಯವಶ್ಯಕವಾಗಿದೆ. ಈ ಬಗ್ಗೆ ಸಂಬಂಧಿತ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುವುದು'' ಎಂದು ಹೇಳಿದ್ದಾರೆ.

KCET Exam 2021 will be held even if 2nd PU exams canceled in Karnataka says DCM Ashwathth Narayana

''ಈ ಹಿಂದೆ ಮೆಡಿಕಲ್, ಡೆಂಟಲ್ ಹಾಗೂ ಎಂಜಿನಿಯರಿಂಗ್ ಸೀಟ್ ಹಂಚಿಕೆ ಆಯ್ಕೆ ಮಾಡಲು ಕನಿಷ್ಠ ಅಂಕ ನಿಗದಿ ಮಾಡಲಾಗಿತ್ತು. ಆದರೆ ಈ ಬಾರಿ ಕನಿಷ್ಠ ಅಂಕ ನಿಗದಿಯಿಂದ ತೊಂದರೆ ಉಂಟಾಗುವುದು ಬೇಡ ಎಂಬ ದೃಷ್ಟಿಯಿಂದ ಸಿಇಟಿ ಅಂಕವನ್ನು ಮಾತ್ರ ಪರಿಗಣನೆ ಮಾಡಲು ಈಗಾಗಲೇ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಲಹೆ ನೀಡಿದ್ದಾರೆ. ಅವರ ಸಲಹೆ ಸರಿಯಾಗಿದೆ. ಈ ಹಿನ್ನೆಲೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು'' ಎಂದು ಡಿಸಿಎಂ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆ ರದ್ದು

''ಸಾಮಾನ್ಯವಾಗಿ ದ್ವಿತೀಯ ಪಿಯು ಅಂಕಗಳನ್ನು ಸಿಇಟಿ ಪರೀಕ್ಷೆಗೆ ಪರಿಗಣಿಸಿ ಸೂಕ್ತ ಫಲಿತಾಂಶ ನೀಡಲಾಗುತ್ತದೆ. ಈ ಬಾರಿಯ ಗ್ರೇಡಿಂಗ್ ಫಲಿತಾಂಶವು ವಿದ್ಯಾರ್ಥಿಗಳ ಪ್ರತಿಭೆಯನ್ನು ಖಚಿತವಾಗಿ ವ್ಯಕ್ತಪಡಿಸಿದರೂ ಅವರಿಗೆ ಅದನ್ನು ನಿರಾಕರಿಸಿ ಇನ್ನೊಮ್ಮೆ ಪರೀಕ್ಷೆ ಬರೆಯುವ ಅವಕಾಶವನ್ನು ಕಲ್ಪಿಸಲಾಗಿದೆ. ಈ ನಿಟ್ಟಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶವನ್ನು ಸಿಇಟಿ ಪರೀಕ್ಷೆಗೆ ಗಣನೆಗೆ ತೆಗೆದುಕೊಳ್ಳುವ ಸಂದರ್ಭ ಈ ಫಲಿತಾಂಶವನ್ನು ಪ್ರಶ್ನಿಸಿ ಇನ್ನೊಮ್ಮೆ ಪರೀಕ್ಷೆ ಬರೆಯಲಿಚ್ಚಿಸುವ ವಿದ್ಯಾರ್ಥಿಗಳಿಗೆ ಅನನುಕೂಲವಾಗಬಹುದು ಎಂಬುದನ್ನು ಗಮನಿಸಬೇಕಾಗುತ್ತದೆ. ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ಈ ಬಾರಿಗೆ ಸೀಮಿತಗೊಂಡಂತೆ ತಮ್ಮ ಇಲಾಖೆಯು ನಡೆಸಲು ಉದ್ದೇಶಿಸಿರುವ ವೃತ್ತಿಪರ ಕೋರ್ಸ್ ದಾಖಲಾತಿಗೆ ಸಂಬಂಧಿಸಿದ ಸಿಇಟಿ ಪರೀಕ್ಷೆಗೆ ವೇಟೇಜ್ ನೀಡುವ ಪ್ರಕ್ರಿಯೆಯನ್ನು ಕೈಬಿಟ್ಟು ಕೇವಲ ಸಿಇಟಿ ಪರೀಕ್ಷೆಗಳ ಅಂಕಗಳನ್ನು ಮಾತ್ರ ರ್‍ಯಾಕಿಂಗ್‌ಗೆ ಪರಿಗಣಿಸುವ ತೀರ್ಮಾನವನ್ನು ತೆಗೆದುಕೊಳ್ಳಬೇಕು'' ಎಂದು ಸುರೇಶ್‌ ಕುಮಾರ್‌ ಪತ್ರದ ಮೂಲಕ ಅಶ್ವತ್ಥ್ ನಾರಾಯಣ ಬಳಿ ಮನವಿ ಮಾಡಿಕೊಂಡಿದ್ದಾರೆ.

Recommended Video

ಯಾರದ್ದೋ ಜಾಗ ನನ್ನದು ಎನ್ನುತ್ತಿದ್ದಾರಂತೆ ಸಾರಾ ಮಹೇಶ್ | Oneindia Kannada

(ಒನ್ಇಂಡಿಯಾ ಸುದ್ದಿ)

English summary
KCET Exam 2021 will be held even if 2nd PU exams canceled in Karnataka says DCM Ashwathth Narayana,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X